Homeಕರ್ನಾಟಕಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

- Advertisement -
- Advertisement -

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ವಿಧಾನಸಭೆಯಲ್ಲಿ ಲಿಖಿತ ಉತ್ತರ ಪ್ರಕ್ರಿಯೆ ಕೈಗೆತ್ತಿಕೊಂಡ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, 230 ಲಿಖಿತ ಮೂಲಕ ಪ್ರಶ್ನೆಗಳ ಪೈಕಿ ಕೇವಲ 84ಕ್ಕೆ ಉತ್ತರಗಳನ್ನು ಮಂಡಿಸಿದರು.

ಈ ವೇಳೆ ಎದ್ದು ನಿಂತ ವಿಪಕ್ಷ ನಾಯಕ ಆರ್‌. ಅಶೋಕ್, ಯಾವ ರೀತಿಯಲ್ಲಿ ಲೆಕ್ಕ ಹಾಕಿದರೂ ಶೇಕಡ 50ರ ಗಡಿ ದಾಟಿಲ್ಲ. ಈ ಹಿಂದೆ ನಾಲ್ಕು ಬಾರಿ ಎಚ್ಚರಿಕೆ ಕೊಡಲಾಗಿದೆ. ಇವತ್ತು ಐದನೇ ಬಾರಿ ಎಚ್ಚರಿಕೆ ಕೊಟ್ಟು ಬಿಡಿ, ಅದೊಂದು ದಾಖಲೆಯಾಗಲಿ ಎಂದರು. ಸಭಾಧ್ಯಕ್ಷರ ಈ ಹಿಂದಿನ ಆದೇಶಗಳಿಗೆ ಸರ್ಕಾರ ಯಾವುದೇ ಬೆಲೆ ಕೊಟ್ಟಿಲ್ಲ. ಅಧಿಕಾರಿಗಳು ನಿತ್ಯ ದೇವರ ರೀತಿ ಬಂದು ಕುಳಿತುಕೊಳ್ಳುತ್ತಾರೆ. ಆನಂತರ ದೇವರಂತೆ ಎದ್ದು ಮನೆಗೆ ಹೋಗುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್, ಇದಕ್ಕೊಂದು ಪರಿಹಾರ ಕಂಡು ಹಿಡಿಯೋಣ ಎಂದರು. ಆಡಳಿತ ಪಕ್ಷವನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಈಗಾಗಲೇ ಹೇಳಿದ್ದೇನೆ. ಈ ಅಧಿವೇಶನ ನಡೆಯುವುದು ಸಚಿವರಿಗಾಗಿ ಅಲ್ಲ, ಶಾಸಕರಿಗಾಗಿ. ಸಚಿವರು ಯಾವಾಗ ಬೇಕಾದರು ಚರ್ಚೆ ಮಾಡಬಹುದು. ಆದರೆ, ಶಾಸಕರು ಮೂರು ತಿಂಗಳಿಗೊಮ್ಮೆ ಬಂದು ಅವರ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳಬೇಕಿದೆ” ಎಂದರು.

ಮುಂದುವರಿದು, ಈ ಹಿಂದೆ ಹಲವು ಬಾರಿ ಎಚ್ಚರಿಕೆ ಕೊಟ್ಟರೂ ಯಾವುದೇ ಸುಧಾರಣೆಯಾದಂತೆ ಕಾಣುತ್ತಿಲ್ಲ ಎಂದು ಹೇಳಿದರು. ಈ ರೀತಿಯಾದರೆ ಎಲ್ಲಾ ಸದಸ್ಯರು ಮೆಚ್ಚುವಂತೆ ಸದನ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು. ಆದ್ದರಿಂದ ಸಂಬಂಧಪಟ್ಟ ಸಚಿವರು ಮತ್ತು ಕಾರ್ಯದರ್ಶಿಗಳು ಏಕೆ ಹೀಗಾಯಿತು ಎಂದು ಹೇಳುವವರೆಗೆ ನಾನು ಸದನವನ್ನು ನಡೆಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸದನವನ್ನು ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...