Homeಮುಖಪುಟರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

- Advertisement -
- Advertisement -

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ.ಪಿ ನಡ್ಡಾ ಅವರು, ವಿರೋಧ ಪಕ್ಷವು “ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ” ಸರ್ಕಾರದೊಂದಿಗೆ ನಿಲ್ಲುವ ಬದಲು “ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕರೂ ಆಗಿರುವ ಖರ್ಗೆ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್‌ಪಿಜಿ ಬಿಕ್ಕಟ್ಟಿನಿಂದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಬಡವರು ಮತ್ತು ದುರ್ಬಲರು, ಮಧ್ಯಮ ವರ್ಗ, ಸಾಮಾನ್ಯ ಮನೆಗಳು, ರೆಸ್ಟೋರೆಂಟ್‌ಗಳು, ಹಾಸ್ಟೆಲ್‌ಗಳು ಮತ್ತು ವಾಣಿಜ್ಯ ಬಳಕೆದಾರರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದರು.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಂಡಾಗ, ಸರ್ಕಾರವು ಭಾರತೀಯ ನಾಗರಿಕರಿಗೆ ಸಲಹೆ ನೀಡಿತ್ತು ಮತ್ತು ಅಂದಿನಿಂದ, ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಸರ್ಕಾರಕ್ಕೆ ತಿಳಿದಿತ್ತು. ಆದರೆ ಇದರ ಹೊರತಾಗಿಯೂ, ಯಾವುದೇ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಂಡಿಲ್ಲ. ಪರಿಣಾಮವಾಗಿ, ದೇಶದ ಅನೇಕ ವಲಯಗಳು ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಆರೋಪಿಸಿದರು.

“ಈ ಬಿಕ್ಕಟ್ಟು ಸರ್ಕಾರದ ಕರುಣಾಜನಕ ನಿರ್ವಹಣೆ ಮತ್ತು ದೋಷಪೂರಿತ ವಿದೇಶಾಂಗ ನೀತಿಯನ್ನು ಬಹಿರಂಗಪಡಿಸಿದೆ” ಎಂದ ಅವರು, ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಪ್ಪು ಮಾರುಕಟ್ಟೆಯಲ್ಲಿ ಪ್ರತಿ ಸಿಲಿಂಡರ್‌ಗೆ 5,000 ರೂ.ಗಳವರೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು. 

ಸರ್ಕಾರವು ಈ ವಿಷಯದ ಬಗ್ಗೆ ತಕ್ಷಣವೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮತ್ತು ಎಲ್ಲಾ ಸಣ್ಣ ವ್ಯಾಪಾರಿಗಳಿಗೆ ಕೈಗೆಟುಕುವ ಬೆಲೆಯಲ್ಲಿ ಸಿಲಿಂಡರ್‌ಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ದೇಶದಲ್ಲಿ ಎಲ್‌ಪಿಜಿ ಕೊರತೆಯಿಲ್ಲ ಎಂಬ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೇಳಿಕೆಯನ್ನು ಅವರು ಅಲ್ಲಗಳೆದರು ಮತ್ತು ಜನರು ವದಂತಿಗಳಿಂದ ದೂರವಿರಲು ಸಲಹೆ ನೀಡಿದರು, ಹಾಗೂ ವಾಸ್ತವವು ವಿಭಿನ್ನವಾಗಿದೆ ಎಂದು ಹೇಳಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...