Homeಮುಖಪುಟ'ಹೇಡಿತನದ, ಅವಿವೇಕದ ಹಿಂಸಾಚಾರ': 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

- Advertisement -
- Advertisement -

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯೊಂದರಲ್ಲಿ ಈ ಕೃತ್ಯವನ್ನು “ಹೇಡಿತನ ಮತ್ತು ಅವಿವೇಕಿ” ಎಂದು ಕರೆದಿದ್ದು, ಪಾಕಿಸ್ತಾನವು “ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಂತೆ ಬಿಂಬಿಸಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದೆ.

“ಇದು ಹೇಡಿತನ ಮತ್ತು ವಿವೇಚನೆಯಿಲ್ಲದ ಹಿಂಸಾಚಾರವಾಗಿದ್ದು, ಮಿಲಿಟರಿ ಗುರಿಯಾಗಿ ಸಮರ್ಥಿಸಲಾಗದ ಸೌಲಭ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಪಾಕಿಸ್ತಾನ ಈಗ ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಂತೆ ಬಿಂಬಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೆರೆಹೊರೆಯವರ ನಡುವಿನ ಸಂಘರ್ಷದಲ್ಲಿ ತೀವ್ರ ಏರಿಕೆ ಕಂಡುಬರುತ್ತಿರುವಂತೆ ಕಂಡುಬರುತ್ತಿರುವಂತೆ, ಅಫ್ಘಾನ್ ತಾಲಿಬಾನ್ ಸರ್ಕಾರದ ವಕ್ತಾರರು ಮಂಗಳವಾರ, ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಆದರೆ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ ಈ ಹೇಳಿಕೆಯನ್ನು ಸುಳ್ಳು ಮತ್ತು ದಾರಿತಪ್ಪಿಸುವಂತದ್ದು ಎಂದು ತಿರಸ್ಕರಿಸಿದೆ. ಸೋಮವಾರ ರಾತ್ರಿ “ಮಿಲಿಟರಿ ಸ್ಥಾಪನೆಗಳು ಮತ್ತು ಭಯೋತ್ಪಾದಕ ಬೆಂಬಲಿಸುವ ಮೂಲಸೌಕರ್ಯಗಳನ್ನು ನಿಖರವಾಗಿ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ” ಎಂದು ಹೇಳಿಕೊಂಡಿದೆ. 

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು 

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಇದು ಸುಳ್ಳು ಮತ್ತು ಜನರನ್ನು ದಾರಿ ತಪ್ಪಿಸುವ ಹೇಳಿಕೆ ಎಂದಿದೆ. ಸೋಮವಾರ (ಮಾ.16) ಕೇವಲ ಕಾಬೂಲ್ ಮತ್ತು ನಂಗಹಾರ್ ಪ್ರಾಂತ್ಯದ ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿರುವುದಾಗಿ ಅದು ತಿಳಿಸಿದೆ.

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಉಪ ವಕ್ತಾರ ಹಮ್ದುಲ್ಲಾ ಫಿತ್ರತ್ ಅವರ ಪ್ರಕಾರ, ಕಾಬೂಲ್‌ನ ‘ಉಮರ್ ವ್ಯಸನ ಮುಕ್ತಿ ಆಸ್ಪತ್ರೆ’ಯ (Omar Addiction Treatment Hospital) ಮೇಲೆ ಸ್ಥಳೀಯ ಕಾಲಮಾನ ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಪಾಕಿಸ್ತಾನ ದಾಳಿ ನಡೆಸಿದೆ.

ಆಸ್ಪತ್ರೆಯು 2,000 ಹಾಸಿಗೆಗಳ ಸಾಮರ್ಥ್ಯದ ಬೃಹತ್ ಆರೋಗ್ಯ ಸೌಲಭ್ಯವಾಗಿದ್ದು, ದಾಳಿಯಿಂದ ಆಸ್ಪತ್ರೆ ಕಟ್ಟಡದ ದೊಡ್ಡ ಭಾಗ ಸಂಪೂರ್ಣವಾಗಿ ಧ್ವಂಸಗೊಂಡಿದೆ ಎಂದು ಫಿತ್ರತ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ದುರದೃಷ್ಟವಶಾತ್, ಸಾವಿನ ಸಂಖ್ಯೆ ಇದುವರೆಗೆ 400ಕ್ಕೆ ತಲುಪಿದೆ. ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ರಕ್ಷಣಾ ತಂಡಗಳು ಪ್ರಸ್ತುತ ಸ್ಥಳದಲ್ಲಿದ್ದು, ಬೆಂಕಿ ನಂದಿಸಲು ಮತ್ತು ಬಲಿಪಶುಗಳ ಉಳಿದ ಮೃತದೇಹಗಳನ್ನು ಹೊರತೆಗೆಯಲು ಕೆಲಸ ಮಾಡುತ್ತಿವೆ” ಎಂದು ಫಿತ್ರತ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...