Homeಮುಖಪುಟಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17) ಸಮನ್ಸ್ ಜಾರಿ ಮಾಡಿದೆ ಎಂದು livelaw.in ವರದಿ ಮಾಡಿದೆ.

ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು ಈ ವಿಷಯದಲ್ಲಿ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಿಲ್ಲ. ತಾತ್ಕಾಲಿಕ ತಡೆಯಾಜ್ಞೆ ಅರ್ಜಿಯ ಮೇಲೆ ಕೇವಲ ನೋಟಿಸ್ ಮಾತ್ರ ಜಾರಿ ಮಾಡಿದ್ದಾರೆ ಎಂದು ವರದಿ ಹೇಳಿದೆ.

“ಆ ವರದಿಗೆ ತಡೆ ನೀಡುತ್ತೀರಾ ಎಂದು ನಾನು ಕೇಳುತ್ತಿದ್ದೇನೆ. ಯಾಕೆಂದರೆ, ಆ ಸುಳ್ಳು ಸುದ್ದಿಯಿಂದ ನಮಗೆ ನಿರಂತರವಾಗಿ ಕೆಟ್ಟ ಹೆಸರು ಬರುತ್ತಿದೆ. ಅದು ಸುಳ್ಳು ಸುದ್ದಿ ಎಂದು ಗೊತ್ತಿದ್ದರೂ ಸಹ, ಜನರು ಇನ್ನೂ ಅದರ ಬಗ್ಗೆಯೇ ಮಾತನಾಡುತ್ತಿದ್ದಾರೆ. ಇದರಿಂದ ನಮಗೆ ಹಾನಿಯಾಗುತ್ತಿದೆ” ಎಂದು ಕಾಂಗ್ರೆಸ್ ಪರ ವಕೀಲರಾದ ಮೊಹಮ್ಮದ್ ಅಲಿ ಖಾನ್ ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಆದರೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಲು ನಿರ್ಧರಿಸಿ, “ಇದನ್ನು ಅಧಿಕೃತವಾಗಿ ಸಿವಿಲ್ ಮೊಕದ್ದಮೆಯಾಗಿ ದಾಖಲಿಸಿಕೊಳ್ಳಿ. ಎಲ್ಲಾ ಮಾರ್ಗಗಳ ಮೂಲಕ ಪ್ರತಿವಾದಿಗಳಿಗೆ (ಅರ್ನಾಬ್ ಮತ್ತು ರಿಪಬ್ಲಿಕ್ ಟಿವಿ) ಸಮನ್ಸ್ ನೀಡಿ. ಅವರು 30 ದಿನಗಳ ಒಳಗೆ ಲಿಖಿತ ಉತ್ತರ ನೀಡಬೇಕು. ಹಾಗೆಯೇ, ವರದಿಗೆ ತಡೆ ನೀಡಬೇಕೆಂಬ (ಮಧ್ಯಂತರ ತಡೆಯಾಜ್ಞೆ) ಅರ್ಜಿಯ ಬಗ್ಗೆಯೂ ನೋಟಿಸ್ ನೀಡಿ. ಅದಕ್ಕೆ ಅವರು 4 ವಾರಗಳ ಒಳಗೆ ಪ್ರತಿಕ್ರಿಯಿಸಲಿ” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 19ಕ್ಕೆ ನಿಗದಿಪಡಿಸಲಾಗಿದೆ

ವಿವಾದಿತ ವರದಿಯು ಕಳೆದ ವರ್ಷದ ಮೇ ತಿಂಗಳಿನಲ್ಲಿ ಪ್ರಸಾರವಾಗಿತ್ತು. ಅರ್ನಾಬ್ ಗೋಸ್ವಾಮಿ ಅವರು ತಮ್ಮ ಕಾರ್ಯಕ್ರಮದಲ್ಲಿ, ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ‘ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್’ ಎಂಬ ಕಟ್ಟಡದ ದೃಶ್ಯಗಳನ್ನು ತೋರಿಸುತ್ತಾ, “ವೀಕ್ಷಕರೇ ನಿಮಗೆ ಗೊತ್ತೇ? ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ತನ್ನ ಅಂತಾರಾಷ್ಟ್ರೀಯ ಕಚೇರಿಯನ್ನು ಹೊಂದಿದೆ” ಎಂದು ಹೇಳಿದ್ದರು.

ನಂತರ, ರಿಪಬ್ಲಿಕ್ ಟಿವಿ ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಎಂದು ಒಂದು ಕಟ್ಟಡವನ್ನು ತಪ್ಪಾಗಿ ತೋರಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿತ್ತು.

ಡಿಜಿಟಲ್ ಡೆಸ್ಕ್‌ನ ವಿಡಿಯೋ ಎಡಿಟರ್ ಒಬ್ಬರು ತಾಂತ್ರಿಕ ದೋಷದಿಂದ ತಪ್ಪಾದ ಚಿತ್ರವನ್ನು ಬಳಸಿದ್ದಾರೆ ಎಂದು ವಾಹಿನಿ ಸಮರ್ಥಿಸಿಕೊಂಡಿತ್ತು.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ಕೋಶದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ಮೇ 22, 2025 ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

ದೂರಿನಲ್ಲಿ, ಬಿಜೆಪಿ ವಕ್ತಾರ ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ಅವರು ಸೇರಿಕೊಂಡು ಒಂದು ‘ಅಪರಾಧ ಮನೋಭಾವದ ಸಂಚು’ ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಟರ್ಕಿಯ ‘ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್’ ಅನ್ನು ಕಾಂಗ್ರೆಸ್ ಪಕ್ಷದ ಅಂತಾರಾಷ್ಟ್ರೀಯ ಕಚೇರಿ ಎಂದು ಬಿಂಬಿಸುವ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಹೇಳಲಾಗಿತ್ತು.

Courtesy :livelaw.in

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...