Homeಕರ್ನಾಟಕ'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಏಕಸದಸ್ಯ ಪೀಠವು, ಮಹಿಳೆ ಒಮ್ಮೆ ‘ಜೈ ಬಾಂಗ್ಲಾ’ ಎಂದು ಹೇಳಿದ ನಂತರ ಮೂರು ಬಾರಿ ‘ಜೈ ಭಾರತ್ ಮಾತಾ ಕಿ ಜೈ’ ಎಂದು ಹೇಳಿದ್ದಾರೆ ಎಂದಿದೆ. ಒಬ್ಬ ವ್ಯಕ್ತಿ ಮೊದಲು ಮಹಿಳೆಯನ್ನು ‘ಜೈ ಭಾರತ್ ಮಾತಾ ಕಿ ಜೈ’ ಎಂದು ಕೂಗುವಂತೆ ಪ್ರಚೋದಿಸಿದ್ದ ಎಂಬುವುದಾಗಿ ಮಾರ್ಚ್ 11ರಂದು ಹೊರಡಿಸಿದ ಜಾಮೀನು ಆದೇಶದಲ್ಲಿ ನ್ಯಾಯಾಲಯ ಹೇಳಿದೆ ಎಂದು livelaw.in ವರದಿ ಮಾಡಿದೆ.

ಮಹಿಳೆಗೆ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಇಬ್ಬರು ಸಣ್ಣ ಮಕ್ಕಳಿದ್ದಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯದ ತೃಪ್ತಿಗೆ ಅನುಗುಣವಾಗಿ 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಒಬ್ಬ ಸ್ಥಳೀಯ ಜಾಮೀನುದಾರರನ್ನು ಒದಗಿಸುವ ಷರತ್ತಿನ ಮೇಲೆ ಆಕೆಗೆ ಜಾಮೀನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯವು ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

2026ರ ಜನವರಿ 11ರಂದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ತುಣುಕಿನ ಆಧಾರದ ಮೇಲೆ, ಶೆಡ್‌ಗಳ ತೆರವು ಕಾರ್ಯಾಚರಣೆಯ ಸ್ಥಳದಲ್ಲಿ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152,196,197(1) ಮತ್ತು 353(1) ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕ್ರೈಂ ಸಂಖ್ಯೆ 23/2026 ರಂತೆ ಪ್ರಕರಣ ದಾಖಲಾಗಿತ್ತು. ಭಾರತೀಯರ ಭಾವನೆಗಳಿಗೆ ಧಕ್ಕೆ ತರುವ ಮತ್ತು ರಾಷ್ಟ್ರೀಯ ಏಕತೆ ಹಾಗೂ ಸಾರ್ವಭೌಮತೆಗೆ ಕುಂದು ತರುವ ಉದ್ದೇಶದಿಂದಲೇ ಮಹಿಳೆ ಈ ಘೋಷಣೆ ಕೂಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಮಹಿಳೆಯನ್ನು ಜನವರಿ 12 ರಂದು ಬಂಧಿಸಲಾಗಿದ್ದು, ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಇದಕ್ಕೂ ಮೊದಲು, ಆನೇಕಲ್‌ನ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಅರ್ಜಿದಾರರ ಪರ ವಕೀಲರು, ಆಕೆ ಹೆಬ್ಬಗೋಡಿಯಲ್ಲಿ ಮನೆಗೆಲಸ ಮಾಡುವ ಮಹಿಳೆಯಾಗಿದ್ದು, ಪ್ರಚೋದನೆಗೆ ಒಳಗಾಗಿ ಆ ಘೋಷಣೆಯನ್ನು ಕೂಗಿದ್ದಾರೆ ಎಂದು ವಾದಿಸಿದ್ದಾರೆ. ಆದರೆ, ಒಬ್ಬ ಭಾರತೀಯ ಪ್ರಜೆಯಾಗಿ ‘ಜೈ ಬಾಂಗ್ಲಾ’ ಘೋಷಣೆ ಕೂಗುವ ಮೂಲಕ ಭಾರತೀಯರ ಭಾವನೆಗಳಿಗೆ ಧಕ್ಕೆ ತರಬಾರದಿತ್ತು ಎಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ ಎಂದು livelaw.in ವರದಿ ವಿವರಿಸಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...