Homeಮುಖಪುಟಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

- Advertisement -
- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆಗೆ ಒಳಪಡಿಸಿದೆ ಎಂದು ವರದಿಯಾಗಿದೆ.

ವಿಚಾರಣೆಯ ಹಾಜರಾಗಲು ಅಂಬಾನಿ ಗುರುವಾರ ಬೆಳಿಗ್ಗೆ ಸಿಬಿಐ ಕೇಂದ್ರ ಕಚೇರಿಗೆ ತೆರಳಿದ್ದರು ಎಂದು ವರದಿ ಉಲ್ಲೇಖಿಸಿದೆ.

ಬ್ಯಾಂಕ್ ಕಂಪನಿಗೆ ನೀಡಿದ ಸಾಲದ ಹಣದಲ್ಲಿ ನಿಧಿ ದುರುಪಯೋಗ, ಅಕ್ರಮ ವರ್ಗಾವಣೆ ಮತ್ತು ಇತರ ಅವ್ಯವಹಾರಗಳು ನಡೆದಿವೆ ಎಂದು ಸಿಬಿಐ ಆರೋಪಿಸಿದೆ.

ಅನಿಲ್ ಅಂಬಾನಿ ಅವರ ವಕ್ತಾರರು ಗುರುವಾರ ಹೇಳಿಕೆಯೊಂದನ್ನು ನೀಡಿದ್ದು, “ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದ ವಿಚಾರಣೆಗಾಗಿ ಮಾರ್ಚ್ 19 ಮತ್ತು 20ರಂದು ದೆಹಲಿಯ ಸಿಬಿಐ ಮುಂದೆ ಅಂಬಾನಿ ಹಾಜರಾಗಲಿದ್ದಾರೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಎಲ್ಲಾ ತನಿಖಾ ಸಂಸ್ಥೆಗಳೊಂದಿಗೆ ಈ ವಿಷಯದಲ್ಲಿ ಸಂಪೂರ್ಣವಾಗಿ ಸಹಕರಿಸುವ ಅಂಬಾನಿ ಅವರ ಬದ್ಧತೆಯ ಮುಂದುವರಿದ ಭಾಗವಾಗಿ ವಿಚಾರಣೆ ಹಾಜರಾಗಿದ್ದಾರೆ” ಎಂದು ವಕ್ತಾರರು ತಿಳಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom)ಗೆ ನೀಡಲಾದ ಸಾಲದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಮಾರು2,929.05 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಎಸ್‌ಬಿಐ ನೀಡಿದ ದೂರಿನ ಮೇರೆಗೆ ಸಿಬಿಐ ಕಳೆದ ವರ್ಷ ಅಂದರೆ ಆಗಸ್ಟ್ 21, 2025ರಂದು ಅನಿಲ್ ಅಂಬಾನಿ ಮತ್ತು ಇತರರ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿತ್ತು.

ಅಪರಾಧಿಕ ಸಂಚು (Criminal Conspiracy), ವಂಚನೆ (Cheating) ಮತ್ತು ನಂಬಿಕೆ ದ್ರೋಹದ (Criminal Breach of Trust) ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿದೆ.

ಸಾಲದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಿದ್ದು (Fund Diversion), ನಕಲಿ ಸಾಲಗಾರರನ್ನು ಸೃಷ್ಟಿಸಿದ್ದು ಮತ್ತು ಅಂತರ-ಕಂಪನಿ ಸಾಲ ವಹಿವಾಟುಗಳ ಮೂಲಕ ಹಣ ವರ್ಗಾಯಿಸಿರುವ ಬಗ್ಗೆ ಸಿಬಿಐ ಶಂಕೆ ವ್ಯಕ್ತಪಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್‌ನಲ್ಲಿ ಮುಂಬೈನ ಕಫ್ ಪರೇಡ್‌ನಲ್ಲಿರುವ ಅಂಬಾನಿ ಅವರ ನಿವಾಸ ‘ಸೀ ವಿಂಡ್’ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿತ್ತು.

ಅನಿಲ್ ಅಂಬಾನಿ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ತಾನು ಆ ಸಮಯದಲ್ಲಿ ಕಂಪನಿಯ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದೆ ಮತ್ತು ದೈನಂದಿನ ನಿರ್ವಹಣೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...