Homeದಲಿತ್ ಫೈಲ್ಸ್ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ ಗ್ರಾಮಸ್ಥರು ಕುಟುಂಬ ಒಂದಕ್ಕೆ ಬಹಿಷ್ಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಪತ್ನಿ, ಮಗ ಮತ್ತು ಮೂವರು ಹೆಣ್ಣುಮಕ್ಕಳೊಂದಿಗೆ ವಾಸಿಸುವ ದಯಾನಿಧಿ ಗೌಡ ಅವರು ತಮ್ಮ ಮಕ್ಕಳ ಮದುವೆ ಖರ್ಚಿಗಾಗಿ ಸುಮಾರು ನಾಲ್ಕು ವರ್ಷಗಳ ಹಿಂದೆ ತಮ್ಮ ಜಮೀನಿನ ಒಂದು ಭಾಗವನ್ನು ಮಾರಾಟ ಮಾಡಿದ್ದರು. ಅವರ ಹಿರಿಯ ಮಗಳ ವಿವಾಹವಾಗಿದ್ದು, ಉಳಿದ ಮೂವರು ಮಕ್ಕಳ ವಿವಾಹದ ಮಾತುಕತೆ ಅಂತಿಮಗೊಂಡಿದೆ.

ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದು ಗ್ರಾಮಸ್ಥರಲ್ಲಿ ಕೋಪವನ್ನು ಹುಟ್ಟುಹಾಕಿದೆ ಎಂದು ವರದಿಯಾಗಿದೆ. ಪಂಚಾಯಿತಿ ನಡೆಸಿ ಗೌಡ ಅವರಿಗೆ 3,500 ರೂ. ದಂಡ ವಿಧಿಸಿದ್ದಾರೆ ಎಂದು ‘ಒರಿಸ್ಸಾ ಪೋಸ್ಟ್’ ವರದಿ ಮಾಡಿದೆ.

ದಂಡ ಪಾವತಿಸಿದ ಕುಟುಂಬ, ಭವಿಷ್ಯದಲ್ಲಿ ಹೊರಗಿನವರಿಗೆ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂಬ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಆದರೂ, ಮಾರ್ಚ್ 16, 2025 ರಂದು ಮತ್ತೊಂದು ಗ್ರಾಮ ಸಭೆಯನ್ನು ಕರೆಯಲಾಯಿತು. ಗ್ರಾಮಸ್ಥರು ಗೌಡ ಅವರಿಗೆ ಹೊಸದಾಗಿ 7 ಲಕ್ಷ ರೂ. ಅಥವಾ ಅದಕ್ಕೆ ಸಮಾನವಾದ ಭೂಮಿ ಕೊಡುವಂತೆ ಆಜ್ಞೆ ಮಾಡಿದ್ದಾರೆ. ಪಮಚಾಯಿತಿ ಆದೇಶವನ್ನು ಪಾಲಿಸಲು ಕುಟುಂಬ ವಿಫಲವಾದಾಗ, ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಲಾಯಿತು.

ಗ್ರಾಮದ ದೇವಸ್ಥಾನ, ಅಂಗಡಿಗಳು, ರಸ್ತೆ, ನೀರು ಮತ್ತು ಸಮುದಾಯ ಬೆಂಬಲದಂತಹ ಅಗತ್ಯ ಸೇವೆಗಳಿಗೆ ಪ್ರವೇಶವನ್ನು ನಿರಾಕರಿಸಲಾಯಿತು. ಇದರಿಂದಾಗಿ ಕುಟುಂಬವು ತೀವ್ರ ಮಾನಸಿಕ ಯಾತನೆ ಮತ್ತು ಸಾಮಾಜಿಕ ಪ್ರತ್ಯೇಕತೆಗೆ ಒಳಗಾಯಿತು.

ತಿಂಗಳುಗಳ ಕಾಲ ಪರಿಸ್ಥಿತಿಯನ್ನು ಸಹಿಸಿಕೊಂಡ ನಂತರ, ಗೌಡ ಮತ್ತು ಅವರ ಮಗ ಅನಿಲ್ ಕುಮಾರ್ ಗೌಡ ಅವರು ಕಬಿಸೂರ್ಯನಗರ ಪೊಲೀಸರನ್ನು ಸಂಪರ್ಕಿಸಿ ನ್ಯಾಯಕ್ಕಾಗಿ ದೂರು ದಾಖಲಿಸಿದ್ದಾರೆ. ಗ್ರಾಮಸ್ಥರು ವಿವಾದಿತ ಭೂಮಿಗೆ ಬೇಲಿ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಬಿಸೂರ್ಯನಗರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐಪಿಎಸ್ ಪ್ರೊಬೆಷನರ್ ನಿತೇಶ್ ಕುಮಾರ್ ಮಿಶ್ರಾ ಅವರು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...