Homeಅಂತರಾಷ್ಟ್ರೀಯಆಸ್ಕರ್ ನಾಮನಿರ್ದೇಶಿತ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಲನಚಿತ್ರದ ಪ್ರದರ್ಶನಕ್ಕೆ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ.

ಸಿನಿಮಾ ಇಸ್ರೇಲ್ ಸೈನಿಕರ ದೌರ್ಜನ್ಯವನ್ನು ವಿವರಿಸುವ ಕಾರಣ, ಇಸ್ರೇಲ್‌ನೊಂದಿಗೆ ಭಾರತ ಹೊಂದಿರುವ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದಿಂದ ಅದರ ಪ್ರದರ್ಶನವನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ತಡೆಹಿಡಿದಿದೆ ಎಂದು ವರದಿಗಳು ವಿವರಿಸಿವೆ.

ಟ್ಯುನೀಶಿಯಾದ ಚಲನಚಿತ್ರ ನಿರ್ದೇಶಕಿ ಕೌತರ್ ಬೆನ್ ಹನಿಯಾ ಅವರು ನಿರ್ದೇಶಿಸಿರುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್ ಡಾಕ್ಯುಡ್ರಾಮಾ (ಸಾಕ್ಷ್ಯಚಿತ್ರ ಮತ್ತು ನಾಟಕದ ಮಿಶ್ರಣ)’ ಈ ವರ್ಷದ ಆಸ್ಕರ್ ಪ್ರಶಸ್ತಿಯ (ಅಕಾಡೆಮಿ ಅವಾರ್ಡ್‌) ಅಂತಿಮ ಪಟ್ಟಿಗೆ ಆಯ್ಕೆಯಾಗಿತ್ತು.

ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿತ್ತು.

ಸೆಪ್ಟೆಂಬರ್ 3, 2025ರಂದು ವೆನಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೂಡ ಈ ಚಿತ್ರ ಪ್ರದರ್ಶನಗೊಂಡಿತ್ತು. ಆಗ ಪ್ರೇಕ್ಷಕರು ಸುಮಾರು 23 ನಿಮಿಷಗಳ ಕಾಲ ಎದ್ದು ನಿಂತು ಚಿತ್ರಕ್ಕೆ ಗೌರವ ಸೂಚಿಸಿದ್ದರು. ಈ ಮೂಲಕ ಚಿತ್ರ ಹೊಸ ದಾಖಲೆ ಬರೆದಿತ್ತು.

ಅಲ್ಲದೆ, ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಮತ್ತು ಇತರ ಆರು ಸಮಾನಾಂತರ ಬಹುಮಾನಗಳನ್ನು ಗೆದ್ದುಕೊಂಡಿತ್ತು. 2025ರ ಸೆಪ್ಟೆಂಬರ್ 10ರಂದು ಟುನೀಶಿಯಾದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರ, ನಂತರ ನವೆಂಬರ್ 26 ರಂದು ದಿ ಪಾರ್ಟಿ ಫಿಲ್ಮ್ ಸೇಲ್ಸ್‌ನಿಂದ ಫ್ರಾನ್ಸ್‌ನಲ್ಲಿ ಬಿಡುಗಡೆಗೊಂಡಿತ್ತು.

ಹಿಂದ್ ರಜಬ್ ಗಾಝಾದ ಆರು ವರ್ಷದ ಫ್ಯಾಲೆಸ್ತೀನ್ ಬಾಲಕಿ. 2024ರ ಜನವರಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಸಂದರ್ಭದಲ್ಲಿ ಈಕೆ ಜಗತ್ತಿನಾದ್ಯಂತ ಸುದ್ದಿಯಾಗಿದ್ದಳು.

ಜನವರಿ 29, 2024ರಂದು ಹಿಂದ್ ರಜಬ್ ತನ್ನ ಕುಟುಂಬದೊಂದಿಗೆ ಗಾಝಾ ನಗರದಿಂದ ಪಲಾಯನ ಮಾಡುವಾಗ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಸ್ರೇಲ್ ಸೇನೆ ಸುಮಾರು 300 ಸುತ್ತು ಗುಂಡುಗಳ ಭೀಕರ ದಾಳಿ ನಡೆಸಿತ್ತು.

ದಾಳಿಯಲ್ಲಿ ಕಾರಿನಲ್ಲಿದ್ದ ಕುಟುಂಬದ ಇತರ ಆರು ಸದಸ್ಯರು ತಕ್ಷಣ ಮೃತಪಟ್ಟಾಗ, ಬಾಲಕಿ ಹಿಂದ್ ಮಾತ್ರ ಬದುಕುಳಿದಿದ್ದಳು. ಸುಮಾರು ಮೂರು ಗಂಟೆಗಳ ಕಾಲ ಆಕೆ ತನ್ನವರ ಶವಗಳ ನಡುವೆ ಕಾರಿನಲ್ಲಿ ಸಿಲುಕಿಕೊಂಡಿದ್ದಳು. ಈ ಸಂದರ್ಭದಲ್ಲಿ ಆಕೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (ಪಿಆರ್‌ಸಿಎಸ್‌) ಫೋನ್ ಮಾಡಿ ತನ್ನನ್ನು ರಕ್ಷಿಸುವಂತೆ ಅಳುತ್ತಾ ಬೇಡಿಕೊಂಡಿದ್ದಳು.

ಆಕೆಯನ್ನು ರಕ್ಷಿಸಲು ಹೋದ ಪಿಆರ್‌ಸಿಎಸ್‌ನ ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ ಕೂಡಾ ದಾಳಿಯಲ್ಲಿ ಮೃತಪಟ್ಟಿದ್ದರು. ಸುಮಾರು 12 ದಿನಗಳ ನಂತರ ಹಿಂದ್ ರಜಬ್‌ಳ ಶವ ಗುಂಡಿನ ದಾಳಿಯಿಂದ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಪತ್ತೆಯಾಗಿತ್ತು.

ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ಸೇನೆಯ ಆಕ್ರಮಣವನ್ನು ಪ್ರತಿಭಟಿಸಿ ತಮ್ಮ ಹ್ಯಾಮಿಲ್ಟನ್ ಹಾಲ್‌ಗೆ ‘ಹಿಂದ್ ಹಾಲ್’ ಎಂದು ಮರುನಾಮಕರಣ ಮಾಡಿದ್ದರು.

ಹಿಂದ್ ರಜಬ್ ಇಂದು ಗಾಝಾದ ನಾಗರಿಕರ, ವಿಶೇಷವಾಗಿ ಮಕ್ಕಳ ಸಂಕಷ್ಟದ ಸಂಕೇತವಾಗಿ ಗುರುತಿಸಲ್ಪಡುತ್ತಿದ್ದಾಳೆ.

ಮಾರ್ಚ್ ಮಧ್ಯಭಾಗದಲ್ಲಿ, ಅಂದರೆ 2026ರ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆಗೆ ಈ ಚಿತ್ರವು ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು. ಈಗ ತಡವಾಗಿ ಬಿಡುಗಡೆಗೆ ಮುಂದಾದರೂ ನಿರ್ಬಂಧ ವಿಧಿಸಲಾಗಿದೆ. ಚಿತ್ರದ ವಿತರಕರಾದ ಮನೋಜ್ ನಂದವಾನ ಅವರು ‘ವೆರೈಟಿ’ ನಿಯತಕಾಲಿಕೆಗೆ ಮಾಹಿತಿ ನೀಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಇಸ್ರೇಲ್ ಪ್ರವಾಸ ಮುಗಿಸಿ ಮರಳಿದ ಮರುದಿನವೇ, ಅಂದರೆ ಫೆಬ್ರವರಿ 27ರಂದು ತಾವು ಸಿಬಿಎಫ್‌ಸಿ ಸದಸ್ಯರಿಗಾಗಿ ಚಿತ್ರದ ಪ್ರದರ್ಶನವನ್ನು ಏರ್ಪಡಿಸಿದ್ದಾಗಿ ತಿಳಿಸಿದ್ದಾರೆ.

ಆದರೆ, ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಿದರೆ, ಅದು “ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧವನ್ನು ಹಾಳುಗೆಡವುತ್ತದೆ” ಎಂದು ಅವರಿಗೆ ನಂತರ ತಿಳಿಸಲಾಯಿತು ಎಂದಿದ್ದಾರೆ.

ಕಳೆದ ಒಂದು ದಶಕದಲ್ಲಿ ರಕ್ಷಣೆ ಮತ್ತು ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಇಸ್ರೇಲ್ ಅತ್ಯಂತ ಬಲವಾದ ಸಂಬಂಧವನ್ನು ಬೆಳೆಸಿಕೊಂಡಿವೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ.

ಗಾಝಾ ಸಂಘರ್ಷದ ಕುರಿತಾದ ವಿಶ್ವಸಂಸ್ಥೆಯ ನಿರ್ಣಯಗಳಲ್ಲಿ ಭಾರತವು ಇಸ್ರೇಲ್ ಅನ್ನು ನೇರವಾಗಿ ಖಂಡಿಸುವುದರಿಂದ ದೂರ ಉಳಿದಿದೆ. ಇರಾನ್ ಯುದ್ಧದ ಅವಧಿಯಲ್ಲೂ ಸಹ, ಭಾರತವು ಸಮತೋಲಿತ ನಿಲುವನ್ನು ಕಾಯ್ದುಕೊಂಡಿದೆ ಮತ್ತು ಯಾವುದೇ ಒಂದು ಪಕ್ಷದ ಪರವಾಗಿ ನಿಂತಿಲ್ಲ. ಅದೇ ಸಮಯದಲ್ಲಿ, ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳನ್ನು ಕೂಡ ಭಾರತ ಖಂಡಿಸಿಲ್ಲ.

ಚಿತ್ರ ನಿರ್ದೇಶಕಿಯಿಂದ ಟೀಕೆ

ಭಾರತದಲ್ಲಿ ಚಲನಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಿರುವ ಕ್ರಮವು ಕೇವಲ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ, ಪ್ರಶಸ್ತಿ ವಿಜೇತ ಚಿತ್ರದ ನಿರ್ದೇಶಕಿಯಿಂದಲೂ ತೀವ್ರ ಟೀಕೆಗೆ ಗುರಿಯಾಗಿದೆ.

“ನಾನು ಭಾರತವನ್ನು ಪ್ರೀತಿಸುತ್ತಾ ಬೆಳೆದವಳು. ಬಾಲಿವುಡ್ ನನ್ನ ಬಾಲ್ಯದ ಒಂದು ಭಾಗವಾಗಿತ್ತು. ಒಂದು ಹಂತದಲ್ಲಂತೂ, ನನ್ನನ್ನು ನಾನು ವಿಶೇಷವಾಗಿ ಭಾವಿಸಿಕೊಳ್ಳಲು ನನಗೂ ಭಾರತೀಯ ಮೂಲದ ನಂಟಿದೆ ಎಂದು ಊಹಿಸಿಕೊಳ್ಳುತ್ತಿದ್ದೆ. ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ’ ಮತ್ತು ‘ಮಧ್ಯಪ್ರಾಚ್ಯದ ಏಕೈಕ ಪ್ರಜಾಪ್ರಭುತ್ವ’ ರಾಷ್ಟ್ರಗಳ ನಡುವಿನ ಈ ಸಂಬಂಧದ ಅವಧಿ ಎಷ್ಟು ದುರ್ಬಲವಾಗಿದೆಯೆಂದರೆ, ಒಂದು ಚಲನಚಿತ್ರ ಅದನ್ನು ಮುರಿದುಬಿಡಬಹುದೇ?” ಎಂದು ಚಿತ್ರದ ನಿರ್ದೇಶಕಿ ಬೆನ್ ಹನಿಯಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಗಮನಾರ್ಹ ವಿಷವೆಂದರೆ, ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರವು ಅಮೆರಿಕ, ಬ್ರಿಟನ್, ಇಟಲಿ ಮತ್ತು ಫ್ರಾನ್ಸ್‌ನಂತಹ ದೇಶಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಇವುಗಳಲ್ಲಿ ಹೆಚ್ಚಿನ ರಾಷ್ಟ್ರಗಳು ಇಸ್ರೇಲ್‌ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಿವೆ. ಕುತೂಹಲಕಾರಿ ವಿಷಯವೆಂದರೆ, ಸ್ವತಃ ಇಸ್ರೇಲ್‌ನಲ್ಲಿ ಟೆಲ್ ಅವಿವ್ ನ್ಯಾಯಾಲಯವು ಈ ಚಿತ್ರದ ಮೇಲಿದ್ದ ನಿಷೇಧವನ್ನು ತೆರವುಗೊಳಿಸಿದ ನಂತರವೂ ಚಿತ್ರ ಬಿಡುಗಡೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ವಿಪಕ್ಷ ನಾಯಕರಿಂದ ಟೀಕೆ

ಮಧ್ಯಪ್ರಾಚ್ಯದ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿಯ ಬಗ್ಗೆ ಈಗಾಗಲೇ ಟೀಕೆಗಳನ್ನು ಎದುರಿಸುತ್ತಿರುವ ನರೇಂದ್ರ ಮೋದಿ ಸರ್ಕಾರವು, ಇದೀಗ ಜಗತ್ತಿನಾದ್ಯಂತ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿರುವ ಚಲನಚಿತ್ರವನ್ನು ನಿಷೇಧಿಸಿರುವುದಕ್ಕಾಗಿ ವಿರೋಧ ಪಕ್ಷಗಳಿಂದ ಮತ್ತೊಮ್ಮೆ ತೀವ್ರ ಟೀಕೆಗೆ ಗುರಿಯಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಈ ವಿಚಾರದಲ್ಲಿ ಮೊದಲ ಸಾಲಿನಲ್ಲಿದ್ದಾರೆ. ಇದು “ಅಪಮಾನಕರ” ಮತ್ತು “ಪರಿಪಕ್ವ ಪ್ರಜಾಪ್ರಭುತ್ವಕ್ಕೆ ಅಯೋಗ್ಯವಾದ” ನಡೆ ಎಂದು ಕರೆಯುವ ಮೂಲಕ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

“ಒಂದು ಪ್ರಜಾಪ್ರಭುತ್ವದಲ್ಲಿ, ಚಲನಚಿತ್ರದ ಪ್ರದರ್ಶನವು ನಮ್ಮ ಸಮಾಜದ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರತಿಬಿಂಬವಾಗಿದೆ. ಅದಕ್ಕೂ ಸರ್ಕಾರಗಳ ನಡುವಿನ ಸಂಬಂಧಕ್ಕೂ ಯಾವುದೇ ಸಂಬಂಧವಿಲ್ಲ. ವಿದೇಶಗಳಿಗೆ ಅಸಮಾಧಾನವಾಗಬಹುದು ಎಂಬ ಕಾರಣಕ್ಕೆ ಚಲನಚಿತ್ರ ಅಥವಾ ಪುಸ್ತಕಗಳನ್ನು ನಿಷೇಧಿಸುವ ಈ ಪದ್ಧತಿಯು ತಕ್ಷಣವೇ ನಿಲ್ಲಬೇಕು” ಎಂದು ತರೂರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರೀನೇತ್ ಕೂಡ ಸಿನಿಮಾವನ್ನು ತಡೆ ಹಿಡಿದಿದ್ದಕ್ಕಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎನ್‌ಸಿಪಿ ನಾಯಕ ಅನೀಶ್ ಗವಾಂಡೆ ಈ ಕ್ರಮವನ್ನು “ನಮ್ಮ ಸಾಮೂಹಿಕ ವಿವೇಕಕ್ಕೆ ಅಂಟಿದ ಕಪ್ಪು ಚುಕ್ಕೆ” ಎಂದು ಕರೆದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...