Homeದಲಿತ್ ಫೈಲ್ಸ್ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

- Advertisement -
- Advertisement -

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು ‘ಸಿಯಾಸಾಟ್.ಕಾಮ್’ ವರದಿ ಮಾಡಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ತನ್ನ ಮೇಲೆ ಹಲ್ಲೆ ನಡೆಸಿದಾಗ, ನನ್ನ ಮಗನನ್ನು ಹಲ್ಲೆಯಿಂದ ರಕ್ಷಿಸಲು ಪ್ರಯತ್ನಿಸುತ್ತಿದ್ದೆ ಎಂದು ಸಂತ್ರಸ್ತೆ ಮಮತಾ ಭಗತ್ ಹೇಳಿಕೊಂಡಿದ್ದಾರೆ. ಅವರು ಮಗನನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ ತೀವ್ರ ಬಲಪ್ರಯೋಗ ಮಾಡಿ ಕ್ರೌರ್ಯದಿಂದ ವರ್ತಿಸಿದ್ದಾರೆ ಎಂದು ವರದಿಯಾಗಿದೆ.

“ಎಎಸ್‌ಐ ಎಲ್ಲಾ ಮಿತಿಗಳನ್ನು ಮೀರಿದ್ದರು. ಅವರು ಬಂದಾಗ ಯಾವುದೇ ಮಹಿಳಾ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಆ ಸಮಯದಲ್ಲಿ ನನ್ನ ಪುತ್ರರು ನಿದ್ರಿಸುತ್ತಿದ್ದರು. ನಾನು ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದೆ. ಬದಲಿಗೆ ಅವರು ನನ್ನ ಕೂದಲನ್ನು ಹಿಡಿದು ನನ್ನ ಮಕ್ಕಳೊಂದಿಗೆ ಜಗಳವಾಡಿದರು” ಎಂದು ಮಮತಾ ವರದಿಗಾರರಿಗೆ ತಿಳಿಸಿದರು.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ನಡು ರಸ್ತೆಯಲ್ಲಿ ಅರ್ಧ ಬಟ್ಟೆ ಧರಿಸಿದ ಯುವಕರಿಗೆ ಪೊಲೀಸ್ ಅಧಿಕಾರಿಗಳು ಹೊಡೆಯುವುದನ್ನು ಕಾಣಬಹುದು. ಮಮತಾ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಅವರ ಹಣೆಯ ಸುತ್ತಲೂ ಬ್ಯಾಂಡೇಜ್ ಹಾಕಿರುವುದು ಕಂಡುಬಂದಿದೆ.

ದಾಳಿಗೆ ಕಾರಣರಾದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಲಂಧರ್ ಪಶ್ಚಿಮದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಾಯಕರು ಒತ್ತಾಯಿಸಿದಾಗ ವಿಷಯ ಉಲ್ಬಣಗೊಂಡಿತು.

ಭಾರ್ಗೋ ಕ್ಯಾಂಪ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಿದವರಲ್ಲಿ ಮಾಜಿ ಶಾಸಕ ಶೀತಲ್ ಅಂಗುರಲ್, ಕೌನ್ಸಿಲರ್ ತರ್ಸೆಮ್ ಲಖೋತ್ರಾ ಮತ್ತು ಮಾಜಿ ಕೌನ್ಸಿಲರ್ ವಿಪನ್ ಕುಮಾರ್ ಸೇರಿದ್ದಾರೆ. ನಂತರ ಪ್ರತಿಭಟನಾಕಾರರು ಎಎಸ್‌ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಂತ್ರಸ್ತೆಯೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದರು.

“ಸಂತ್ರಸ್ತರಿಗೆ ನ್ಯಾಯ ಸಿಗುವವರೆಗೆ ನಾವು ಕದಲುವುದಿಲ್ಲ. ಸಂಬಂಧಪಟ್ಟ ಎಎಸ್‌ಐ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ನಮಗೆ ತಿಳಿಸಲಾಗಿದೆ. ನಾವು ನಾಳೆ ರಾಜ್ಯ ಮಹಿಳಾ ಮತ್ತು ಎಸ್‌ಸಿ ಆಯೋಗಕ್ಕೂ ಈ ವಿಷಯವನ್ನು ಕೊಂಡೊಯ್ಯುತ್ತೇವೆ” ಎಂದು ಶೀತಲ್ ಅಂಗುರಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...