Homeಮುಖಪುಟಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

- Advertisement -
- Advertisement -

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಚುನಾವಣಾ ಆಯೋಗ ಇದನ್ನು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)’ ಎಂದು ಹೇಳಿ ಸಮಜಾಯಿಸಿ ನೀಡಿದೆ. ಈ ಸಂಬಂಧ ಒಬ್ಬರು ಸಹಾಯಕ ವಿಭಾಗೀಯ ಅಧಿಕಾರಿಯನ್ನು ಆಯೋಗ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, ಈ ವಿಚಾರದ ಚರ್ಚೆ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಮುಂದುವರಿದಿದೆ.

ಈ ನಡುವೆ ಚುನಾವಣಾ ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೇರಳ ಪೊಲೀಸರು ಸೂಚಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ಚುನಾವಣಾ ಆಯೋಗದ ಪತ್ರದ ಕುರಿತ ಪೋಸ್ಟ್‌ಗಳು ‘ಗೌರವಾನ್ವಿತ ರಾಷ್ಟ್ರೀಯ ಸಂಸ್ಥೆ’ಯಾದ ಭಾರತೀಯ ಚುನಾವಣಾ ಆಯೋಗವನ್ನು (ಇಸಿಐ) ‘ಬಹಿರಂಗವಾಗಿ ಅವಮಾನಿಸುತ್ತವೆ’ ಎಂದು ಪೊಲೀಸರು ಹೇಳಿದ್ದಾರೆ. ಕುತೂಹಲಕಾರಿಯಾಗಿ ಇವು ‘ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು’ ಹರಡುತ್ತಿವೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪತ್ರವನ್ನು ಪೋಸ್ಟ್ ಮಾಡಿದ ಬಳಕೆದಾರರಿಗೆ, ಅದನ್ನು ತೆಗೆದು ಹಾಕುವಂತೆ ಕೇರಳ ಪೊಲೀಸರು ಸೂಚಿಸಿರುವುದಾಗಿ ಎಕ್ಸ್‌ ತಿಳಿಸಿದೆ.

“ನಮ್ಮ ಬಳಕೆದಾರರ ಧ್ವನಿಯನ್ನು ಗೌರವಿಸುವುದು ಮತ್ತು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ. ಆದ್ದರಿಂದ, ಯಾವುದೇ ಕಾನೂನು ಜಾರಿ ಸಂಸ್ಥೆ ಅಥವಾ ಸರ್ಕಾರಿ ಸಂಸ್ಥೆಯಿಂದ ನಿಮ್ಮ ಖಾತೆಯ ಮಾಹಿತಿಯನ್ನು ತೆಗೆದುಹಾಕಲು ನಮಗೆ ವಿನಂತಿ ಬಂದಾಗ, ಆ ಬಗ್ಗೆ ಬಳಕೆದಾರರಿಗೆ ತಿಳಿಸುವುದು ನಮ್ಮ ನೀತಿಯಾಗಿದೆ” ಎಂದು ಪತ್ರಕರ್ತ ಪಿಯೂಷ್ ರೈ ಅವರಂತಹ ಬಳಕೆದಾರರಿಗೆ ಎಕ್ಸ್‌ ಸಂಸ್ಥೆಯಿಂದ ಬಂದ ಇಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ವರದಿ ಹೇಳಿದೆ.

ಚುನಾವಣಾ ಆಯೋಗದ ಪತ್ರವನ್ನು ಪೋಸ್ಟ್ ಮಾಡಿದ್ದಕ್ಕೆ ಎಕ್ಸ್‌ನಿಂದ ಇಮೇಲ್ ಸ್ವೀಕರಿಸಿರುವ ಕಾಂಗ್ರೆಸ್ ನಾಯಕಿ ರುಚಿರಾ ಚತುರ್ವೇದಿ ಅವರು, “ಸಾಮಾಜಿಕ ಮಾಧ್ಯಮಗಳನ್ನು ಸೆನ್ಸಾರ್ ಮಾಡಲು ಈ ರೀತಿಯ ಟೇಕ್‌ಡೌನ್ ನೋಟಿಸ್‌ಗಳು (ತೆಗೆದು ಹಾಕುವಿಕೆ ನೋಟಿಸ್) ನೀಡುವುದು ಈಗ ವಾಡಿಕೆಯ ಅಸ್ತ್ರವಾಗಿಬಿಟ್ಟಿವೆ. ಕೇರಳ ಪೊಲೀಸರ ಪ್ರಕಾರ, ನನ್ನ ಪೋಸ್ಟ್ ಚುನಾವಣಾ ಆಯೋಗವನ್ನು ಅವಮಾನಿಸುತ್ತದೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಚುನಾವಣಾ ಆಯೋಗದ ಈ ‘ಲಿಪಿಕ ದೋಷ’ (clerical error) ಕುರಿತಾದ ಪೋಸ್ಟ್‌ಗಳು ಕೋಮು ಸೌಹಾರ್ದತೆಗೆ ಹೇಗೆ ಧಕ್ಕೆ ತರುತ್ತವೆ ಎಂಬುದು ಪೊಲೀಸರಿಗೇ ಗೊತ್ತಿರಬೇಕು. ಒಂದು ವೇಳೆ ಚುನಾವಣಾ ಆಯೋಗದೊಂದಿಗೆ ಬಿಜೆಪಿಯ ಹೆಸರನ್ನು ಜೋಡಿಸುವುದರಿಂದಲೇ ಅಶಾಂತಿ ಉಂಟಾಗುತ್ತದೆ ಎಂದು ಅವರು ಭಾವಿಸದ ಹೊರತು, ಈ ಆರೋಪದ ಹಿಂದಿನ ಉದ್ದೇಶ ಅಸ್ಪಷ್ಟವಾಗಿದೆ” ಎಂದಿದ್ದಾರೆ.

ಎಕ್ಸ್ ಸಂಸ್ಥೆಯು ಇನ್ನೂ ಆ ಪೋಸ್ಟ್‌ಗಳನ್ನು ತೆಗೆದುಹಾಕಿಲ್ಲದಿದ್ದರೂ, ಕೇರಳ ಪೊಲೀಸರು ನೀಡಿದ ನೋಟಿಸ್‌ನಲ್ಲಿ ಬಳಸಲಾದ ತೀವ್ರ ಪದಬಳಕೆಯು ಅನೇಕರ ಗಮನ ಸೆಳೆದಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸೈಬರ್ ಕಾರ್ಯಾಚರಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಿಜೋಯ್ ಎಸ್. ಸಹಿ ಮಾಡಿರುವ ನೋಟಿಸ್ ಅನ್ನು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಭಾರತಿ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಇಂದು ಬೆಳಗ್ಗೆ ಅವರ ಪ್ರೇಮ ಪತ್ರವನ್ನು (ನೋಟಿಸ್) ನೋಡಿಯೇ ನನ್ನ ಕಣ್ಣು ತೆರೆಯಿತು” ಎಂದು ವ್ಯಂಗ್ಯವಾಡಿದ್ದಾರೆ.

ಪೊಲೀಸ್ ನೋಟಿಸ್ ಅನ್ನು ವಿವಾದಾತ್ಮಕ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ಸೆಕ್ಷನ್ 79(3)(b) ಮತ್ತು ಐಟಿ ನಿಯಮಗಳು, 2021 ರ ಸೆಕ್ಷನ್ 3(1)(d) ಅಡಿಯಲ್ಲಿ ನೀಡಲಾಗಿದೆ. ಮೊದಲನೆಯ ನಿಯಮದ ಪ್ರಕಾರ, ಸರ್ಕಾರಿ ಸಂಸ್ಥೆಯಿಂದ ಸೂಚನೆ ಬಂದ ನಂತರವೂ ‘ಎಕ್ಸ್‌ನಂತಹ ಮಧ್ಯವರ್ತಿ ಸಂಸ್ಥೆಗಳು ಆ ವಿಷಯವನ್ನು ತೆಗೆದುಹಾಕಲು ವಿಫಲವಾದರೆ, ಅವುಗಳಿಗೆ ಇರುವ ಕಾನೂನು ರಕ್ಷಣೆ ರದ್ದಾಗುತ್ತದೆ. ಎರಡನೆಯ ನಿಯಮದಂತೆ, ನ್ಯಾಯಾಲಯದ ಆದೇಶ ಅಥವಾ ಅಧಿಕೃತ ಸರ್ಕಾರಿ ಸಂಸ್ಥೆಯಿಂದ ಸೂಚನೆ ಬಂದ 36 ಗಂಟೆಗಳ ಒಳಗೆ ಅಂತಹ ವಿಷಯಗಳನ್ನು ತೆಗೆದುಹಾಕುವುದು ಕಡ್ಡಾಯವಾಗಿದೆ.

ಎಕ್ಸ್‌ ಜಾಲತಾಣದ 10 ಪೋಸ್ಟ್‌ಗಳನ್ನು ಉಲ್ಲೇಖಿಸಿರುವ ಕೇರಳ ಪೊಲೀಸರು, “ಈ ಎಕ್ಸ್‌ ಪೋಸ್ಟ್ ಭಾರತೀಯ ಚುನಾವಣಾ ಆಯೋಗವನ್ನು ಬಹಿರಂಗವಾಗಿ ಅವಮಾನಿಸುತ್ತದೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತದೆ. ಈ ಪೋಸ್ಟ್ ಕೇವಲ ಗೌರವಾನ್ವಿತ ರಾಷ್ಟ್ರೀಯ ಸಂಸ್ಥೆಗೆ ಮಾಡಿದ ನೇರ ಅವಮಾನ ಮಾತ್ರವಲ್ಲದೆ, ಸಮಾಜದಲ್ಲಿ ಒಡಕು ಮತ್ತು ಹಗೆತನವನ್ನು ಪ್ರಚೋದಿಸುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಹೇಳಿರುವುದಾಗಿ thewire.in ಉಲ್ಲೇಖಿಸಿದೆ.

ಕೇರಳದ ಮುಖ್ಯ ಚುನಾವಣಾಧಿಕಾರಿಯೇ (ಸಿಇಒ) ಇದು ‘ಲಿಪಿಕ ದೋಷ’ (clerical error) ಎಂದು ಈಗಾಗಲೇ ಒಪ್ಪಿಕೊಂಡಿರುವಾಗ, ಈ ಕ್ರಮವನ್ನು ಏಕೆ ಕೈಗೊಳ್ಳಲಾಗುತ್ತಿದೆ ಎಂದು ಪತ್ರಕರ್ತ ಅರವಿಂದ್ ಗುಣಶೇಖರ್ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಪತ್ರದ ನಿರಂತರ ಹಂಚಿಕೆಯು ಭಾರತೀಯ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯನ್ನು ಕುಗ್ಗಿಸುತ್ತದೆ ಎಂದು ಕೇರಳ ಪೊಲೀಸರು ಹೇಳಿದ್ದಾರಂತೆ.

“ಇದಲ್ಲದೆ, ಸಿಬ್ಬಂದಿಯ ತಪ್ಪಿನಿಂದಾಗಿ ರಾಜಕೀಯ ಪಕ್ಷವೊಂದರ ಲಾಂಛನವನ್ನು ಅಚಾತುರ್ಯದಿಂದ ಒಳಗೊಂಡಿದ್ದ, ಈಗಾಗಲೇ ತಿದ್ದುಪಡಿ ಮಾಡಲಾದ 2019ರ ಹಳೆಯ ದಾಖಲೆಯನ್ನು ಹೊಂದಿರುವ ಎಲ್ಲಾ ಡಿಜಿಟಲ್ ವಿಷಯಗಳನ್ನು ತಕ್ಷಣವೇ ತೆಗೆದುಹಾಕುವ ತುರ್ತು ಅಗತ್ಯವಿದೆ. ಹಿಂಪಡೆಯಲಾದ ಈ ವಿಷಯದ ನಿರಂತರ ಪ್ರಸರಣವನ್ನು ಸುಳ್ಳು ಆರೋಪಗಳನ್ನು ಹರಡಲು ಬಳಸಲಾಗುತ್ತಿದೆ, ಆ ಮೂಲಕ ಚುನಾವಣಾ ಆಯೋಗದ ಸಮಗ್ರತೆ ಮತ್ತು ಪಾರದರ್ಶಕತೆಗೆ ಧಕ್ಕೆ ತರಲಾಗುತ್ತಿದೆ. ಇಂತಹ ತಪ್ಪು ಮಾಹಿತಿ ನೀಡುವಿಕೆಯು ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಏಕೆಂದರೆ ಇದು ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ವಿಭಜನೆ ಮತ್ತು ಹಗೆತನವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ರಾಜ್ಯಾದ್ಯಂತ ಗಂಭೀರ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಚುನಾವಣಾ ಪ್ರಕ್ರಿಯೆಗೆ ಹೆಚ್ಚಿನ ಹಾನಿಯಾಗದಂತೆ ತಡೆಯಲು ಮತ್ತು ಕೋಮು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಮಾಧ್ಯಮ ಸಂಸ್ಥೆಗಳು ಮತ್ತು ಡಿಜಿಟಲ್ ವೇದಿಕೆಗಳು ಈ ದೋಷಪೂರಿತ ದಾಖಲೆಯ ವಿತರಣೆಯನ್ನು ನಿಲ್ಲಿಸಲು ಮತ್ತು ಅದನ್ನು ತಮ್ಮ ದಾಖಲೆಗಳು ಹಾಗೂ ಸಾಮಾಜಿಕ ಮಾಧ್ಯಮ ಖಾತೆಗಳಿಂದ ತಕ್ಷಣವೇ ತೆಗೆದುಹಾಕಲು ಇದರ ಮೂಲಕ ಸೂಚಿಸಲಾಗಿದೆ” ಎಂದು ಪೊಲೀಸರು ನೀಡಿದ ನೋಟಿಸ್‌ನಲ್ಲಿ ಹೇಳಿದ್ದಾರೆ ಎಂದು thewire.in ತಿಳಿಸಿದೆ.

ಕೇರಳದ ಪೊಲೀಸ್ ಇಲಾಖೆಯು ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಟ್ಟಿದ್ದು, ಪ್ರಸ್ತುತ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ವಿರೋಧ ಪಕ್ಷವಾದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಇದನ್ನು ಮುನ್ನಡೆಸುತ್ತಿದೆ. ಆದಾಗ್ಯೂ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ರಾಜ್ಯ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾರತೀಯ ಚುನಾವಣಾ ಆಯೋಗದ (ಇಸಿಐ) ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ.

ಚುನಾವಣೆ ಸಮೀಪಿಸುತ್ತಿರುವ ಕೇರಳದಲ್ಲಿ ಎಡರಂಗದ ವಿರುದ್ಧ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಈ ಪೊಲೀಸ್ ನೋಟಿಸ್ ‘ಬಿಜೆಪಿ-ಎಲ್‌ಡಿಎಫ್ ಒಳಸಂಚಿ’ಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

“ಬೆಳಿಗ್ಗೆ ಒಂದು ವಿಚಾರವನ್ನು ‘ಸಿಬ್ಬಂದಿ ತಪ್ಪು’ ಎಂದು ಕರೆದು, ಸಂಜೆಯ ವೇಳೆಗೆ ಅದರ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಸೆನ್ಸಾರ್ (ನಿರ್ಬಂಧ) ಮಾಡಲು ಮುಂದಾಗಲು ಸಾಧ್ಯವಿಲ್ಲ. ಇದು ಹಾನಿಯನ್ನು ನಿಯಂತ್ರಿಸುವ ಪ್ರಯತ್ನವಲ್ಲ, ಬದಲಿಗೆ ಹಾನಿ ಸಂಭವಿಸಿದೆ ಎಂಬುದನ್ನು ದೃಢಪಡಿಸುವ ಕ್ರಮ” ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...