Homeಮುಖಪುಟಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಿರುವನಂತಪುರಂ ಜಿಲ್ಲೆಯ ನೇಮಮ್ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ನ ಕೆ.ಎಸ್ ಶಬರಿನಾಥನ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ ಕೂಡ, ಆಯೋಗವು ಚಂದ್ರಶೇಖರ್ ಅವರ ನಾಮಪತ್ರವನ್ನು ಅಂಗೀಕರಿಸಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ ಐಷಾರಾಮಿ ಪ್ರದೇಶವಾದ ಕೋರಮಂಗಲದಲ್ಲಿ ಚಂದ್ರಶೇಖರ್ ಅವರು 49,000 ಚದರ ಅಡಿಯ ಮನೆಯನ್ನು ಹೊಂದಿದ್ದಾರೆ ಎಂದು ಕೇರಳ ಕಾಂಗ್ರೆಸ್ ಘಟಕ ಹೇಳಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ಕಂದಾಯ ಇಲಾಖೆಯ ಆಸ್ತಿ ತೆರಿಗೆ ರಸೀದಿಯನ್ನು ಸೋಮವಾರ (ಮಾರ್ಚ್ 23) ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಮನೆಯ ವಿವರವನ್ನು ಚುನಾವಣಾ ಅಫಿಡವಿಟ್‌ನಲ್ಲಿ ಚಂದ್ರಶೇಖರ್ ಉಲ್ಲೇಖಿಸಿಲ್ಲ ಎಂದು ಆರೋಪಿಸಿದೆ.

ಕೋರಮಂಗಲದಲ್ಲಿರುವ ಆಸ್ತಿಗೆ ಸಂಬಂಧಿಸಿದಂತೆ ಚಂದ್ರಶೇಖರ್ ಮಾರ್ಚ್ 17, 2026ರಂದು 5 ಲಕ್ಷ ರೂಪಾಯಿಗೂ ಹೆಚ್ಚು ಆಸ್ತಿ ತೆರಿಗೆ ಪಾವತಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

“ಇದು ದೇಶದ ಅತ್ಯಂತ ದುಬಾರಿ ಸ್ಥಳಗಳ ಪೈಕಿ ಒಂದರಲ್ಲಿ ಇರುವ 1.07 ಎಕರೆ ಆಸ್ತಿಯಾಗಿದ್ದು, ಇಲ್ಲಿ ಅನೇಕ ಭಾರತೀಯ ಶತಕೋಟ್ಯಾಧಿಪತಿಗಳು ವಾಸಿಸುತ್ತಿದ್ದಾರೆ. ಇಲ್ಲಿನ ಭೂಮಿಯ ಬೆಲೆ ಪ್ರತಿ ಚದರ ಅಡಿಗೆ ಸುಮಾರು 35,000 ರಿಂದ 50,000 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿದೆ. ಅಂದಾಜಿನ ಪ್ರಕಾರ, ಚಂದ್ರಶೇಖರ್ ಅವರ ಭೂಮಿಯ ಮೌಲ್ಯ ಮಾತ್ರ ಸುಮಾರು 200 ಕೋಟಿ ರೂ. ಆಗಿರಬಹುದು” ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಪರಿಶೀಲನೆಗಾಗಿ ಅರ್ಜಿಯ ಸಂಖ್ಯೆಯೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, “ತೆರಿಗೆಯನ್ನು ಕೇವಲ ಆರು ದಿನಗಳ ಹಿಂದೆ, ಅಂದರೆ ಮಾರ್ಚ್ 17ರಂದು ಪಾವತಿಸಲಾಗಿದೆ, ಇದನ್ನು ನೀವು ಸ್ವತಃ ಪರಿಶೀಲಿಸಬಹುದು” ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಚಂದ್ರಶೇಖರ್ ಅವರು 2024ರ ಅಫಿಡವಿಟ್‌ನಲ್ಲಿ ಇದೇ ವಸತಿ ವಿಳಾಸವನ್ನು ನೀಡಿದ್ದರು ಎಂಬ ಅಂಶವನ್ನು ಒತ್ತಿ ಹೇಳಿದೆ.

ಚಂದ್ರಶೇಖರ್ ಅವರನ್ನು ‘ಹಬಿಚ್ಯುವಲ್ ಒಫೆಂಡರ್’ ಎಂದು ಕರೆದಿರುವ ಕಾಂಗ್ರೆಸ್, ಅವರನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿದೆ.

ವರದಿಗಳ ಪ್ರಕಾರ, ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಕೋರಮಂಗಲದ ಮೂರನೇ ಬ್ಲಾಕ್‌ನಲ್ಲಿರುವ ನಂ. 419 ವಿಳಾಸದ ಕೃಷಿಯೇತರ ಭೂಮಿಯನ್ನು ಮಾತ್ರ ಸ್ಥಿರಾಸ್ತಿಯೆಂದು ಘೋಷಿಸಿದ್ದಾರೆ. ಅವರು ಈ ಆಸ್ತಿಯನ್ನು 2006ರಲ್ಲಿ 5.26 ಕೋಟಿ ರೂಪಾಯಿಗೆ ಖರೀದಿಸಿದ್ದು, ಪ್ರಸ್ತುತ ಇದರ ಮಾರುಕಟ್ಟೆ ಮೌಲ್ಯ ಸುಮಾರು 15.07 ಕೋಟಿ ರೂಪಾಯಿ ಎಂದು ಅಂದಾಜಿಸಿದ್ದಾರೆ.

ತಮ್ಮ ಅಫಿಡವಿಟ್‌ನಲ್ಲಿ 2024-25ರ ಹಣಕಾಸು ವರ್ಷದ ಆದಾಯದ ಮೂಲಗಳ ಬಗ್ಗೆ ಮಾಹಿತಿ ನೀಡಿರುವ ಭಾಗದಲ್ಲಿ, ಚಂದ್ರಶೇಖರ್ ಅವರು ಕೋರಮಂಗಲದ ಮೂರನೇ ಬ್ಲಾಕ್‌ನಲ್ಲಿರುವ ‘ಪ್ಲಾಟ್ 408’ ವಿಳಾಸವನ್ನು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ನ ಆಕ್ಷೇಪಣೆಗಳ ಹೊರತಾಗಿಯೂ, ಚುನಾವಣಾಧಿಕಾರಿಯು ಚಂದ್ರಶೇಖರ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ. ಅಭ್ಯರ್ಥಿಗಳ ಕೈಪಿಡಿ 2023ರ ಪ್ರಕಾರ ನಾಮಪತ್ರವನ್ನು ತಿರಸ್ಕರಿಸಲು ಯಾವುದೇ ಪೂರಕ ಕಾರಣಗಳಿಲ್ಲ ಎಂದು ಅಧಿಕಾರಿ ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಮಂಗಳವಾರ ಕೇರಳ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್‌ನ ಆರೋಪಗಳು ಸುಳ್ಳು ಎಂದು ತಳ್ಳಿಹಾಕಿದೆ. “ಚಂದ್ರಶೇಖರ್ ಅವರು ಕೋರಮಂಗಲದಲ್ಲಿ ಮನೆ ಹೊಂದಿದ್ದಾರೆ ಮತ್ತು ಆ ಮಾಹಿತಿಯನ್ನು ಚುನಾವಣಾ ಅಫಿಡವಿಟ್‌ನಲ್ಲಿ ಮರೆಮಾಚಿದ್ದಾರೆ ಎಂದು ‘ಕಾಂಗ್ರೆಸ್ ಸೈಬರ್ ತಂಡಗಳು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿ ಹರಡುತ್ತಿವೆ” ಎಂದು ಬಿಜೆಪಿ ಹೇಳಿದೆ.

ಸೋಲುವ ಭಯದಿಂದ ಕಾಂಗ್ರೆಸ್ ಈ ಆರೋಪಗಳನ್ನು ಮಾಡುತ್ತಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕಾಂಗ್ರೆಸ್ ಇದೇ ರೀತಿಯ ದೂರುಗಳನ್ನು ನೀಡಿತ್ತು ಎಂದು ಬಿಜೆಪಿ ಪ್ರತಿಪಾದಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜೀವ್ ಚಂದ್ರಶೇಖರ್ ಕೂಡ ಕಾಂಗ್ರೆಸ್‌ನ ಆರೋಪಗಳನ್ನು ನಿರಾಕರಿಸಿದ್ದಾರೆ. “ಅವರು ಲೋಕಸಭಾ ಚುನಾವಣೆಯ ವೇಳೆಯೂ ಇದನ್ನು ಪ್ರಯತ್ನಿಸಿದ್ದರು. ನನ್ನ ಆದಾಯ ತೆರಿಗೆ ಮತ್ತು ಮನೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಅವರು ಕೇರಳದ ಜನರಿಗೆ ಉತ್ತಮ ಭವಿಷ್ಯವನ್ನು ನೀಡುವ ಬದಲು, ಕೇವಲ ಸುಳ್ಳು ಮತ್ತು ಅಪಪ್ರಚಾರಗಳನ್ನು ನಂಬುವ ಅತ್ಯಂತ ದಡ್ಡ ಪಕ್ಷವಾಗಿ ಮಾರ್ಪಟ್ಟಿದ್ದಾರೆ. ನನ್ನ ಜೀವನದಲ್ಲಿ ಪ್ರತಿಯೊಂದು ಕೆಲಸವನ್ನೂ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ಮಾಡಿದ್ದೇನೆ” ಎಂದು ಅವರು ಚಂದ್ರಶೇಖರ್ ಹೇಳಿದ್ದಾರೆ.

ಈ ನಡುವೆ, ಬಿಜೆಪಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ, “ನಮ್ಮ ಆರೋಪವು ಸುಳ್ಳಾಗಿದ್ದರೆ, ನಾವು ಹಂಚಿಕೊಂಡಿರುವ ಆಸ್ತಿ ತೆರಿಗೆ ರಸೀದಿಯು ಖಂಡಿತವಾಗಿಯೂ ನಕಲಿಯಾಗಿರಬೇಕು” ಎಂದಿದೆ.

ಕಾಂಗ್ರೆಸ್ ಪಕ್ಷವು ತನ್ನ ವಾದವನ್ನು ಪುನರುಚ್ಚರಿಸಿದ್ದು, ಇದೇ ಆಸ್ತಿಯನ್ನು (ಕೋರಮಂಗಲದ ಮನೆ) ಚಂದ್ರಶೇಖರ್ ಅವರು 2024ರ ಅಫಿಡವಿಟ್‌ನಲ್ಲಿ ಘೋಷಿಸಿದ್ದರು ಎಂದು ತಿಳಿಸಿದೆ. ಅಲ್ಲದೆ, ಈ ಬಗ್ಗೆ ಬಿಜೆಪಿ ಸ್ವತಃ ಪರಿಶೀಲಿಸಿಕೊಳ್ಳಲಿ ಎಂದು ಸವಾಲು ಹಾಕಿದೆ.

“ಅವರು (ಚಂದ್ರಶೇಖರ್) ತಾವು ಮನೆ ಸಂಖ್ಯೆ 408ರಲ್ಲಿ ವಾಸಿಸುತ್ತಿರುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಹೆಸರಿನಲ್ಲಿ ಯಾವುದೇ ವಸತಿ ಆಸ್ತಿ ಇಲ್ಲ ಎಂದು ಘೋಷಿಸಿದ್ದಾರೆ. ಹಾಗಾದರೆ, ಯಾವುದು ನಿಜ? ಅವರು ತದ್ರೂಪಿ ಹೆಸರಿನ ಬೇರೆಯವರ ಮಾಲೀಕತ್ವದ 50,000 ಚದರ ಅಡಿಯ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆಯೇ ಅಥವಾ ಇದು ಸುಳ್ಳು ಅಫಿಡವಿಟ್ ಸಲ್ಲಿಸಿರುವ ಸ್ಪಷ್ಟ ಪ್ರಕರಣವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ಲಾಟ್ ಸಂಖ್ಯೆ 419 ಕೇವಲ ಅವರ ಕಾರು ಶೆಡ್ ಆಗಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಇದರೊಂದಿಗೆ, 408 ಮತ್ತು 445 ಸಂಖ್ಯೆಯ ಆಸ್ತಿಗಳನ್ನು ಅವರು ಘೋಷಿಸಿಲ್ಲ ಎಂದು ಪಕ್ಷವು ಆರೋಪಿಸಿದೆ.

ಶಬರಿನಾಥನ್ ಅವರು ಈ ವಿಷಯದಲ್ಲಿ ಕಾಂಗ್ರೆಸ್ ಮತ್ತು ಅದರ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುಂಬರುವ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.

ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಬರಿನಾಥ್, “ನಮ್ಮ ಬಳಿ ಈ ಬಗ್ಗೆ ಸ್ಪಷ್ಟವಾದ ಪುರಾವೆಗಳಿವೆ. ಮಿಲಿಯನೇರ್ ಆಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಚುನಾವಣೆ ಎದುರಿಸುವ ಹಕ್ಕಿದೆ, ಆದರೆ, ಅವರು ಉದ್ದೇಶಪೂರ್ವಕವಾಗಿಯೇ ಮಾಹಿತಿಯನ್ನು ಮರೆಮಾಚಿದ್ದಾರೆ. ತಾವೇ ಸುಮಾರು 5 ಲಕ್ಷ ರೂ. ಆಸ್ತಿ ತೆರಿಗೆ ಪಾವತಿಸಿರುವ ಆಸ್ತಿಯ ವಿವರವನ್ನು ಅವರು ಬಹಿರಂಗಪಡಿಸಿಲ್ಲ. ದುರದೃಷ್ಟವಶಾತ್, ಅವರ ವಕೀಲರು ಇದು ಅವರ ಕಡೆಯಿಂದಾದ ತಪ್ಪು ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಈ ಸಾಂವಿಧಾನಿಕ ವ್ಯವಸ್ಥೆಯಲ್ಲಿ ಕೇವಲ ಈ ಆಧಾರದ ಮೇಲೆ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಕಾನೂನಾತ್ಮಕ ಅಧಿಕಾರ ಚುನಾವಣಾಧಿಕಾರಿಗೆ ಇಲ್ಲ. ಆದ್ದರಿಂದ, ನಾವು ಖಂಡಿತವಾಗಿಯೂ ಈ ಬಗ್ಗೆ ಚುನಾವಣಾ ಮೊಕದ್ದಮೆಯನ್ನು ಹೂಡಲಿದ್ದೇವೆ” ಎಂದು ಹೇಳಿದ್ದಾರೆ.

ಬಿಜೆಪಿ ಕೇರಳ ಘಟಕದ ಸೀಲ್ ಇರುವ ಚುನಾವಣಾ ಆಯೋಗದ ಪತ್ರದ ಕುರಿತಾದ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೇರಳ ಪೊಲೀಸರು ಸೂಚಿಸಿದ ದಿನವೇ ಈ ಬೆಳವಣಿಗೆ ನಡೆದಿದೆ. ಚುನಾವಣಾ ಆಯೋಗದ ಪತ್ರದ ಕುರಿತಾದ ಪೋಸ್ಟ್‌ಗಳು ಆಯೋಗವನ್ನು ಬಹಿರಂಗವಾಗಿ ಅವಮಾನಿಸುತ್ತಿವೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತಿವೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...