Homeಅಂತರಾಷ್ಟ್ರೀಯಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ 15 ಅಂಶಗಳ ಪ್ರಸ್ತಾಪವನ್ನು ಮಂಡಿಸಿದೆ ಎಂದು ವರದಿಯಾಗಿದೆ.

ಅಮೆರಿಕದ ಪ್ರಸ್ತಾಪವನ್ನು ಪಾಕಿಸ್ತಾನ ಮೂಲಕ ಇರಾನ್ ಸ್ವೀಕರಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಯುದ್ದ ಕೊನೆಗೊಳಿಸುವ ಕುರಿತು ಇರಾನ್‌ನ ಸರಿಯಾದ ವ್ಯಕ್ತಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ (ಮಾ.24) ಹೇಳಿದ್ದರು. ಆದರೆ, ಇರಾನ್ ಇದನ್ನು ತಳ್ಳಿಹಾಕಿದೆ.

ವರದಿಗಳ ಪ್ರಕಾರ, ಇರಾನ್‌ ಮೇಲೆ ದಾಳಿ ನಡೆಸಿ ಇಸ್ರೇಲ್ ಮತ್ತು ಅಮೆರಿಕ ಕೈ ಸುಟ್ಟುಕೊಂಡಿವೆ. ಇರಾನ್‌ನ ತಿರುಗೇಟಿಗೆ ಟ್ರಂಪ್‌ ಲೆಕ್ಕಾಚಾರಗಳು ತಲೆ ಕೆಳಗಾಗಿವೆ. ಹಾಗಾಗಿ, ಅಮೆರಿಕವೇ ಯುದ್ಧ ನಿಲ್ಲಿಸುವ ಪ್ರಸ್ತಾವ ಮುಂದಿಟ್ಟಿದೆ.

ಅಮೆರಿಕ ಇರಾನ್‌ ಮುಂದೆ ಇಟ್ಟಿರುವ ಪ್ರಸ್ತಾಪದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ

1. ಇರಾನ್ ತನ್ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ನಟಾಂಝ್, ಇಸ್ಫಹಾನ್, ಮತ್ತು ಫೋರ್ಡೋ ಸೌಲಭ್ಯಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.

2. ಇರಾನ್ ತನ್ನ ನೆಲದಲ್ಲಿ ಯುರೇನಿಯಂ ಶುದ್ಧೀಕರಣವನ್ನು ನಿಲ್ಲಿಸಬೇಕು ಮತ್ತು ಈಗಿರುವ ಶುದ್ಧೀಕರಿಸಿದ ಯುರೇನಿಯಂ ಅನ್ನು ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಗೆ (ಐಎಇಎ) ಹಸ್ತಾಂತರಿಸಬೇಕು.

3. ಬ್ಯಾಲಿಸ್ಟಿಕ್ ಕ್ಷಿಪಣಿಗಳ ತಯಾರಿಕೆ ಮತ್ತು ಪರೀಕ್ಷೆಯನ್ನು ನಿಲ್ಲಿಸಬೇಕು ಹಾಗೂ ಕ್ಷಿಪಣಿಗಳ ಬಳಕೆಯನ್ನು ಕೇವಲ ಆತ್ಮರಕ್ಷಣೆಗಷ್ಟೇ ಸೀಮಿತಗೊಳಿಸಬೇಕು.

4. ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಝ್ ಜಲಸಂಧಿಯನ್ನು ಮುಕ್ತವಾಗಿರಿಸಬೇಕು ಮತ್ತು ಪ್ರಾದೇಶಿಕ ಬಂಡುಕೋರ ಅಥವಾ ಸಶಸ್ತ್ರ ಗುಂಪುಗಳಿಗೆ ನೀಡುತ್ತಿರುವ ಆರ್ಥಿಕ ಮತ್ತು ಶಸ್ತ್ರಾಸ್ತ್ರ ನೆರವನ್ನು ಇರಾನ್ ನಿಲ್ಲಿಸಬೇಕು.

ಈ ಮೇಲಿನ ಷರತ್ತುಗಳನ್ನು ಪಾಲಿಸಿದರೆ ಇರಾನ್ ಮೇಲಿರುವ ಪರಮಾಣು ಸಂಬಂಧಿತ ಕಠಿಣ ಆರ್ಥಿಕ ನಿರ್ಬಂಧಗಳನ್ನು ಅಮೆರಿಕ ತೆರವುಗೊಳಿಸುವುದಾಗಿ ಹೇಳಿದೆಯಂತೆ.

ಅಲ್ಲದೆ, ಇರಾನ್‌ನ ನಾಗರಿಕ ಪರಮಾಣು ಇಂಧನ ಯೋಜನೆಗೆ ಸಹಾಯ ಒದಗಿಸುತ್ತೇವೆ ಮತ್ತು ಮೇಲ್ವಿಚಾರಣೆ ಮಾಡುತ್ತೇವೆ. ಈ ಒಪ್ಪಂದದ ಕುರಿತು ಚರ್ಚಿಸಲು ಒಂದು ತಿಂಗಳ ಕಾಲ ಕದನ ವಿರಾಮ ಘೋಷಿಸಲು ಸಿದ್ಧರಿದ್ದೇವೆ ಎಂಬುವುದಾಗಿ ಭರವಸೆ ನೀಡಿದೆ ಎಂದು ವರದಿಯಾಗಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಅಮೆರಿಕ ಅಥವಾ ಟ್ರಂಪ್ ಅವರ ಪ್ರಸ್ತಾವನೆಗೆ ಪ್ರತಿಕ್ರಿಯೆಯಾಗಿ ಇರಾನ್ ಕಠಿಣ ಕದನ ವಿರಾಮದ ಷರತ್ತುಗಳನ್ನು ಅಥವಾ ಬೇಡಿಕೆಗಳನ್ನು ಮುಂದಿಡಲು ನಿರ್ಧರಿಸಿದೆ.

ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಮುಚ್ಚುಬೇಕು. ಇರಾನ್ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಬೇಕು. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಸಾರಿಗೆ ಶುಲ್ಕವನ್ನು ವಿಧಿಸಲು ಅವಕಾಶ ನೀಡಬೇಕು ಇತ್ಯಾದಿ ಇರಾನ್‌ನ ಬೇಡಿಕೆಗಳಲ್ಲಿ ಸೇರಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಇರಾನ್ ಒಪ್ಪಂದಕ್ಕೆ ಸಿದ್ಧವಿದೆ” ಎಂದು ಹೇಳಿದ್ದರೂ, ಇರಾನ್‌ನ ಮಿಲಿಟರಿ ವಕ್ತಾರರು ಅಮೆರಿಕದೊಂದಿಗೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಸಂಘರ್ಷ ಮುಂದುವರಿದಿದೆ.

ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಈ ಯುದ್ಧವನ್ನು ಮುಂದುವರಿಸುವಂತೆ ಟ್ರಂಪ್ ಅವರ ಮೇಲೆ ಒತ್ತಡ ಹೇರುತ್ತಿದ್ದ ಇಸ್ರೇಲ್ ಅಧಿಕಾರಿಗಳಿಗೆ ಅಮೆರಿಕದ ಕದನ ವಿರಾಮದ ಪ್ರಸ್ತಾವನೆಯು ಅಚ್ಚರಿ ತಂದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಈ ಬೆಳವಣಿಗೆಗಳ ನಡುವೆಯೇ, ಅಮೆರಿಕವು ಈ ಪ್ರದೇಶಕ್ಕೆ ಹೆಚ್ಚುವರಿಯಾಗಿ 3,000ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಸುಮಾರು 50,000 ಅಮೆರಿಕನ್ ಸೈನಿಕರು ಮೊಕ್ಕಾಂ ಹೂಡಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವನ್ನು ಕೊನೆಗಾಣಿಸಲು ಮರುಮಾತುಕತೆಗೆ ವೇದಿಕೆ ಒದಗಿಸಲು ಮುಂದಾಗಿರುವ ಪಾಕಿಸ್ತಾನದ ಮಧ್ಯಸ್ಥಗಾರರ ಮೂಲಕ ಈ ಶಾಂತಿ ಯೋಜನೆಯನ್ನು ಇರಾನ್‌ಗೆ ರವಾನಿಸಲಾಗಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ ವಿಷಯದ ಬಗ್ಗೆ ಮಾಹಿತಿಯಿರುವ ಮೂಲವೊಂದು ಅಮೆರಿಕವು ಇರಾನ್‌ನೊಂದಿಗೆ ಶಾಂತಿ ಯೋಜನೆಯನ್ನು ಹಂಚಿಕೊಂಡಿರುವುದನ್ನು ರಾಯಿಟರ್ಸ್‌ಗೆ ಖಚಿತಪಡಿಸಿದೆ, ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

ಮಂಗಳವಾರ ಟ್ರೂತ್ ಸೋಶಿಯಲ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪೋಸ್ಟ್ ಒಂದನ್ನು ಟ್ರಂಪ್ ರಿಶೇರ್ ಮಾಡಿದ್ದರು. ಇರಾನ್ ಯುದ್ಧವನ್ನು ಕೊನೆಗಾಣಿಸಲು, ಅರ್ಥಪೂರ್ಣ ಮತ್ತು ನಿರ್ಣಾಯಕ ಮಾತುಕತೆಗಳನ್ನು ಸುಗಮಗೊಳಿಸಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಆ ಪೋಸ್ಟ್‌ನಲ್ಲಿ ಷರೀಫ್ ತಿಳಿಸಿದ್ದರು.

ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯಲಿರುವ ಮಾತುಕತೆಗಳಲ್ಲಿ ಪಾಲ್ಗೊಳ್ಳಲು ಅಮೆರಿಕವು ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ. ಆದರೆ, ಈ ಮಾತುಕತೆಗೆ ಇರಾನ್ ಅನ್ನು ಒಪ್ಪಿಸಲು ಮಧ್ಯಸ್ಥಗಾರರು ಇನ್ನೂ ಪ್ರಯತ್ನಿಸುತ್ತಿದ್ದಾರೆ. ಮುಂದಿನ ವಾರವೇ ಈ ಮಾತುಕತೆಗಳು ಪ್ರಾರಂಭವಾಗುವ ಸಾಧ್ಯತೆಯಿದ್ದು, ಅಮೆರಿಕದ ಪರವಾಗಿ ಮಧ್ಯಪ್ರಾಚ್ಯದ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಭಾಗವಹಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...