Homeಮುಖಪುಟಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

- Advertisement -
- Advertisement -

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು ವರದಿಯಾಗಿದೆ.

ಬೆಳಿಗ್ಗೆ 6.30ರ ಸುಮಾರಿಗೆ ರಾಯವರಂ ಸಮೀಪದ ಕಲ್ಲು ಕ್ವಾರಿಯ ಬಳಿ ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿವೆ.

ಅಪಘಾತ ಸಂಭವಿಸಿದ ವೇಳೆ ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಬಸ್‌ನಲ್ಲಿ 35 ಪ್ರಯಾಣಿಕರಿದ್ದರು. 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಮಾರ್ಕಪುರಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಬೆಂಕಿ ಹೊತ್ತಿಕೊಂಡ ತಕ್ಷಣ ಹತ್ತು ಪ್ರಯಾಣಿಕರು ಬಸ್‌ನಿಂದ ಇಳಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ ಹೈದರಾಬಾದ್‌ನಿಂದ ಪ್ರಕಾಶಂ ಜಿಲ್ಲೆಯ ಪಾಮುರಿಗೆ ಹೋಗುತ್ತಿತ್ತು. ಟಿಪ್ಪರ್ ಕಾಂಕ್ರೀಟ್ ಲೋಡ್ ನೊಂದಿಗೆ ಚಿಮಕುರ್ತಿಯಿಂದ ಮಾರ್ಕಪುರಂಗೆ ತೆರಳುತ್ತಿತ್ತು. ಅಪಘಾತದಲ್ಲಿ ಬಲಿಯಾದವರು ಕಣಿಗಿರಿ ಮತ್ತು ಪಾಮೂರು ನಿವಾಸಿಗಳು ಎಂದು ವರದಿಯಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ನಂದಿಸಲು ಮೂರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ.

ಮಾರ್ಕಪುರಂ ಶಾಸಕ ಕೆ. ನಾರಾಯಣ ರೆಡ್ಡಿ, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿದ್ದಾರೆ.

ಅವಘಡದ ಬಗ್ಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿರುವ ಅವರು, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಾರಿಗೆ ಸಚಿವ ಮಣಿಪಲ್ಲಿ ರಾಮಪ್ರಸಾದ್ ರೆಡ್ಡಿ ಕೂಡ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಕೂಡ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಅವರು ಬಲಿಪಶುಗಳ ಕುಟುಂಬಗಳಿಗೆ ಭರವಸೆ ನೀಡಿದ್ದಾರೆ.

Courtesy: thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...