Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ ನಡೆದಿದೆ.

ಮತದಾನದ ಹಕ್ಕು ಕಳೆದುಕೊಂಡ ಎಲ್ಲರೂ ಮುಸ್ಲಿಮರು. ಬಸಿರ್ಹತ್ ಉತ್ತರ ಕ್ಷೇತ್ರದ ಬೊರೊ ಗೋಬ್ರಾ ಗ್ರಾಮದ 5ನೇ ಬೂತ್‌ನ ಮತದಾರರು. ಎಸ್‌ಐಆರ್‌ ಬಳಿಕ ಪ್ರಕಟಗೊಂಡ ಮತದಾರರ ಕರಡು ಪಟ್ಟಿಯಲ್ಲಿ ಇವರೆಲ್ಲರನ್ನೂ ‘ತೀರ್ಪಿನ ಹಂತದಲ್ಲಿದ್ದಾರೆ’ ಎಂದು ಗುರುತಿಸಲಾಗಿತ್ತು. ಸೋಮವಾರ (23) ಮೊದಲ ಪೂರಕ ಪಟ್ಟಿಯಲ್ಲಿ ಇವರ ಹೆಸರು ಡಿಲೀಟ್ ಮಾಡಲಾಗಿದೆ ಎಂದು indiatoday.in ವರದಿ ಮಾಡಿದೆ.

ಬೂತ್ ಮಟ್ಟದ ಅಧಿಕಾರಿ ಮುಹಮ್ಮದ್ ಶಫಿಯುಲ್ ಅಲಂ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವುದು ಜನರ ಆಕ್ರೋಶವನ್ನು ತೀವ್ರಗೊಳಿಸಿದೆ. ಚುನಾವಣಾ ಆಯೋಗದ ಕ್ರಮದ ವಿರುದ್ದ ಅಧಿಕಾರಿಗಳ ಮನೆಗಳು ಮತ್ತು ಸ್ಥಳೀಯ ಬೀದಿಯಲ್ಲಿ ಪ್ರತಿಭಟನೆ ನಡೆಸಿರುವ ಗ್ರಾಮಸ್ಥರು, ‘ಒಂದು ಸಮುದಾಯವನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

ಮತದಾನದ ಹಕ್ಕು ಕಳೆದುಕೊಂಡವರು ಮತ್ತು ಸ್ಥಳೀಯ ಅಧಿಕಾರಿಗಳು ಚುನಾವಣಾ ಅಧಿಕಾರಿಗಳ ಪಾರದರ್ಶಕತೆಯ ಕೊರತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.

“ಹೆಸರು ಡಿಲಿಟ್ ಆದ ಬಗ್ಗೆ ನಾನು ಬಸಿರ್ಹತ್ ಬ್ಲಾಕ್ IIರ ಬ್ಲಾಕ್ ಅಭಿವೃದ್ಧಿ ಅಧಿಕಾರಿಯಿಂದ ಪರಿಹಾರವನ್ನು ಪಡೆಯಲು ಪ್ರಯತ್ನಿಸಿದಾಗ ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಪ್ರತಿಕ್ರಿಯೆ ಬಂದಿದೆ. ಚುನಾವಣಾ ನೋಂದಣಿ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಬಿಎಲ್‌ಒ ಆಲಂ ಹೇಳಿದ್ದಾರೆ.

ಚುನಾವಣಾ ಆಯೋಗ ಹನ್ನೊಂದು ಮಾನ್ಯ ದಾಖಲೆಗಳಲ್ಲಿ ಒಂದನ್ನು ಮಾತ್ರ ಬಯಸುತ್ತದೆಯಾದರೂ, ಅನೇಕರು ಮೂರು ಅಥವಾ ನಾಲ್ಕು ದಾಖಲೆಗಳನ್ನು ಸಲ್ಲಿಸಿದ್ದಾರೆ. ಆದರೂ, ಅವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹಕ್ಕು ಕಳೆದುಕೊಂಡ ಮತದಾರರಲ್ಲಿ ಒಬ್ಬರಾದ ಕಾಝಿರುಲ್ ಮಂಡಲ್ ಹೇಳಿದ್ದಾರೆ. ನಿರ್ದಿಷ್ಟ ಪಕ್ಷಪಾತದ ಬೇಡಿಕೆಗಳನ್ನು ಪೂರೈಸಲು ಆಯೋಗವು ರಾಜಕೀಯ ಪ್ರಭಾವದಿಂದ ಕಾರ್ಯನಿರ್ವಹಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕಾನೂನು ಪರಿಹಾರಕ್ಕಾಗಿ ಈ ವಿಷಯವನ್ನು ನ್ಯಾಯಮಂಡಳಿಗೆ ಕೊಂಡೊಯ್ಯುವುದಾಗಿ ಬಿಎಲ್‌ಒ ಆಲಂ ತಿಳಿಸಿದ್ದಾರೆ.

ಬಸಿರ್ಹತ್ ಬ್ಲಾಕ್ IIರ ಅಡಿಯಲ್ಲಿ ಬರುವ ಬೇಗಂಪುರ್ ಬಿಬಿಪುರ್ ಗ್ರಾಮ ಪಂಚಾಯತ್‌ನ 5ನೇ ಸಂಖ್ಯೆಯ ಬೂತ್ ಈ ವಿವಾದದ ಕೇಂದ್ರಬಿಂದುವಾಗಿದೆ. ಇಲ್ಲಿ ಒಟ್ಟು 992 ನೋಂದಾಯಿತ ಮತದಾರರಿದ್ದಾರೆ. ಇವರಲ್ಲಿ ಸಾವು ಅಥವಾ ಸ್ಥಳಾಂತರದ ಕಾರಣದಿಂದಾಗಿ 38 ಹೆಸರುಗಳನ್ನು ಸಾಮಾನ್ಯ ನಿಯಮದಂತೆ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಉಳಿದಂತೆ ಒಟ್ಟು 358 ಮತದಾರರ ಅರ್ಹತೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಕರಡು ಪಟ್ಟಿಯಲ್ಲಿ ಈ ಪೈಕಿ 18 ಪ್ರಕರಣಗಳು ಇತ್ಯರ್ಥಗೊಂಡಿದ್ದರೂ, ಉಳಿದ 340 ಮತದಾರರ ಹೆಸರನ್ನು ಅಂತಿಮ ತೀರ್ಮಾನ ಬಾಕಿ ಇರುವ ಪಟ್ಟಿಯಲ್ಲಿ ಇರಿಸಲಾಗಿತ್ತು. ಜವನರಿ 23ರಂದು ಪೂರಕ ಪಟ್ಟಿ ಪ್ರಕಟವಾಗುವವರೆಗೂ ಇದು ಮುಂದುವರಿದಿದ್ದು, ಅಂತಿಮವಾಗಿ ಆ ಎಲ್ಲಾ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಆಲಂ ಅವರು ಮಾತನಾಡಿ, ಈ ಮತದಾರರು ಅರ್ಜಿಗಳನ್ನು ಭರ್ತಿ ಮಾಡಲು ತಾವು ವೈಯಕ್ತಿಕವಾಗಿ ಸಹಾಯ ಮಾಡಿದ್ದಾಗಿ ಮತ್ತು ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡುವುದನ್ನು ಖಚಿತಪಡಿಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಆದರೂ, ಸಹ, ಆ ಹೆಸರುಗಳನ್ನು ಆಯ್ದು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...