Homeಕರ್ನಾಟಕ‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

- Advertisement -
- Advertisement -

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು. 

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ ಉದಾಸೀನ ತೋರುತ್ತಿದೆ. ಪಕ್ಕದ ರಾಜ್ಯಗಳಾದ ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳು ಒಳ ಮೀಸಲಾತಿಯನ್ನು ಜಾರಿ ಮಾಡುವ ಧೃಡ ತೀರ್ಮಾನವನ್ನು ಕೈಗೊಂಡಿದ್ದರು. ಕರ್ನಾಟಕ ಸರ್ಕಾರ ಮಾತ್ರ ಸಾಮಾಜಿಕ ನ್ಯಾಯದ ನಿರಾಕರಣೆ ಮಾಡುತ್ತಿದೆ. 

ಈಗ 27ನೇ ತಾರೀಖು ಒಳಮೀಸಲಾತಿ ಕುರಿತು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಆದರೆ ಒಂದು ದಿನ ಮುಂಚಿತವಾಗಿ ಸರ್ಕಾರ ಉಪಚುನಾವಣೆ ಎಂಬ ಕುಂಟುನೆಪವನ್ನು ಮುಂದಿಟ್ಟುಕೊಂಡು 27ನೇ ತಾರೀಖು (ಇಂದು) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಒಳಮೀಸಲಾತಿ ಹೋರಾಟಗಾರರ ಅಭಿಪ್ರಾಯಗಳನ್ನು ಪಡೆಯದೇ ಅನಿರ್ಧಿಷ್ಟಾವಧಿಗೆ ಮುಂದೂಡಿ ಒಳಮೀಸಲಾತಿಗೆ ಬಹುದೊಡ್ಡ ದ್ರೋಹ ಎಸಗಿದ್ದಾರೆ ಎಂದು ಸಮಗ್ರ ಒಳಮೀಸಲಾತಿ ಹೋರಾಟಗಾರರು ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. 

ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಘೋಷಣೆಯಾಗಿರುವ ಉಪಚುನಾವಣೆಯಲ್ಲಿ ಒಳಮೀಸಲಾತಿ ಹೋರಾಟಕ್ಕೆ ದ್ರೋಹ ಮಾಡಿದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ತೀರ್ಮಾನವನ್ನು ಸಮಗ್ರ ಒಳಮೀಸಲಾತಿ ಹೋರಾಟಗಾರರು ತೆಗೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ಸಾಮಾಜಿಕ ನ್ಯಾಯದ ಈ ಬೇಡಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಎಲ್ಲಾ ಪ್ರಜ್ಞಾವಂತರು ನಮ್ಮ ಈ ನಿಲುವನ್ನು ಬೆಂಬಲಿಸಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಒಳಮೀಸಲಾತಿ ಇಲ್ಲದೆ ತುಂಬಲು ಹೊರಟಿದ್ದ 56,432 ಹುದ್ದೆಗಳನ್ನು ಮುಂದಿನ ಸಚಿವ ಸಂಪುಟ ಸಭೆ ನಡೆಯುವವರೆಗೂ ಸರ್ಕಾರ ನೇಮಕಾತಿ ಮಾಡಬಾರದೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಸಾಮಾಜಿಕ ನ್ಯಾಯವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್‌ ನೇತೃತ್ವದ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಹರಿಕಾರರಾದ ಬಾಬು ಜಗಜೀವನ್‌ ರಾಮ್‌ ಹಾಗೂ ವಿಶ್ವರತ್ನ ಡಾ. ಬಿ. ಆರ್‌ ಅಂಬೇಡ್ಕರ್‌ ರವರ ಜಯಂತಿಯನ್ನು ಆಚರಿಸಲು ಯಾವುದೇ ನೈತಿಕತೆ ಇರುವುದಿಲ್ಲ. ಸಮುದಾಯಗಳು ಮಹನೀಯರ ಜಯಂತಿಯನ್ನು ಆಚರಿಸುತ್ತೇವೆ. ವಿಧಾನಸೌಧ ಮುಂಭಾಗದ ಆಚರಣೆ ಸೇರಿದಂತೆ, ಜಿಲ್ಲಾ ಮಟ್ಟದಲ್ಲಿ ಈ ಮಹನೀಯರ ಜಯಂತಿಯನ್ನು ಆಚರಿಸಲು ಸರ್ಕಾರ ಮುಂದಾದರೆ ಒಳಮೀಸಲಾತಿ ಹೋರಾಟಗಾರರು ಮುತ್ತಿಗೆ ಹಾಕುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. 

ದಾವಣಗೆರೆ ಉಪ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಮುಂದಿನ ರಾಜ್ಯ ಸಮಿತಿ ಸಭೆಯನ್ನು ದಾವಣಗೆರೆಯಲ್ಲಿ ಕರೆಯಲಾಗಿದೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರಾದ ಮಾರಸಂದ್ರ ಮುನಿಯಪ್ಪ, ಅಂಬಣ್ಣ ಅರೋಲಿಕರ್‌, ಬಸವರಾಜ್‌ ಕೌತಾಳ್‌, ನರಸಪ್ಪ ದಂಡೋರ, ಬಿ. ಆರ್‌ ಭಾಸ್ಕರ್‌ ಪ್ರಸಾದ್‌, ಕರಿಯಪ್ಪ ಗುಡಿಮನಿ, ಎಂ ಗುರುಮೂರ್ತಿ, ಬಿ.ಪಿ ಪ್ರಕಾಶ್‌ ಮೂರ್ತಿ, ಆರ್‌ ಮುನಿಯಪ್ಪ, ಪಿ. ಮೂರ್ತಿ, ವೈ. ಸಿ ಕಾಂಬ್ಳೆ, ಚಾವಡಿ ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...