Homeಅಂತರಾಷ್ಟ್ರೀಯಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಈ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಫೆಬ್ರವರಿ 28ರಿಂದ ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ಆರಂಭಿಸಿದ ಯುದ್ಧವನ್ನು ವಿರೋಧಿಸಿ ಟೆಲ್ ಅವಿವ್ ಮತ್ತು ಇತರ ಸ್ಥಳಗಳಲ್ಲಿ ಸಾಪ್ತಾಹಿಕ ಪ್ರತಿಭಟನೆಗಳು ನಡೆಯುತ್ತಿವೆ. ಆರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಶನಿವಾರ (ಮಾ.28) ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ವೇಳೆ ಪೊಲೀಸರು 21 ಜನರನ್ನು ಬಂಧಿಸಿದ್ದಾರೆ.

ಕಳೆದ ವರ್ಷ ಗಾಝಾ ಯುದ್ಧವನ್ನು ವಿರೋಧಿಸಿ ಹತ್ತಾರು ಸಾವಿರ ಜನರು ಬೀದಿಗಿಳಿದಿದ್ದ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸಂಖ್ಯೆ ಕಡಿಮೆಯಿದ್ದರೂ, ಕ್ರಮೇಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳಿವೆ.

ಶನಿವಾರದ ಪ್ರತಿಭಟನಾ ರ‍್ಯಾಲಿಗಳಲ್ಲಿ ಹಲವಾರು ಮಾಜಿ ಸಂಸದರು ಮತ್ತು ಪ್ರಮುಖ ಎಡಪಂಥೀಯ ಸಂಘಟನೆಗಳು ಭಾಗವಹಿಸಿದ್ದವು. ಇದರಲ್ಲಿ ಸ್ಟ್ಯಾಂಡಿಂಗ್ ಟುಗೆದರ್, ಪೀಸ್ ನೌ ಮತ್ತು ವುಮೆನ್ ವೇಜ್ ಪೀಸ್ ಸಂಘಟನೆಗಳು ಇದ್ದವು.

ಈ ಸಂಘಟನೆಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೀತಿಗಳನ್ನು ವಿರೋಧಿಸುತ್ತಿದ್ದು, ಪ್ರಜಾಪ್ರಭುತ್ವಕ್ಕೆ ಉಂಟಾಗುತ್ತಿರುವ ಹಾನಿ ಮತ್ತು ‘ಶಾಶ್ವತ ಯುದ್ಧ’ ನಿಲ್ಲಿಸುವಂತೆ ಒತ್ತಾಯಿಸುತ್ತಿವೆ.

‘ಸ್ಟ್ಯಾಂಡಿಂಗ್ ಟುಗೆದರ್’ ಒಂದು ಯಹೂದಿ-ಅರಬ್ ಹೋರಾಟಗಾರರ ಗುಂಪಾಗಿದ್ದು, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ದೀರ್ಘಕಾಲದಿಂದ ಶಾಂತಿಗಾಗಿ ಶ್ರಮಿಸುತ್ತಿರುವ ಪ್ರಮುಖ ಸಂಘಟನೆಗಳಾಗಿವೆ.

ಇಸ್ರೇಲ್‌ನಲ್ಲಿ ಪ್ರಸ್ತುತ ಯುದ್ಧಕಾಲದ ಭದ್ರತಾ ಮಾರ್ಗಸೂಚಿಗಳ ಅನ್ವಯ 50ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ, ಆದ್ದರಿಂದ ಈ ಪ್ರತಿಭಟನೆಗಳನ್ನು ಪೊಲೀಸರು ‘ಅನಧಿಕೃತ’ ಎಂದು ಪರಿಗಣಿಸಿ ಚದುರಿಸುತ್ತಿದ್ದಾರೆ.

ಟೆಲ್ ಅವಿವ್‌ನಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸುತ್ತಿರುವ ದೃಶ್ಯಗಳು ಎಎಫ್‌ಪಿ ವಿಡಿಯೋ ತುಣುಕುಗಳಲ್ಲಿ ಕಂಡುಬಂದಿವೆ. ಇಂತಹದೇ ದೃಶ್ಯಗಳನ್ನು ಉತ್ತರ ಭಾಗದ ನಗರವಾದ ಹೈಫಾದಲ್ಲಿಯೂ ಹೋರಾಟಗಾರರು ಚಿತ್ರೀಕರಿಸಿದ್ದಾರೆ.

ಪ್ರತಿಭಟನೆಗಳಿಗೆ ಅನುಮತಿ ನೀಡಿರಲಿಲ್ಲ ಎಂದು ಸಂಘಟನಾ ಗುಂಪುಗಳಲ್ಲೊಂದರ ವಕ್ತಾರರು ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟೆಲ್ ಅವಿವ್‌ನಲ್ಲಿ ಭದ್ರತಾ ಪಡೆಗಳು ಕೆಲವು ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಹಲವರು ನೆಲಕ್ಕೆ ಬಿದ್ದಿದ್ದಾರೆ ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರನ ಕತ್ತನ್ನು ಬಲವಾಗಿ ಹಿಸುಕಿ ಹಿಡಿದಿಡಲಾಗಿತ್ತು ಎಂದು ಎಎಫ್‌ಪಿ ಪತ್ರಕರ್ತರು ವರದಿ ಮಾಡಿದ್ದಾರೆ.

ತುರ್ತು ಪರಿಸ್ಥಿತಿಯ ನಿಯಮಗಳ ಅಡಿಯಲ್ಲಿ ಪ್ರತಿಭಟನಾ ಸಭೆಗಳನ್ನು ನಿಷೇಧಿಸಲಾಗಿದೆ ಎಂದು ‘ಹೋಮ್ ಫ್ರಂಟ್ ಕಮಾಂಡ್’ ಪ್ರತಿನಿಧಿಯು ಸ್ಪಷ್ಟಪಡಿಸಿದ ನಂತರ, ‘ಅನಧಿಕೃತ ಪ್ರತಿಭಟನೆಗಳನ್ನು ಚದುರಿಸಲಾಗಿದೆ ಎಂದು ಇಸ್ರೇಲ್ ಪೊಲೀಸರು ತಿಳಿಸಿದ್ದಾರೆ.

ಟೆಲ್‌ ಅವಿವ್‌ನಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಫಾದಲ್ಲಿ ಮತ್ತೂ ಐದು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಅಲ್ಲಿ ‘ಪ್ರತಿಭಟನಾಕಾರರು ರಸ್ತೆ ತಡೆ ನಡೆಸತೊಡಗಿದರು ಮತ್ತು ಅಧಿಕಾರಿಗಳ ಸೂಚನೆಗಳನ್ನು ಪಾಲಿಸಲಿಲ್ಲ’ ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರನ್ನು ಬಂಧಿಸಲು ನಡೆಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಯುದ್ಧದ ನಾಲ್ಕನೇ ವಾರದಲ್ಲಿದ್ದೇವೆ, ಆದರೆ ಈ ಯುದ್ಧದ ನಿಜವಾದ ಗುರಿ ಏನೆಂದು ಯಾರಿಗೂ ತಿಳಿದಿಲ್ಲ” ಎಂದು ಟೆಲ್ ಅವಿವ್‌ನ 52 ವರ್ಷದ ಪ್ರವಾಸ ಮಾರ್ಗದರ್ಶಿ ಯೋರಾಮ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

“ಇದರಿಂದ (ಯುದ್ದದಿಂದ) ನಾವು ಹೇಗೆ ಹೊರಬರಲಿದ್ದೇವೆ ಎಂದು ಯಾರೂ ಯೋಚನೆ ಮಾಡುತ್ತಿಲ್ಲ. ಇದು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ” ಎಂದು 76 ವರ್ಷದ ಜೋನ್ ಲೆವಿನ್ ಹೇಳಿದ್ದಾರೆ. ಅಲ್ಲದೆ, ಅವರ ಪ್ರಕಾರ ಈ ಯುದ್ಧವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ‘ರಾಜಕೀಯ ತಂತ್ರದ’ ಭಾಗವಾಗಿದೆ ಎಂದು ವರದಿಗಳು ವಿವರಿಸಿವೆ.

ಇಸ್ರೇಲ್‌ನಲ್ಲಿ ಇರಾನ್ ವಿರುದ್ಧದ ಯುದ್ಧಕ್ಕೆ ಸಾರ್ವಜನಿಕ ಬೆಂಬಲ ಇನ್ನೂ ಹೆಚ್ಚಾಗಿಯೇ ಇದೆ. ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್ ಶುಕ್ರವಾರ (ಮಾ. 27) ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಶೇ. 78ರಷ್ಟು ಯಹೂದಿ ಇಸ್ರೇಲಿಗಳು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಅರಬ್ ಇಸ್ರೇಲಿ ಅಲ್ಪಸಂಖ್ಯಾತರಲ್ಲಿ ಈ ಬೆಂಬಲ ಕೇವಲ ಶೇ. 19ರಷ್ಟು ಮಾತ್ರ ಇದೆ.

ಆದಾಗ್ಯೂ, ಯುದ್ಧವನ್ನು ವಿರೋಧಿಸುವವರ ಪಾಲು ಮಾರ್ಚ್ ಆರಂಭದಲ್ಲಿದ್ದ ಶೇ. 4 ರಿಂದ ಈಗ ಶೇ. 11.5ಕ್ಕೆ ಏರಿದೆ ಎಂದು ಸಂಸ್ಥೆಯ ಸಮೀಕ್ಷೆ ಪತ್ತೆಹಚ್ಚಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...