Homeಅಂತರಾಷ್ಟ್ರೀಯದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

- Advertisement -
- Advertisement -

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ ಸ್ಪಷ್ಟ ಗುರುತುಗಳಿದ್ದ ಮಾಧ್ಯಮ ವಾಹನದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಲ್ ಮಯಾದೀನ್ ವಾಹಿನಿಯ ಫಾತಿಮಾ ಫ್ತೂನಿ, ಆಕೆಯ ಸಹೋದರ ಹಾಗೂ ಸಹೋದ್ಯೋಗಿ ಮೊಹಮ್ಮದ್, ಮತ್ತು ಅಲ್-ಮನಾರ್ ವಾಹಿನಿಯ ಅಲಿ ಶುವೈಬ್ ಅವರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪತ್ರಕರ್ತರಿದ್ದ ವಾಹನದ ಮೇಲೆ ನಾಲ್ಕು ನಿಖರ ಕ್ಷಿಪಣಿಗಳು (precision missiles) ಅಪ್ಪಳಿಸಿವೆ ಎಂದು ಅಲ್ ಮಯಾದೀನ್ ಮಾಧ್ಯಮ ಸಂಸ್ಥೆ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪತ್ರಕರ್ತರ ಮೇಲಿನ ಈ ದಾಳಿಯಲ್ಲಿ ಇತರ ಹಲವಾರು ಪತ್ರಕರ್ತರು ಗಾಯಗೊಂಡಿದ್ದಾರೆ. ಅಲ್ಲದೆ, ಸ್ಥಳಕ್ಕೆ ಧಾವಿಸಿದ ಆಂಬ್ಯುಲೆನ್ಸ್‌ಗಳನ್ನೂ ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ಈ ವೇಳೆ ಓರ್ವ ಅರೆ ವೈದ್ಯಕೀಯ ಸಿಬ್ಬಂದಿ (ತುರ್ತು ಚಿಕಿತ್ಸಾ ಸಹಾಯಕ) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಲೆಬನಾನ್‌ನಲ್ಲಿ ಆರೋಗ್ಯ ರಕ್ಷಣಾ ವ್ಯವಸ್ಥೆಯ ಮೇಲೆ ನಡೆದ ಐದು ಪ್ರತ್ಯೇಕ ದಾಳಿಗಳಲ್ಲಿ ಶನಿವಾರ ಇತರ ಎಂಟು ಅರೆ ವೈದ್ಯಕೀಯ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇಸ್ರೇಲ್ ಮಿಲಿಟರಿ ಪತ್ರಕರ್ತರನ್ನು ಕೊಂದ ದಾಳಿಯನ್ನು ಒಪ್ಪಿಕೊಂಡಿದೆ. ಪತ್ರಕರ್ತ ಅಲಿ ಶುವೈಬ್ ಹಿಜ್ಬುಲ್ಲಾ ಗುಪ್ತಚರ ಘಟಕದ ಭಾಗವಾಗಿದ್ದರು ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲಿ ಸೈನಿಕರ ಚಲನವಲನಗಳನ್ನು ಪತ್ತೆಹಚ್ಚುತ್ತಿದ್ದರು ಎಂದು ಅದು ಪ್ರತಿಪಾದಿಸಿದೆ. ಅಷ್ಟೇ ಅಲ್ಲದೆ, ಅವರು ಹಿಜ್ಬುಲ್ಲಾದ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ಕೂಡ ಆರೋಪಿಸಿದೆ.

ಅಲಿ ಶುವೈಬ್ ಅವರ ಉದ್ಯೋಗದಾತ ಸಂಸ್ಥೆಯಾದ ಅಲ್-ಮನಾರ್, ಶುವೈಬ್ ಅವರನ್ನು ತಮ್ಮ ಅತ್ಯಂತ ಪ್ರಮುಖ ಯುದ್ಧ ವರದಿಗಾರರಲ್ಲಿ ಒಬ್ಬರೆಂದು ಬಣ್ಣಿಸಿದೆ. ಅವರು ದಶಕಗಳಿಂದ ಲೆಬನಾನ್ ಮೇಲೆ ನಡೆದ ಇಸ್ರೇಲಿ ದಾಳಿಗಳ ಬಗ್ಗೆ ವರದಿ ಮಾಡುತ್ತಿದ್ದರು ಎಂದು ಸಂಸ್ಥೆ ತಿಳಿಸಿದೆ.

ಗಾಝಾದಲ್ಲಿ 270ಕ್ಕೂ ಹೆಚ್ಚು ಪತ್ರಕರ್ತರನ್ನು ಕೊಂದಿರುವ ಇಸ್ರೇಲ್, ತಾನು ಗುರಿಯಾಗಿಸುವ ವರದಿಗಾರರು ಸಶಸ್ತ್ರ ಗುಂಪುಗಳ ಸದಸ್ಯರು ಅಥವಾ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಯಾವುದೇ ಸಾರ್ವಜನಿಕ ಸಾಕ್ಷ್ಯವನ್ನು ನೀಡದೆ ಪದೇ ಪದೇ ಆರೋಪಿಸುತ್ತಿದೆ.

ಇಸ್ರೇಲ್‌ನ ಈ ಆರೋಪಗಳನ್ನು ಶನಿವಾರ ತಮ್ಮ ಸಿಬ್ಬಂದಿಯನ್ನು ಕಳೆದುಕೊಂಡ ಎರಡೂ ಮಾಧ್ಯಮ ಸಂಸ್ಥೆಗಳು ಒಪ್ಪಿಲ್ಲ.

ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರು, ತಮ್ಮ ವೃತ್ತಿಪರ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ನಾಗರಿಕರನ್ನು ಗುರಿಯಾಗಿಸುವ ಮೂಲಕ ಇಸ್ರೇಲ್ ಮತ್ತೊಮ್ಮೆ “ಅಂತಾರಾಷ್ಟ್ರೀಯ ಕಾನೂನಿನ ಅತ್ಯಂತ ಮೂಲಭೂತ ನಿಯಮಗಳನ್ನು” ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ಪತ್ರಕರ್ತರಿಗೆ ಸಶಸ್ತ್ರ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ರಕ್ಷಣೆ ನೀಡುವ ಎಲ್ಲಾ ನಿಯಮಗಳು ಮತ್ತು ಒಪ್ಪಂದಗಳನ್ನು ಉಲ್ಲಂಘಿಸುವ ಇಸ್ರೇಲ್‌ನ ಈ ಕೃತ್ಯ ಒಂದು ಬಹಿರಂಗ ಅಪರಾಧ ಎಂದಿದ್ದಾರೆ.

ಪ್ರಧಾನ ಮಂತ್ರಿ ನವಾಫ್ ಸಲಾಮ್ ಅವರು ಈ ದಾಳಿಯನ್ನು “ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಘೋರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...