Homeಮುಖಪುಟಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

- Advertisement -
- Advertisement -

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಬಿಜೆಡಿ ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರಿಗೆ ಮಾರ್ಚ್ 28ರಂದು ಬರೆದ ಪತ್ರದಲ್ಲಿ ಪಾತ್ರಾ ಅವರು, “ಸಾರ್ವಜನಿಕ ಹೇಳಿಕೆಯೊಂದರಲ್ಲಿ ದಿವಂಗತ ಬಿಜು ಪಟ್ನಾಯಕ್ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ವ್ಯಕ್ತಿಯ ಅಡಿಯಲ್ಲಿ ಕೆಲಸ ಮಾಡಲು ನನ್ನ ಮನಸ್ಸಾಕ್ಷಿ ಒಪ್ಪುತ್ತಿಲ್ಲ” ಎಂದು ಹೇಳಿದ್ದಾರೆ.

ಮಾರ್ಚ್ 27ರಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ದುಬೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಮೆರಿಕದ ಹಣ ಹಾಗೂ ಸಿಐಎ ಏಜೆಂಟ್‌ಗಳ ಸಹಯೋಗದೊಂದಿಗೆ ಚೀನಾದ ವಿರುದ್ಧ 1962ರ ಯುದ್ಧವನ್ನು ಮಾಡಿದ್ದರು ಎಂದು ಆರೋಪಿಸಿದ್ದರು. ಬಿಜು ಪಟ್ನಾಯಕ್ ಅವರನ್ನು ಅಮೆರಿಕ ಸರ್ಕಾರ, ಸಿಐಎ ಮತ್ತು ನೆಹರೂ ನಡುವಿನ ‘ಸಂಪರ್ಕ ಕೊಂಡಿ’ ಎಂದು ಹೇಳಿದ್ದರು.

ಬಿಜು ಪಟ್ನಾಯಕ್ ಅವರು ಒಡಿಶಾದ ಚಾರ್ಬಾಟಿಯಾ ವಾಯುನೆಲೆಯಲ್ಲಿ ಅಮೆರಿಕದ ಬೇಹುಗಾರಿಕಾ U2 ವಿಮಾನಗಳ ಕಾರ್ಯಾಚರಣೆಗೆ ಸಿಐಎಗೆ ಸಹಾಯ ಮಾಡಿದ್ದರು ಎಂದು ದುಬೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, 1963ರಿಂದ 1979 ರವರೆಗೆ ಈ ವಾಯುನೆಲೆಯು ಭಾರತದಲ್ಲಿದ್ದ ಅಮೆರಿಕದ ಮಿಲಿಟರಿ ಪಡೆಗೆ ಆಶ್ರಯ ತಾಣವಾಗಿತ್ತು ಎಂದೂ ಹೇಳಿದ್ದರು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಪಾತ್ರಾ ಅವರು, ಬಿಜು ಪಟ್ನಾಯಕ್ ಅವರ ವಿರುದ್ಧ ದುಬೆ ಮಾಡಿರುವ ಆರೋಪಗಳು, “ಅತಿರೇಕ, ಸುಳ್ಳು ಮತ್ತು ಬೇಜವಾಬ್ದಾರಿತನದಿಂದ ಕೂಡಿತ್ತು” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರು ಒಬ್ಬ ಮಹೋನ್ನತ ಸ್ವಾತಂತ್ರ್ಯ ಹೋರಾಟಗಾರ, ದೂರದೃಷ್ಟಿಯ ನಾಯಕ ಮತ್ತು ಈ ಮಣ್ಣಿನ ಮಗ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ಪ್ರಶ್ನಾತೀತವಾಗಿದೆ. ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ತಿರುಚುವ ಮತ್ತು ಪೂಜನೀಯ ನಾಯಕನ ಹೆಸರಿಗೆ ಮಸಿ ಬಳಿಯುವ ಇಂತಹ ಪ್ರಯತ್ನಗಳು ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ” ಎಂದು ಬಿಜಿಡಿ ರಾಜ್ಯಸಭಾ ನಾಯಕ ಪಾತ್ರಾ ಹೇಳಿದ್ದಾರೆ.

ದುಬೆ ಹೇಳಿಕೆಯು ಒಡಿಶಾದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಿಜು ಜನತಾ ದಳ (ಬಿಜೆಡಿ) ಮತ್ತು ಪಟ್ನಾಯಕ್ ಕುಟುಂಬದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜು ಪಟ್ನಾಯಕ್ ಅವರ ಮಗ ಹಾಗೂ ಒಡಿಶಾದ ಮಾಜಿ ಮುಖ್ಯಮಂತ್ರಿ  ನವೀನ್ ಪಟ್ನಾಯಕ್ ಅವರು ದುಬೆ ಹೇಳಿಕೆಯನ್ನು ‘ಅತಿರೇಕದ ವರ್ತನೆ’ ಎಂದು ಕರೆದಿದ್ದಾರೆ. ಚೀನಾ ಯುದ್ಧದ ಸಮಯದಲ್ಲಿ ಬಿಜು ಪಟ್ನಾಯಕ್ ಅವರ ಕಾರ್ಯತಂತ್ರ ಮತ್ತು ದೇಶಭಕ್ತಿಯನ್ನು ನೆನಪಿಸಿದ ಅವರು, ದುಬೆ ಅವರಿಗೆ ‘ಮಾನಸಿಕ ವೈದ್ಯರ ಅಗತ್ಯವಿದೆ’ ಎಂದು ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಸೋಮವಾರ (ಮಾ.30) ಬಿಜೆಡಿ ಸಂಸದರು ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿ, ಸದನದಿಂದ ಹೊರನಡೆದಿದ್ದಾರೆ.

ದುಬೆ ಅವರ ಹೇಳಿಕೆಯು ‘ಒಡಿಶಾದ ಅಸ್ಮಿತೆಗೆ’ ಮಾಡಿದ ಅವಮಾನ ಎಂದು ಬಿಜೆಡಿ ಸಂಸದರು ಟೀಕಿಸಿದ್ದು, ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜು ಪಟ್ನಾಯಕ್ ಅವರು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟಗಾರರನ್ನು ರಕ್ಷಿಸಿದವರು ಮತ್ತು ಎರಡನೇ ಮಹಾಯುದ್ಧದಲ್ಲಿ ರಷ್ಯಾಕ್ಕೆ ಸಹಾಯ ಮಾಡಿದ ಧೀಮಂತ ನಾಯಕ. ಅಂತಹ ನಾಯಕನನ್ನು ‘ಸಿಐಎ ಏಜೆಂಟ್’ ಎಂದು ಕರೆಯುವುದು ಇತಿಹಾಸವನ್ನು ತಿರುಚುವ ನೀಚ ಪ್ರಯತ್ನ ಎಂದು ಬಿಜೆಡಿ ಕಿಡಿಕಾರಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...