Homeಮುಖಪುಟಜನಗಣತಿ-2027 : 'ಸ್ಥಿರ' ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

- Advertisement -
- Advertisement -

ತಮ್ಮ ಸಂಬಂಧ ‘ಸ್ಥಿರ’ ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ.

ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಅಲ್ಲಿ, “ಸಹಜೀವನದಲ್ಲಿರುವ (live-in relationship) ಜೋಡಿಯನ್ನು ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆಯೇ?” ಎಂಬ ಪ್ರಶ್ನೆಗೆ, “ಒಂದು ವೇಳೆ ಆ ಜೋಡಿ ತಮ್ಮ ಸಂಬಂಧವನ್ನು ‘ಸ್ಥಿರ’ ಎಂದು ಹೇಳಿಕೊಳ್ಳುವುದಾದರೆ ಅವರನ್ನು ವಿವಾಹಿತ ದಂಪತಿಯೆಂದು ಪರಿಗಣಿಸಬೇಕು” ಎಂಬುವುದಾಗಿ ಉತ್ತರಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ವಸತಿ ಗಣತಿ ನಡೆಯಲಿದ್ದು, ಆಯಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ನಿರ್ಧಾರದಂತೆ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ ನಡುವಿನ 30 ದಿನಗಳಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೊದಲ ಹಂತದಲ್ಲಿ ಮನೆಗಳ ಸ್ಥಿತಿಗತಿ, ಕುಟುಂಬದ ವಿವರಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಅಡುಗೆಗೆ ಬಳಸುವ ಇಂಧನ ಮತ್ತು ಇಂಟರ್ನೆಟ್‌ನಂತಹ ಸೌಲಭ್ಯಗಳ ಲಭ್ಯತೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ರೇಡಿಯೋ, ಟಿವಿ, ಕಂಪ್ಯೂಟರ್, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನಗಳಂತಹ ಆಸ್ತಿಗಳ ವಿವರಗಳನ್ನು ಸಹ ಆಯಾ ಕುಟುಂಬಗಳಿಂದ ಪಡೆಯಲಾಗುತ್ತದೆ.

ಎರಡನೇ ಹಂತದಲ್ಲಿ, ಫೆಬ್ರವರಿ 2027 ರಿಂದ ಭಾರತದಾದ್ಯಂತ ಜನಗಣತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೆ ಲಡಾಖ್ ಮತ್ತು ಜಮ್ಮು ಕಾಶ್ಮೀರದ ಹಿಮಪಾತ ಪ್ರದೇಶಗಳು ಹಾಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇದನ್ನು ಸೆಪ್ಟೆಂಬರ್ 2026ರಲ್ಲೇ ನಡೆಸಲಾಗುತ್ತದೆ.

ಈ ಹಂತದಲ್ಲಿ ವ್ಯಕ್ತಿಗಳ ಹೆಸರು, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜಾತಿ, ಧರ್ಮ, ಶಿಕ್ಷಣ, ಭಾಷೆ, ಅಂಗವೈಕಲ್ಯ, ವಲಸೆ, ಉದ್ಯೋಗ ಮತ್ತು ಸಂತಾನೋತ್ಪತ್ತಿಯ (ವಿವಾಹಿತ ಮಹಿಳೆಯರಿಗೆ ಸಂಬಂಧಿಸಿದಂತೆ) ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ಈ ಬಾರಿ ವಿಶೇಷವೆಂದರೆ, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯುವ ಸಾಂಪ್ರದಾಯಿಕ ವಿಧಾನದ ಜೊತೆಗೆ, ನಾಗರಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (self-enumeration) ಆಯ್ಕೆಯನ್ನು ಸಹ ನೀಡಲಾಗಿದೆ.

ಸ್ವಯಂ-ಗಣತಿಯು ನಾಗರಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ವೆಬ್ ಪೋರ್ಟಲ್ ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ಭರ್ತಿ ಮಾಡಲು ಅವಕಾಶ ನೀಡುತ್ತದೆ. ಅಂದರೆ, ವ್ಯಕ್ತಿಯೊಬ್ಬರು ಸ್ವಯಂ-ಗಣತಿ ಪೋರ್ಟಲ್‌ನಲ್ಲಿ ವಿವರಗಳನ್ನು ನೀಡುವ ಮೂಲಕ ಈ ಆಯ್ಕೆಯನ್ನು ಬಳಸಿಕೊಳ್ಳಬಹುದು. ಇದಾದ ನಂತರ, ಗಣತಿದಾರರು ಆ ಮನೆಗೆ ಭೇಟಿ ನೀಡಿ, ಸ್ವಯಂ-ಗಣತಿಯ ಐಡಿ (SE ID) ಪಡೆದುಕೊಂಡು ಮಾಹಿತಿಯನ್ನು ದೃಢೀಕರಿಸುತ್ತಾರೆ.

ಸಾಮಾನ್ಯ, ಸಾಂಸ್ಥಿಕ ಮತ್ತು ವಸತಿರಹಿತ ಸೇರಿದಂತೆ ಎಲ್ಲಾ ಕುಟುಂಬಗಳು ಸ್ವಯಂ ಗಣತಿ ಮಾಡಬಹುದೇ?

2027ರ ಜನಗಣತಿಯ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ರೀತಿಯ ಕುಟುಂಬಗಳಿಗೆ ಸ್ವಯಂ-ಗಣತಿ (Self-enumeration) ಲಭ್ಯವಿಲ್ಲ.

ಕೇವಲ ಸಾಮಾನ್ಯ ಕುಟುಂಬಗಳಿಗೆ ಮಾತ್ರ ಸ್ವಯಂ-ಗಣತಿ ಮಾಡಲು ಅವಕಾಶ ನೀಡಲಾಗಿದೆ. ಈ ಕುಟುಂಬಗಳು ನಿಗದಿತ ವೆಬ್ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು.

2011ರ ಜನಗಣತಿಯ ಪ್ರಕಾರ, ‘ಸಾಮಾನ್ಯ ಕುಟುಂಬ’ ಎಂದರೆ ಸಾಮಾನ್ಯವಾಗಿ ಒಟ್ಟಿಗೆ ವಾಸಿಸುವ ಮತ್ತು ಒಂದೇ ಅಡುಗೆಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಸೇವಿಸುವ ವ್ಯಕ್ತಿಗಳ ಗುಂಪು. ಕೆಲಸದ ಒತ್ತಡ ಅಥವಾ ಅನಿವಾರ್ಯ ಕಾರಣಗಳಿಂದಾಗಿ ಯಾರಾದರೂ ಹೊರಗಡೆ ಊಟ ಮಾಡಬೇಕಾದ ಸಂದರ್ಭಗಳನ್ನು ಹೊರತುಪಡಿಸಿ, ಈ ಗುಂಪು ಒಂದೇ ಅಡುಗೆಮನೆಯನ್ನು ಅವಲಂಬಿಸಿರುತ್ತದೆ. ಅಂತಹ ಕುಟುಂಬದ ಸದಸ್ಯರು ಪರಸ್ಪರ ಸಂಬಂಧಿಕರಾಗಿರಬಹುದು, ಸಂಬಂಧವಿಲ್ಲದವರಾಗಿರಬಹುದು ಅಥವಾ ಎರಡೂ ರೀತಿಯ ವ್ಯಕ್ತಿಗಳ ಮಿಶ್ರಣವಾಗಿರಬಹುದು.

ಆದಾಗ್ಯೂ, ಸಂಬಂಧವಿಲ್ಲದ ವ್ಯಕ್ತಿಗಳ ಗುಂಪು ಒಂದು ಮನೆಯಲ್ಲಿ ವಾಸವಿದ್ದು, ಒಂದೇ ಅಡುಗೆಮನೆಯಿಂದ ಊಟ ಮಾಡದಿದ್ದರೆ, ಅವರನ್ನು ಒಂದೇ ಕುಟುಂಬದ ಭಾಗವೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನೂ ಪ್ರತ್ಯೇಕ ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಜನಗಣತಿಯ ಮೊದಲ ಹಂತದಲ್ಲಿ ಸ್ವಯಂ-ಗಣತಿಯನ್ನು ಮಾಡಬಹುದು. ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಯುವ ಮನೆಗಳ ಪಟ್ಟಿ ಮಾಡುವ ಪ್ರಕ್ರಿಯೆ (Houselisting Operations) ಆರಂಭವಾಗುವ ಮೊದಲು, ಕೇವಲ 15 ದಿನಗಳ ಕಾಲ ಈ ವೆಬ್ ಪೋರ್ಟಲ್ ಸಾರ್ವಜನಿಕರಿಗೆ ತೆರೆದಿರುತ್ತದೆ.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...