Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....