Homeಮುಖಪುಟವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಲೋಕಸಭೆಯು ಮಸೂದೆಯನ್ನು ಅಂಗೀಕರಿಸಿದ ಒಂದು ದಿನದ ನಂತರ, ಅಂದರೆ, 2026ರ ಮಾರ್ಚ್ 25ರಂದು ರಾಜ್ಯಸಭೆಯು ಮಸೂದೆಯನ್ನು ಅಂಗೀಕರಿಸಿತ್ತು. ಟ್ರಾನ್ಸ್‌ಜೆಂಡರ್‌ಗಳ ಘನತೆಯ ಮೇಲೆ ಪರಿಣಾಮ ಬೀರುವ ನಿಬಂಧನೆಗಳನ್ನು ಮಸೂದೆ ಹೊಂದಿರುವುದರಿಂದ, ಅದನ್ನು ಹೆಚ್ಚಿನ ಪರಿಶೀಲನೆಗಾಗಿ ಸದನದ ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

ಮಸೂದೆಯ ವಿರುದ್ಧದ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್, “ಇದು ಸಮಾಜದ ಎಲ್ಲಾ ವರ್ಗಗಳನ್ನು ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ” ಎಂದು ಹೇಳಿದ್ದರು. ಜೈವಿಕ ಸಮಸ್ಯೆಗಳಿಂದಾಗಿ ತಾರತಮ್ಯವನ್ನು ಎದುರಿಸುವವರಿಗೆ ಈ ಮಸೂದೆ ರಕ್ಷಣೆ ನೀಡುತ್ತದೆ ಮತ್ತು ಟ್ರಾನ್ಸ್‌ಜೆಂಡರ್ ಜನರಿಗೆ ಕಾನೂನು ಮಾನ್ಯತೆ ಮತ್ತು ರಕ್ಷಣೆ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದರು.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕುರಿತು ಪ್ರಸ್ತುತ ಇರುವ ಅಸ್ಪಷ್ಟ ವ್ಯಾಖ್ಯಾನದಿಂದ ಕಾಯ್ದೆಯ ಪ್ರಯೋಜನಗಳು ತಲುಪಬೇಕಾದ ನಿಜವಾದ ತುಳಿತಕ್ಕೊಳಗಾದ ವ್ಯಕ್ತಿಗಳನ್ನು ಗುರುತಿಸುವುದು ಅಸಾಧ್ಯ ಎಂದು ಸರ್ಕಾರ ಹೇಳಿತ್ತು.

2019ರ ಕಾಯ್ದೆಯ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಯಾವ ವ್ಯಕ್ತಿಯ ಲಿಂಗವು ಹುಟ್ಟಿನ ಸಮಯದಲ್ಲಿ ಗುರುತಿಸಲಾದ ಲಿಂಗಕ್ಕೆ ಹೊಂದಿಕೆಯಾಗುವುದಿಲ್ಲವೋ ಅಂತಹ ವ್ಯಕ್ತಿ”. ಇದರಲ್ಲಿ ಟ್ರಾನ್ಸ್-ಮೆನ್ (trans-man) ಅಥವಾ ಟ್ರಾನ್ಸ್-ವುಮೆನ್ (trans-woman) ಸೇರಿರುತ್ತಾರೆ (ಅಂತಹ ವ್ಯಕ್ತಿಯು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ, ಹಾರ್ಮೋನ್ ಥೆರಪಿ, ಲೇಸರ್ ಥೆರಪಿ ಅಥವಾ ಇನ್ನಾವುದೇ ಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಇಲ್ಲದಿದ್ದರೂ ಸಹ). ಇದರೊಂದಿಗೆ ಅಂತರಲಿಂಗ ವ್ಯತ್ಯಾಸವಿರುವ ವ್ಯಕ್ತಿಗಳು (intersex variations), ಜೆಂಡರ್ ಕ್ವೀರ್ (genderqueer) ಮತ್ತು ಕಿನ್ನರ್, ಹಿಜ್ರಾ, ಅರವಾನಿ ಹಾಗೂ ಜೋಗ್ತಾದಂತಹ ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳೂ ಈ ವ್ಯಾಪ್ತಿಗೆ ಬರುತ್ತಾರೆ.

ಹೊಸ ವ್ಯಾಖ್ಯಾನದ ಪ್ರಕಾರ, ಟ್ರಾನ್ಸ್‌ಜೆಂಡರ್ ಅಥವಾ ತೃತೀಯ ಲಿಂಗಿ ಎಂದರೆ, “ಕಿನ್ನರ್, ಹಿಜ್ರಾ, ಅರವಾನಿ, ಜೋಗ್ತಾ ಅಥವಾ ನಪುಂಸಕರಂತಹ (eunuch) ಸಾಮಾಜಿಕ-ಸಾಂಸ್ಕೃತಿಕ ಗುರುತುಗಳನ್ನು ಹೊಂದಿರುವ ವ್ಯಕ್ತಿಗಳು”. ಇದರಲ್ಲಿ ಅಂತರಲಿಂಗ ವ್ಯತ್ಯಾಸವಿರುವ (intersex variations) ವ್ಯಕ್ತಿಗಳು ಹಾಗೂ ತಮ್ಮ ಪ್ರಾಥಮಿಕ ಲೈಂಗಿಕ ಲಕ್ಷಣಗಳು, ಬಾಹ್ಯ ಜನನಾಂಗಗಳು, ಕ್ರೋಮೋಸೋಮ್ ಮಾದರಿಗಳು, ಗೊನಾಡಲ್ ಬೆಳವಣಿಗೆ, ಎಂಡೋಜೆನಸ್ ಹಾರ್ಮೋನ್ ಉತ್ಪಾದನೆ ಅಥವಾ ಪ್ರತಿಕ್ರಿಯೆ ಅಥವಾ ಅಂತಹ ಇತರ ವೈದ್ಯಕೀಯ ಸ್ಥಿತಿಗಳಲ್ಲಿ “ಪುರುಷ ಅಥವಾ ಸ್ತ್ರೀ ಬೆಳವಣಿಗೆಗೆ” ಹೋಲಿಸಿದರೆ “ಜನ್ಮಜಾತ ವ್ಯತ್ಯಾಸಗಳನ್ನು” (congenital variations) ಹೊಂದಿರುವ ವ್ಯಕ್ತಿಗಳು ಸೇರುತ್ತಾರೆ.

ಮುಂದುವರಿದು, ಈ ವ್ಯಾಖ್ಯಾನವು “ಯಾವುದೇ ವ್ಯಕ್ತಿ ಅಥವಾ ಮಗುವನ್ನು ಅಂಗಚ್ಛೇದನ, ನಪುಂಸಕೀಕರಣ (emasculation), ವೃಷಣಗಳನ್ನು ತೆಗೆಯುವುದು (castration), ಕಾಲು ಅಥವಾ ಕೈಗಳ ಕತ್ತರಿಸುವಿಕೆ (amputation), ಅಥವಾ ಯಾವುದೇ ಶಸ್ತ್ರಚಿಕಿತ್ಸೆ, ರಾಸಾಯನಿಕ ಅಥವಾ ಹಾರ್ಮೋನ್ ಪ್ರಕ್ರಿಯೆ ಅಥವಾ ಇನ್ನಾವುದೇ ವಿಧಾನದ ಮೂಲಕ ತೃತೀಯಲಿಂಗಿ ಗುರುತನ್ನು ಅಳವಡಿಸಿಕೊಳ್ಳಲು ಅಥವಾ ಹೊರಜಗತ್ತಿಗೆ ಪ್ರದರ್ಶಿಸಲು ಒತ್ತಾಯಿಸಲ್ಪಟ್ಟಿದ್ದರೆ”, ಅಂತಹವರನ್ನೂ ಒಳಗೊಳ್ಳುತ್ತದೆ ಎಂದು ಹೇಳುತ್ತದೆ. ಆದರೆ, “ವಿಭಿನ್ನ ಲೈಂಗಿಕ ದೃಷ್ಟಿಕೋನ (sexual orientation) ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಗುರುತುಗಳನ್ನು (self-perceived sexual identities) ಹೊಂದಿರುವ ವ್ಯಕ್ತಿಗಳನ್ನು” ಈ ವ್ಯಾಖ್ಯಾನವು ಒಳಗೊಳ್ಳುವುದಿಲ್ಲ ಎಂದು ಇದು ಸ್ಪಷ್ಟಪಡಿಸುತ್ತದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ 2026’ಕ್ಕೆ ಅಂಕಿತ ಹಾಕಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದು ಭಾರತದಲ್ಲಿ ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ಕಾನೂನು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹೊಸ ಕಾನೂನು ಸ್ವಯಂ-ಘೋಷಿತ ಲಿಂಗ ಗುರುತಿನ ಹಕ್ಕನ್ನು ತೆಗೆದುಹಾಕಿರುವುದು, ವೈದ್ಯಕೀಯ ಮಂಡಳಿಯ ತಪಾಸಣೆಯನ್ನು ಕಡ್ಡಾಯಗೊಳಿಸಿರುವುದು ಮತ್ತು ಟ್ರಾನ್ಸ್‌ಜೆಂಡರ್ ಎಂಬ ವ್ಯಾಖ್ಯಾನವನ್ನು ಸಂಕುಚಿತಗೊಳಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಈ ಕ್ರಮವು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅನೇಕರು ದೂರಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...