Homeಮುಖಪುಟವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿಯ ದರ 2,078.50 ರೂ.ಗೆ ತಲುಪಿದೆ.

ಮಾರ್ಚ್ 1 ರಂದು 19 ಕೆಜಿ ಸಿಲಿಂಡರ್‌ ಬೆಲೆಯನ್ನು 114.5 ರೂ. ಹೆಚ್ಚಿಸಲಾಗಿತ್ತು. ಒಂದು ತಿಂಗಳ ಅಂತರದಲ್ಲಿ ಇದೀಗ ಮತ್ತೆ ಬೆಲೆ ಏರಿಕೆ ಮಾಡಲಾಗಿದೆ.

ಬೆಲೆ ಏರಿಕೆ ಬಳಿಕ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರವು ಭಾರೀ ಏರಿಕೆ ಕಂಡಿದ್ದು, 2,161 ರೂ.ಗೆ ತಲುಪಿದೆ. ಇಂಧನ ಮತ್ತು ಅನಿಲ ದರ ಏರಿಕೆಯಿಂದಾಗಿ ನಗರದಲ್ಲಿ ಪೆಟ್ರೋಲ್ ಪಂಪ್‌ಗಳ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರುತ್ತಿದ್ದು, ಆಟೋರಿಕ್ಷಾಗಳ ಸೇವೆ ವ್ಯತ್ಯಯವಾಗುವ ಆತಂಕ ಎದುರಾಗಿದೆ. ಇದರಿಂದಾಗಿ ಪ್ರಯಾಣಿಕರು ಆಟೋಗಾಗಿ ಕಾಯುವ ಸಮಯ ಹೆಚ್ಚಾಗುವ ಸಾಧ್ಯತೆಯಿದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಪೂರೈಕೆ ರಹದಾರಿ ಹಾರ್ಮುಝ್ ಜಲಸಂಧಿಯಲ್ಲಿ ಇಂಧನ ಹಡಗುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಣಾಮ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರ ಲಾಭ ಪಡೆದ ಹೋಟೆಲ್ ಮಾಲೀಕರು ಆಹಾರದ ಬೆಲೆಯನ್ನು ಇಷ್ಟ ಬಂದಂತೆ ಏರಿಕೆ ಮಾಡಿದ್ದಾರೆ.

ಜನ ಸಾಮಾನ್ಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಎಲ್‌ಪಿಜಿ ಸಿಲಿಂಡರ್ ಸರಿಯಾಗಿ ಸಿಗುತ್ತಿಲ್ಲ. ಹೋಟೆಲ್‌ಗೆ ಹೋಗಿ ತಿನ್ನೋಣ ಎಂದರೆ ಬೆಲೆ ದುಪ್ಪಟ್ಟಾಗಿದೆ. ಇದೀಗ ವಾಣಿಜ್ಯ ಎಲ್‌ಪಿಜಿ ದರ ಮತ್ತೆ ಏರಿಕೆಯಾಗಿರುವುದರಿಂದ ಹೋಟೆಲ್ ಮಾಲೀಕರು ದರವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಹಾಗಾಗಿ, ಇದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.

ಗ್ಯಾಸ್ ಸಿಲಿಂಡರ್ ಸರಿಯಾಗಿ ಪೂರೈಕೆಯಾಗದ ಕಾರಣ ವಿಶೇಷವಾಗಿ ನಗರ ಪ್ರದೇಶದ ಜನರು ವಿದ್ಯುತ್ ಒಲೆಗಳ ಮೊರೆ ಹೋಗುತ್ತಿದ್ದಾರೆ. ಹಠಾತ್ ಬೇಡಿಕೆ ಹೆಚ್ಚಾದ ಕಾರಣ, ವಿದ್ಯುತ್ ಒಲೆ ಮಾರಾಟ ಕಂಪನಿಗಳು ಕೂಡ ಭಾರೀ ಬೆಲೆ ಏರಿಕೆ ಮಾಡಿವೆ. ಜನವರಿಯ ಹೊತ್ತಿಗೆ 2 ಸಾವಿರ ರೂಪಾಯಿಗೆ ಸಿಗುತ್ತಿದ್ದ ವಿದ್ಯುತ್ ಒಲೆಗಳ ಬೆಲೆ ಈಗ 4ರಿಂದ 5 ಸಾವಿರಕ್ಕೆ ಏರಿಕೆಯಾಗಿದೆ.

ಮಾರ್ಚ್ 7ರಂದು 14.2 ಕೆಜಿಯ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಹೆಚ್ಚಿಸಲಾಗಿತ್ತು. ಆ ಬಳಿಕ ದರ ಹೆಚ್ಚಳವಾಗಿಲ್ಲ. ಪ್ರಸ್ತುತ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 913 ರೂ. ಇದೆ.

ಸರ್ಕಾರಿ ಸ್ವಾಮ್ಯದ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಎಟಿಎಫ್ ಮತ್ತು ಎಲ್‌ಪಿಜಿ ದರಗಳನ್ನು ಸರಿ ಹೊಂದಿಸುತ್ತವೆ. ಇದು ಜಾಗತಿಕ ಬೆಲೆ ಪ್ರವೃತ್ತಿಗಳು ಮತ್ತು ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಇಂಧನ ಪೂರೈಕೆ ಸರಪಳಿಗೆ ಅಡಚಣೆ ಉಂಟಾಗಿದೆ. ಪರಿಣಾಮ ಜಾಗತಿಕ ತೈಲ ಬೆಲೆಗಳು ಸುಮಾರು ಶೇಕಡ 50ರಷ್ಟು ಹೆಚ್ಚಾಗಿದೆ.

ಕಳೆದ ವರ್ಷ ಮಾರ್ಚ್‌ನಲ್ಲಿ ಲೀಟರ್‌ಗೆ 2 ರೂ. ಇಳಿಕೆಯಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹಾಗೆಯೇ ಮುಂದುವರೆದಿವೆ. ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 94.72 ರೂ. ಮತ್ತು ಡೀಸೆಲ್ 87.62 ರೂ. ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...