Homeಕರ್ನಾಟಕದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

- Advertisement -
- Advertisement -

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ ಮತ್ತು ನಾರನಹಳ್ಳಿ ಗ್ರಾಮಗಳ 2100 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ಇದರ ವಿರುದ್ದ ಹೋರಾಟದ ರಣಕಹಳೆ ಮೊಳಗಿಸಿರುವ ಗ್ರಾಮಸ್ಥರು ಮಂಗಳವಾರ (ಮಾ.31) ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಬೆಳವಂಗಲದಿಂದ ದೊಡ್ಡಬಳ್ಳಾಪುರ ಪಟ್ಟಣದವರೆಗೆ ಟ್ರಾಕ್ಟರ್ ರ‍್ಯಾಲಿ ನಡೆಸಿದ ಗ್ರಾಮಸ್ಥರು, ಕೆಐಎಡಿಬಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರಾಣ ಬಿಡುತ್ತೇವೆ ಹೊರತು, ಭೂಮಿ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಹೋರಾಟ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ನಿಚ್ಚಲವಾಗಿದೆ.

ಐತಿಹಾಸಿಕ ದೇವನಹಳ್ಳಿ ಹೋರಾಟ

ಇದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಈ ಹಿಂದೆ ಕೆಐಎಡಿಬಿ ಮುಂದಾಗಿತ್ತು.

ಇದರ ವಿರುದ್ದ ರೈತರು ಸುಮಾರು ಮೂರುವರೆ ವರ್ಷಗಳ ಕಾಲ ( 1198 ದಿನಗಳು) ನಿರಂತರ ಹೋರಾಟ ನಡೆಸಿದ್ದರು. ಈ ಹೋರಾಟ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ರೈತರ ಹೋರಾಟಕ್ಕೆ ಮಣಿದ ಸರ್ಕಾರ, ಅಂತಿವಾಗಿ 2025ರ ಜುಲೈ 15ರಂದು ಸಂಪೂರ್ಣ ಭೂ ಸ್ವಾಧೀನ ಕೈ ಬಿಟ್ಟಿರುವುದಾಗಿ ಘೋಷಿತ್ತು.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಮುಂದೆ ಈ ಘೋಷಣೆ ಮಾಡಿದ್ದರು. ಆದರೆ, ಭೂ ಸ್ವಾಧೀನ ರದ್ದತಿಯ ಲಿಖಿತ ಆದೇಶ ಹೊರಡಿಸಲು ಸರ್ಕಾರ ಸತಾಯಿಸಿತ್ತು. ಹಾಗಾಗಿ, ರೈತರು ತಮ್ಮ ಹೋರಾಟ ಮುಂದುವರಿಸಿದ್ದರು. ಇತ್ತೀಚೆಗೆ ಸರ್ಕಾರ ಲಿಖಿತ ಆದೇಶವನ್ನು ನೀಡಿದೆ ಎಂದು ತಿಳಿದು ಬಂದಿದೆ. ಹಾಗಾಗಿ, ರೈತರು 2026ರ ಫೆಬ್ರವರಿ 27ರಂದು ದೊಡ್ಡ ಮಟ್ಟದಲ್ಲಿ ‘ಭೂಮಿ ಹಬ್ಬ’ ಮಾಡಿ ಸಂಭ್ರಮಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...