Homeಮುಖಪುಟಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

ಮಂತ್ರಾಲಯದ ಕೊಠಡಿ ಸಂಖ್ಯೆ 602ಕ್ಕೆ ಹೋಗಲು ನಿರಾಕರಿಸಿದ ಅಜಿತ್‌ ಪವಾರ್‌! ಏಕೆ?

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೊಠಡಿ ಸಂಖ್ಯೆ 602 ಅನ್ನು ನೀಡಲಾಗಿದೆ. ಆದರೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದಾಗಿನಿಂದ, ಪವಾರ್ ಅವರು ಕಚೇರಿಯ ಬಳಿ ಒಮ್ಮೆಯು ಹೋಗಿಲ್ಲ, ಏಕೆಂದರೆ ಆ ಕೊಠಡಿಯನ್ನು ದುರದೃಷ್ಟಕರವೆಂದು ಪರಿಗಣಿಸಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.

ಪ್ರಮಾಣವಚನ ಸ್ವೀಕರಿಸಿದ ನಂತರ ಕೆಲಸ ಮಾಡಿದ ಮೊದಲ ದಿನವಾದ ಮಂಗಳವಾರ, ಅಜಿತ್‌ ಪವಾರ್‌ರವರು ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಲ್ಲಿಂದಲೇ ಮುಂದೆ ಅವರು ಶಾಶ್ವತವಾಗಿ ಕೆಲಸ ನಿರ್ವಹಿಸಲು ನಿರ್ಧರಿಸಿದ್ದಾರೆ.

ಆರನೇ ಮಹಡಿಯಲ್ಲಿರುವ ಐಎಎಸ್ ಅಧಿಕಾರಿ ಕುಂಟೆ ಅವರ ಕೊಠಡಿಯನ್ನು ಸಿಎಂ ಮತ್ತು ಉಪ ಸಿಎಂ ಕಚೇರಿಗಳ ನಡುವೆ ಇರುವ ಈ ಕಚೇರಿಯು ಇದು ಪವಾರ್ ಅವರ ಕಚೇರಿಯಾಗಿ ಪರಿವರ್ತಿಸುವಷ್ಟು ವಿಶಾಲವಾಗಿದೆ. ಆದ್ದರಿಂದ, ಅಗತ್ಯ ಮಾರ್ಪಾಡುಗಳನ್ನು ಮಾಡಲು ಮತ್ತು ಬದಲಿಗೆ ಕುಂಟೆ ಅವರನ್ನು 602 ಕೋಣೆಗೆ ಸ್ಥಳಾಂತರಿಸಲು ಪಿಡಬ್ಲ್ಯೂಡಿಯನ್ನು ಕೇಳಲಾಗಿದೆ.

‘ದುರದೃಷ್ಟಕರ’ ಕೊಠಡಿ!
602 ನೇ ಕೊಠಡಿಯಲ್ಲಿ ಈ ಹಿಂದೆ ಛಗನ್ ಭುಜ್ಬಾಲ್, ಏಕನಾಥ್ ಖಡ್ಸೆ, ಪಾಂಡುರಾಂಗ್ ಫಂಡ್ಕರ್ ಮತ್ತು ಅನಿಲ್ ಬೊಂಡೆ ಕೆಲಸ ನಿರ್ವಹಿಸಿದ್ದಾರೆ. ಕಾಕತಾಳೀಯವೆಂಬಂತೆ ಆದರೆ ಇವರೆಲ್ಲರೂ ಹಲವಾರು ವಿವಾದಗಳಲ್ಲಿ ಸಿಲುಕಿಕೊಂಡು ಅವರ ಮಂತ್ರಿ ಪದವಿಯನ್ನು ಕಳೆದುಕೊಳ್ಳಬೇಕಾಗಿ ಬಂದಿತ್ತು. ಅಜಿತ್‌ ಪವಾರ್ ಜ್ಯೋತಿಷಿಗಳು ಅಥವಾ ಧರ್ಮವನ್ನು ನಂಬದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಆದರೂ ಹಿಂದಿನ ಆ ಕೊಠಡಿಯ ನಿವಾಸಿಗಳ ಭವಿಷ್ಯದ ಉದಾಹರಣೆಯಿಂದಾಗಿ ಅವರು ಹೀಗೆ ಮಾಡಿರಬೇಕು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಭಜ್ಬಾಲ್ ಅವರು 1999 ರಿಂದ 2003 ರವರೆಗೆ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಾಗ ಈ ಕೊಠಡಿಯನ್ನು ಆಕ್ರಮಿಸಿಕೊಂಡಿದ್ದರು. ಆದರೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ತನಿಖೆ ಮಾಡುತ್ತಿತ್ತು. ಅಂತಿಮವಾಗಿ 2003 ರ ಡಿಸೆಂಬರ್‌ನಲ್ಲಿ ಅವರು ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಆದರೆ ಅವರು ನವೆಂಬರ್ 1, 2004 ರಂದು ಲೋಕೋಪಯೋಗಿ ಸಚಿವರಾಗಿ ಕ್ಯಾಬಿನೆಟ್‌ಗೆ ಮರಳಿದರು ಮತ್ತು 26 ಸೆಪ್ಟೆಂಬರ್ 2014 ರವರೆಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 8 ಡಿಸೆಂಬರ್ 2008 ರಿಂದ 10 ನವೆಂಬರ್ 2010 ರವರೆಗೆ ಉಪಮುಖ್ಯಮಂತ್ರಿ ಆದರು. ಅಂತಿಮವಾಗಿ ಅವರನ್ನು ಮಾರ್ಚ್ 2016 ರಲ್ಲಿ ಇಡಿ ಬಂಧಿಸಿ, ಎರಡು ವರ್ಷ ಜೈಲಿನಲ್ಲಿಟ್ಟಿತ್ತು. 4 ಮೇ 2018 ರಂದು ಅವರಿಗೆ ಜಾಮೀನು ನೀಡಲಾಯಿತು.

2014 ರಿಂದ 2019 ರವರೆಗೆ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವಧಿಯಲ್ಲಿ ಉಪಮುಖ್ಯಮಂತ್ರಿ ಇರಲಿಲ್ಲ. ಆದ್ದರಿಂದ ಆ ಕೋಣೆಯನ್ನು ಕಂದಾಯ ಮತ್ತು ಕೃಷಿ ಸಚಿವರಾದ ಖಡ್ಸೆಗೆ ನೀಡಲಾಯಿತು. ಖಡ್ಸೆ ಹಲವಾರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಬೇಕಾಯಿತು ಮತ್ತು ರಾಜೀನಾಮೆ ನೀಡಬೇಕಾಯಿತು. ಭ್ರಷ್ಟಾಚಾರ-ವಿರೋಧಿ ಬ್ಯೂರೋ ತನಿಖೆಯು ನಂತರ ಅವರಿಗೆ ಕ್ಲೀನ್ ಚಿಟ್ ನೀಡಿದ್ದರೂ, ಖಡ್ಸೆ ಅವರನ್ನು ಮತ್ತೆ ಫಡ್ನವೀಸ್ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಿಲ್ಲ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರ ಸೇರುವ ಸಾಧ್ಯತೆಯ ಬಗ್ಗೆ ಚರ್ಚಿಸಲು ಅವರು ಇತ್ತೀಚೆಗೆ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಜುಲೈ 2016 ರಲ್ಲಿ ಫಂಡ್ಕರ್ ಅವರನ್ನು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು. ಕೃಷಿ ಸಚಿವ ಸ್ಥಾನದೊಂದಿಗೆ ಅವರಿಗೆ 602ನೇ ಕೊಠಡಿಯನ್ನು ನೀಡಲಾಯಿತು. ಒಂದು ಪ್ರಮುಖ ಖಾತೆಯನ್ನು ಹೊಂದಿದ್ದರೂ ಸಹ ಅವರಿಗೆ ಫಡ್ನವೀಸ್ ಅಥವಾ ಬಿಜೆಪಿಯಿಂದ ಸರಿಯಾದ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಫಂಡ್ಕಾರ್ ತೀವ್ರ  ಅಸಮಾಧಾನ ಹೊಂದಿದ್ದರು. ಅವರು ಕೃಷಿ ಸಚಿವರಾಗಿದ್ದಾಗಲೇ 31 ಮಾರ್ಚ್ 2018 ರಂದು ಭಾರಿ ಹೃದಯಘಾತದಿಂದ ನಿಧನರಾದರು.

ಇನ್ನು ಅನಿಲ್ ಬೊಂಡೆ ಅವರನ್ನು ಜುಲೈ 16, 2019 ರಂದು ಫಡ್ನವಿಸ್ ಕ್ಯಾಬಿನೆಟ್‌ಗೆ ಸೇರಿಸಲಾಯಿತು ಮತ್ತು ಕೃಷಿ ಖಾತೆಯನ್ನು ನೀಡಲಾಯಿತು. ಆದರೆ ಚುನಾವಣೆಗೆ ಕೆಲವೇ ದಿನಗಳು ಇದ್ದಿದ್ದರಿಂದ ಕೃಷಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಫಡ್ನವೀಸ್ ಅವರೇ ತೆಗೆದುಕೊಂಡರು.

ಇದೆಲ್ಲವನ್ನು ಗಮನಿಸಿರುವ ಅಜಿತ್‌ ಪವಾರ್‌ 602ನೇ ಕೊಠಡಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ನೀರಾವರಿ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಆರೋಪಗಳು ಸಹ ಇವರ ಮೇಲಿವೆ. ಕಳೆದ ತಿಂಗಳು ತಾನೇ ಬಿಜೆಪಿಗೆ ಬೆಂಬಲ ಸೂಚಿಸುವ ನಾಟಕವಾಡಿ ಕೆಲವು ಕೇಸುಗಳನ್ನು ಖುಲಾಷೆಗೊಂಡಿದ್ದರು ಎಂಬರ್ಥದ ಮಾತುಗಳು ಸಹ ಕೇಳಿಬಂದಿದ್ದವು. ಇನ್ನೊಂದು ಕಡೆ ಇದೊಂದು ದೊಡ್ಡ ಮೌಢ್ಯವಾಗಿದೆ ಎಂದು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...