Homeಮುಖಪುಟದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರು ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಲೂಟಿ ಮತ್ತು ಬೆಂಕಿ ಹಚ್ಚುವ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಶಾ ಆಲಂ, ರಶೀದ್ ಸೈಫಿ, ಮೊಹಮ್ಮದ್ ಶದಾಬ್, ಹಬೀಬ್, ಇರ್ಫಾನ್, ಸುಹೇಲ್, ಸಲೀಮ್ ಅಲಿಯಾಸ್ ಆಶು, ಇರ್ಷಾದ್ ಮತ್ತು ಅಜರ್ ಅಲಿಯಾಸ್ ಸೋನು ಎಂಬ ಒಂಬತ್ತು ಜನರ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದರು.

ಮಾರ್ಚ್ 30 ರ ಆದೇಶದಲ್ಲಿ, ನ್ಯಾಯಾಲಯವು, “ಸಾಕ್ಷ್ಯಗಳು ಸಾಮಾನ್ಯ ಸ್ವರೂಪದ್ದಾಗಿದ್ದು, ವಿಶೇಷವಾಗಿ ಈ ಸಾಕ್ಷಿಗಳು ಘಟನೆಯ ಸ್ಥಳಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ದಿಷ್ಟತೆಯ ಕೊರತೆಯಿದೆ… ಆರೋಪಿಗಳನ್ನು ಶಿಕ್ಷಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ” ಎಂದು ಅಭಿಪ್ರಾಯಪಟ್ಟಿದೆ.

ರಾಷ್ಟ್ರ ರಾಜಧಾನಿಯ ಚಾಂದ್ ಬಾಗ್ ಪ್ರದೇಶದಲ್ಲಿ ಭುಗಿಲೆದ್ದ ಗಲಭೆಯ ಸಂದರ್ಭದಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನು ಧ್ವಂಸಗೊಳಿಸುವುದು, ಮೋಟಾರ್ ಸೈಕಲ್ ಸುಟ್ಟುಹಾಕುವುದು, ಬೀದಿ ವ್ಯಾಪಾರಿಗಳ ಬಂಡಿಗಳನ್ನು ಲೂಟಿ ಮಾಡುವುದು ಮತ್ತು ‘ರಾಯಲ್ ಮೋಟಾರ್ಸ್’ ಎಂಬ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾಳ್‌ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳಲ್ಲಿ ವಿರೋಧಾಭಾಸಗಳನ್ನು ಗಮನಿಸಿದ ನ್ಯಾಯಾಲಯ, ಪ್ರಕರಣದ ತನಿಖಾಧಿಕಾರಿ ಘಟನೆಯ ದಿನಾಂಕವನ್ನು ಫೆಬ್ರವರಿ 24 ಎಂದು ತಪ್ಪಾಗಿ ದಾಖಲಿಸಿದ್ದಾರೆ. ಆದರೆ, ಘಟನೆ ಫೆಬ್ರವರಿ 25, 2020 ರಂದು ನಡೆದಿದೆ ಎಂದು ಹೇಳಿದೆ.

ಸುದ್ದಿ ವಾಹಿನಿಯೊಂದರ ವಾಹನ (ಇನ್ನೋವಾ ಕ್ರಿಸ್ಟಾ) ಮೇಲಿನ ದಾಳಿಗೆ ಸಂಬಂಧಿಸಿದಂತೆ, ಚಾಲಕ ಮತ್ತು ಪ್ರಯಾಣಿಕನು, ಪೊಲೀಸರರು ಗುರಿತಿಸಿದ ಸ್ಥಳ ಯೋಜನೆ ಹಾಗೂ ಪೊಲೀಸ್ ಸಾಕ್ಷ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಸ್ಥಳ ಮತ್ತು ಸಮಯವನ್ನು ಗುರುತಿಸಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ.

“ಈ ಘಟನೆಗೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಗ್ಯಾನ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೆಬಲ್ ಸುನಿಲ್ ಅವರ ಸಾಕ್ಷ್ಯಗಳು ಸಂಪೂರ್ಣವಾಗಿ ಸುಳ್ಳು ಎಂದು ಕಂಡುಬಂದಿದೆ” ಎಂದು ನ್ಯಾಯಾಧೀಶರು ಹೇಳಿದರು. ಈ ಘಟನೆ ವಾಸ್ತವವಾಗಿ ಪೊಲೀಸರು ಹೇಳಿಕೊಂಡ ಸ್ಥಳದಿಂದ ದೂರದಲ್ಲಿ ನಡೆದಿದೆ ಎಂದು ಗಮನಿಸಿದರು.

ಪ್ರಮುಖ ಘಟನೆಗಳ ಸಮಯ ಮತ್ತು ಸ್ಥಳದ ಬಗ್ಗೆ ಪ್ರಾಥಮಿಕ ಸಾಕ್ಷಿಗಳು ಸುಳ್ಳು ಹೇಳಿಕೆ ನೀಡಿರುವುದರಿಂದ, ಇತರ ಆಪಾದಿತ ಗಲಭೆಗಳಿಗೆ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಅವರ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಗಮನಿಸಿತು.

“ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಲು ಈ ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನಾನು ಕಂಡುಕೊಂಡಿದ್ದೇನೆ. ಅದಕ್ಕೆ ಅನುಗುಣವಾಗಿ ಆರೋಪಿಗಳು ಅನುಮಾನದ ಲಾಭಕ್ಕೆ ಅರ್ಹರು ಎಂದು ನಾನು ಕಂಡುಕೊಂಡಿದ್ದೇನೆ” ಎಂದು ನ್ಯಾಯಾಲಯವು ಹೇಳಿತು. ಅವರ ಜಾಮೀನುದಾರರನ್ನು ಬಿಡುಗಡೆ ಮಾಡಯವ ಜೊತೆಗೆ ಜಾಮೀನು ಬಾಂಡ್‌ಗಳನ್ನು ರದ್ದುಗೊಳಿಸಬೇಕು ಎಂದು ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...