Homeಕರ್ನಾಟಕಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

- Advertisement -
- Advertisement -

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಜಾನಪದ ಕಲಾವಿದರಾದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಚಂದ್ರಮ್ಮ, ಹಿರಿಯ ಪತ್ರಕರ್ತರಾದ ಬೆಳಗಾವಿಯ ಸರಜೂ ಕಾಟ್ಕರ್‌, ಮೈಸೂರು ನಗರದ ಮಾಜಿ ಮೇಯರ್‌ ನಾರಾಯಣ, ತುಮಕೂರಿನ ನಗರಸಭೆ ಮಾಜಿ ಸದಸ್ಯ ನರಸೀಯಪ್ಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ​ಸಮಾಜ ಕಲ್ಯಾಣ ಇಲಾಖೆ ರಚಿಸಿದ್ದ ಉನ್ನತಮಟ್ಟದ ಆಯ್ಕೆ ಸಮಿತಿಯು ಶಿಫಾರಸು ಮಾಡಿದ್ದ ಅರ್ಹರ ಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ಪ್ರಶಸ್ತಿಯು ತಲಾ‌ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಮಾಜಿ ಉಪಪ್ರಧಾನಿ ದಿವಂಗತ ಬಾಬು ಜಗಜೀವನ್‌ ರಾಮ್‌ ಅವರ ಜನ್ಮದಿನವಾದ ಏ.5ರಂದು ಬೆಂಗಳೂರಿನ ವಿಧಾನಸೌಧ‌‌ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಐವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಯುಕ್ತ ರಾಕೇಶ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಕುರಿತು:

ಬೆಂಗಳೂರಿನ ಚಂದ್ರಮ್ಮ ಅವರು ಸಾವಿತ್ರಿಭಾ ಫುಲೆ ಸಂಘದ ಅಧ್ಯಕ್ಷರಾಗಿದ್ದು, ನಗರದ ಹಕ್ಕಿ ಪಿಕ್ಕಿ ಜನಾಂಗದ ಕೊಳೆಗೇರಿಗಳಲ್ಲಿ ವಾಸಿಸುವ ದಲಿತ ಮಹಿಳೆಯರಿಗೆ ಭೂಮಿ ಹಾಗೂ ವಸತಿ ಗಾಗಿ ಹೋರಾಡುತ್ತಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದು ಸೇರಿದಂತೆ ವಿದ್ಯಾರ್ಥಿವೇತನ ನೀಡುವುದರ ಮುಖಾಂತರ ದಲಿತ ಕುಟುಂಬಗಳಿಗೆ ಸೇವೆ ಮಾಡುತ್ತಾ ಬಂದಿರುತ್ತಾರೆ.

ತಮ್ಮ 18ನೇ ವಯಸ್ಸಿನಲ್ಲೇ ದಲಿತ ಚಳವಳಿಗೆ ದುಮುಕಿದ ಡಿಂಗ್ರಿ ನರಸಪ್ಪ, ತಮಟೆ ವಾದ್ಯದಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದ್ದಾರೆ. ಅವರು ಶ್ರುತಿ ಸಂಸ್ಕೃತಿ ಸಂಸ್ಥೆ ಕಟ್ಟಿ ಕಿಶೋರಿಯರಿಗೆ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕ ಕಲಿಕಾ ತರಬೇತಿ ಕಾರ್ಯಗಾರಗಳನ್ನು ನಡೆಸಿದ್ದಾರೆ. ನಲವತ್ತು ವರ್ಷಗಳಿಂದ ತಮಟೆ, ಹಾಡುಗಾರಿಕೆ ಹಾಗೂ ಬೀದಿನಾಟಕಗಳಲ್ಲಿ ತೊಡಗಿಸಿಕೊಂಡಿರುವ ಅವರ ಸೇವೆ ಅನನ್ಯವಾದುದು.

ಡಾ.ಸರಜೂ ಕಾಟ್ಕರ್‌ ಅವರು ದಲಿತ ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ಚಳವಳಿಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ಪತ್ರಕರ್ತರಾಗಿ ಅಂಬೇಡ್ಕರ್‌ ಚಿಂತನೆಗಳನ್ನು ಪ್ರಸಾರ ಮಾಡಿ, ವಿದ್ಯಾರ್ಥಿ ದೆಸೆಯಿಂದಲೇ ಶೋಷಿತರ ಪರಧ್ವನಿ ಎತ್ತಿದವರು.

ನಾರಾಯಣ ಅವರು ಪೌರಕಾರ್ಮಿಕ ಸಮುದಾಯದವರು. ಆ ಸಮುದಾಯವು ಅನುಭವಿಸುತ್ತಿದ್ದ ಕಷ್ಟ ಕಾರ್ಪಣ್ಯಗಳನ್ನು ಬಾಲ್ಯದಿಂದಲೂ ಕಣ್ಣಾರೆ ಕಂಡವರು. ಸ್ವತಃ ಅವರೇ ಆ ಸಮುದಾಯದ ನೋವುಗಳನ್ನು ಅನುಭವಿಸಿದ್ದರು. ಪೌರಕಾರ್ಮಿಕನಾಗಿ ವೃತ್ತಿಜೀವನವನ್ನು ಆರಂಭಿಸಿ ವಸತಿರಹಿತರಿಗೆ ಸೂರು ಕಲ್ಪಿಸಿ ಹಾಗೂ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ನ್ಯಾಯಾಯುತ ಹಕ್ಕುಗಳಿಗಾಗಿ ಹಲವಾರು ಯಶಸ್ವಿಯ ಹೋರಾಟಗಳನ್ನು ಮಾಡುತ್ತಾ ಸಮಾಜದ ಮುಖ್ಯವಾಹಿನಿಗೆ ತಂದು ಕೊಳೆಗೇರಿ ನಿವಾಸಿಗಳ ಬದುಕಿಗೆ ಹೊಸಬೆಳಕನ್ನು ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ಸದಸ್ಯರು, ಮೇಯರ್ ಆಗಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡವರು.

ನರಸೀಯಪ್ಪ ಅವರು ಬಡತನ ಮತ್ತು ಅಸ್ಪೃಶ್ಯತೆ ಕಾರಣದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿ ಮೂಟೆ ಹೊರುವ ಹಮಾಲಿಯಾಗಿ ದುಡಿಯಲು ಆರಂಭಿಸಿದರು. ಅನುಭವಿಸಿದ ಅವಮಾನ, ಸಂಕಟ ಮತ್ತು ನೋವುಗಳನ್ನು ಸಾಧನಗಳನ್ನಾಗಿ ಮಾಡಿಕೊಂಡು ನಾಯಕತ್ವದ ಗುಣಗಳನ್ನು ಯುವಕನಿದ್ದಾಗಲೇ ರೂಪಿಸಿಕೊಂಡು ಹಮಾಲಿಗಳ ಬದುಕನ್ನು ಹಸನುಗೊಳಿಸಲು ಹಮಾಲಿಗಳ ಸಂಘ ಸ್ಥಾಪಿಸಿ ಹೋರಾಟದ ಮತ್ತು ಸಾರ್ವಜನಿಕ ಬದುಕಿಗೆ ಕಾಲಿಟ್ಟವರು. ಕರ್ನಾಟಕದ ಸಾಮಾಜಿಕ ಚಳವಳಿಯಿಂದ ದಲಿತ ಸಂಘರ್ಷ ಸಮಿತಿ ಹುಟ್ಟು ಮತ್ತು ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...