Homeಅಂತರಾಷ್ಟ್ರೀಯಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

- Advertisement -
- Advertisement -

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್ ನೀಡಿತ್ತು.

ಇರಾನ್‌ನ ಅರೆ-ಸರ್ಕಾರಿ ಸುದ್ಧಿ ಸಂಸ್ಥೆ ‘ಫಾರ್ಸ್’ ಪ್ರಕಾರ, ಇರಾನ್ ಈ ಪ್ರಸ್ತಾವನೆಯನ್ನು ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಬೇಡಿಕೆಗಳು “ಅಂಗೀಕಾರಾರ್ಹವಲ್ಲ” ಮತ್ತು ಸಂಧಾನಕ್ಕಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಕುವೈತ್‌ನ ಬುಬಿಯಾನ್ ದ್ವೀಪದಲ್ಲಿರುವ ಅಮೆರಿಕದ ಮಿಲಿಟರಿ ಡಿಪೋ ಮೇಲೆ ಇರಾನ್ ನಡೆಸಿದ ದಾಳಿ ಮತ್ತು ಅಮೆರಿಕದ ಪಡೆಗಳು ಎದುರಿಸುತ್ತಿರುವ ‘ಗಂಭೀರ ಸಮಸ್ಯೆಗಳ’ ಕಾರಣದಿಂದ ಅಮೆರಿಕ ಕದನ ವಿರಾಮ ಪ್ರಸ್ತಾವನೆ ಮುಂದಿಟ್ಟಿತ್ತು ಎಂದು ಇರಾನ್ ವಿಶ್ಲೇಷಿಸಿದೆ.

ಇತ್ತೀಚೆಗೆ ಇರಾನ್ ಎರಡು ಅಮೆರಿಕನ್ ಯುದ್ಧ ವಿಮಾನಗಳನ್ನು (ಎಫ್‌-15ಇ ಸ್ಟ್ರೈಕ್ ಈಗಲ್ ಮತ್ತು ಎ-10 ವಾರ್ಥೋಗ್) ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಶುಕ್ರವಾರ(ಏ.3) ಹಾರ್ಮುಜ್ ಜಲಸಂಧಿಯ ಬಳಿ ಅಮೆರಿಕದ ಎ-10 ವಾರ್ಥೋಗ್ ಯುದ್ಧ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ. ಈ ದಾಳಿಯ ಹೊಣೆಯನ್ನು ಇರಾನ್ ಸೇನೆಯೇ ಹೊತ್ತುಕೊಂಡಿದೆ.

ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿರುವ ಇರಾನ್, ಲಿಖಿತವಾಗಿ ಉತ್ತರಿಸುವ ಬದಲು ಯುದ್ಧಭೂಮಿಯಲ್ಲಿ ದಾಳಿಗಳನ್ನು ಮುಂದುವರಿಸುವ ಮೂಲಕ ತನ್ನ ನಿಲುವನ್ನು ವ್ಯಕ್ತಪಡಿಸುತ್ತಿದೆ ಎಂದು ಕೆಲ ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಸಂಘರ್ಷ ಉಲ್ಬಣಗೊಳ್ಳುತ್ತಿರುವುದರಿಂದ ಪಾಕಿಸ್ತಾನ ಸೇರಿದಂತೆ ಹಲವು ದೇಶಗಳು ನಡೆಸುತ್ತಿರುವ ಸಂಧಾನದ ಪ್ರಯತ್ನಗಳು ಯಾವುದೇ ಪ್ರಗತಿ ಕಾಣುತ್ತಿಲ್ಲ. ಮುಂಬರುವ ದಿನಗಳಲ್ಲಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ ಮತ್ತು ಅಮೆರಿಕದ ಬೇಡಿಕೆಗಳು ಒಪ್ಪುವಂತಹದ್ದಲ್ಲ ಎಂದು ಇರಾನ್ ಮಧ್ಯಸ್ಥಗಾರರಿಗೆ ತಿಳಿಸಿದೆ. ಇದೇ ವೇಳೆ, ಮಾತುಕತೆಗಾಗಿ ಟರ್ಕಿ ಮತ್ತು ಈಜಿಪ್ಟ್ ದೇಶಗಳು ಕತಾರ್ ಮತ್ತು ಇಸ್ತಾಂಬುಲ್‌ನಂತಹ ಪರ್ಯಾಯ ಸ್ಥಳಗಳ ಬಗ್ಗೆಯೂ ಪರಿಶೀಲನೆ ನಡೆಸುತ್ತಿವೆ.

ಪ್ರಸ್ತುತ ಉದ್ವಿಗ್ನತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳು ಮತ್ತಷ್ಟು ಕಿಚ್ಚು ಹಚ್ಚಿವೆ. ಇರಾನ್‌ನ ‘ಹೊಸ ಆಡಳಿತದ ಅಧ್ಯಕ್ಷ’ ಕದನ ವಿರಾಮಕ್ಕಾಗಿ ಮನವಿ ಮಾಡಿದ್ದಾರೆ ಎಂಬ ಟ್ರಂಪ್ ಅವರ ಹೇಳಿಕೆಯನ್ನು ಇರಾನ್‌ ತಳ್ಳಿಹಾಕಿದೆ. “ಇರಾನ್‌ನ ಹೊಸ ಆಡಳಿತದ ಅಧ್ಯಕ್ಷ ಈಗಷ್ಟೇ ಅಮೆರಿಕದ ಬಳಿ ಕದನ ವಿರಾಮಕ್ಕಾಗಿ ಮನವಿ ಮಾಡಿದ್ದಾರೆ” ಎಂಬ ಟ್ರಂಪ್ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಅನ್ನು ಇರಾನ್ ಖಂಡಿಸಿದೆ.

ಮುಂಬೈನಲ್ಲಿರುವ ಇರಾನ್‌ನ ಕಾನ್ಸುಲೇಟ್ ಜನರಲ್ ಕಚೇರಿಯು ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಟ್ರಂಪ್ ಅನ್ನು ಟೀಕಿಸಿದೆ. “ಏಪ್ರಿಲ್ ಫೂಲ್ ದಿನದಂದು (ಏಪ್ರಿಲ್ 1) ಡೊನಾಲ್ಡ್ ಟ್ರಂಪ್ ಅವರು ಜೋಕ್‌ಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವುದು ಒಂದು ಕಾಕತಾಳೀಯವೇ ಸರಿ; ಡಾ. ಪೆಜೆಶ್ಕಿಯಾನ್ ಅವರು ಈಗಾಗಲೇ ಅಧಿಕಾರದಲ್ಲಿದ್ದರೂ ಸಹ, ಇರಾನ್‌ನ ‘ಹೊಸ’ ಅಧ್ಯಕ್ಷರ ಬಗ್ಗೆ ಅವರು ಮಾತನಾಡುತ್ತಿದ್ದಾರೆ” ಎಂದು ಕಾನ್ಸುಲೇಟ್ ಲೇವಡಿ ಮಾಡಿದೆ.

“ರಿಯಾಲಿಟಿ ಚೆಕ್ : ಟ್ವೀಟ್‌ಗಳ ಮೂಲಕ ಅಧ್ಯಕ್ಷರನ್ನು ಬದಲಾಯಿಸಲು ಸಾಧ್ಯವಿಲ್ಲ… ಅದಕ್ಕಾಗಿಯೇ ಚುನಾವಣೆಗಳು ಇರುವುದು” ಎಂದು ಇರಾನ್ ಕಾನ್ಸುಲೇಟ್ ಹೇಳಿದೆ.

ಇರಾನ್ ವಿದೇಶಾಂಗ ಸಚಿವಾಲಯ ಕೂಡ ಕದನ ವಿರಾಮಕ್ಕಾಗಿ ಇರಾನ್ ಮನವಿ ಮಾಡಿದೆ ಎಂಬ ಟ್ರಂಪ್ ಹೇಳಿಕೆಯನ್ನು ತಳ್ಳಿಹಾಕಿದೆ. “ಕದನ ವಿರಾಮಕ್ಕಾಗಿ ಇರಾನ್ ಮನವಿ ಮಾಡಿದೆ ಎಂಬ ಟ್ರಂಪ್ ಅವರ ಹೇಳಿಕೆಗಳು ಸುಳ್ಳು ಮತ್ತು ಆಧಾರರಹಿತವಾಗಿವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ತಿಳಿಸಿರುವುದನ್ನು ಅಲ್ಲಿನ ಸರ್ಕಾರಿ ದೂರದರ್ಶನ ಉಲ್ಲೇಖಿಸಿದೆ.

ರಾಯಿಟರ್ಸ್ ವರದಿ ಪ್ರಕಾರ, ಇರಾನ್ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಖಾತರಿಯ ಕದನ ವಿರಾಮಕ್ಕಾಗಿ ಒತ್ತಾಯಿಸುತ್ತಿದೆ. ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಮಂಗಳವಾರ ಮಧ್ಯಸ್ಥಗಾರರು ಸಂಪರ್ಕಿಸಿದ್ದರೂ ಸಹ, ತಾತ್ಕಾಲಿಕ ಕದನ ವಿರಾಮದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಭಾರತದಂತ ರಾಷ್ಟ್ರಗಳ ಮೇಲೆ ದೊಡ್ಡ ಪರಿಣಾಮ ಬೀರಿದೆ. ಇರಾನ್‌ನ ಹಿಡಿತದಲ್ಲಿರುವ ಹಾರ್ಮುಝ್ ಜಲಸಂಧಿಯಲ್ಲಿ ತೈಲ ಮತ್ತು ಎಲ್‌ಪಿಜಿ ಹೊತ್ತ ಹಡಗುಗಳ ಸಂಚಾರಕ್ಕೆ ಉಂಟಾದ ಅಡಚಣೆಯಿಂದ ಭಾರತದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದು ಜನಸಾಮಾನ್ಯರು ಸಂಕಷ್ಟಕ್ಕೀಡು ಮಾಡಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...