Homeಕರ್ನಾಟಕ'ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ' :...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ (ಏ.4) ಸುದೀರ್ಘ ಪೋಸ್ಟ್ ಹಾಕಿರುವ ನಾರಾಯಣಗೌಡರು, “ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದಿದ್ದಾರೆ.

“ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ತಿಳಿಸಿದ್ದಾರೆ.

“ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದಿದ್ದಾರೆ.

“ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

“ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ” ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

“ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ” ಎಂದು ಎಚ್ಚರಿಸಿದ್ದಾರೆ.

“ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...