Homeಮುಖಪುಟಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

- Advertisement -
- Advertisement -

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ.

ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ಗಂಭೀರ ಆರೋಪಗಳನ್ನು ಮಾಡಿದ್ದು, ಇದನ್ನು ಅಲ್ಲಗಳೆದಿರುವ ಶರ್ಮಾ, ಕಾಂಗ್ರೆಸ್‌ ವಿರುದ್ಧ ಪಾಕಿಸ್ತಾನ ಅಸ್ತ್ರ ಪ್ರಯೋಗಿಸಿದ್ದಾರೆ.

ರಿನಿಕಿ ಭುಯಾನ್ ಶರ್ಮಾ ಅವರು ಭಾರತದ ಜೊತೆಗೆ ಯುಎಇ, ಆಂಟಿಗುವಾ- ಬರ್ಬುಡಾ ಮತ್ತು ಈಜಿಪ್ಟ್ ದೇಶಗಳ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ. ಇದು ಭಾರತೀಯ ಪೌರತ್ವ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಮರ ವಿರುದ್ದ ಸದಾ ದ್ವೇಷ ಕಾರುವ ಸಿಎಂ ಶರ್ಮಾ ಅವರ ಪತ್ನಿ ಎರಡು ಮುಸ್ಲಿಂ ದೇಶಗಳ (ಯುಎಇ-ಈಜಿಪ್ಟ್‌) ಪಾಸ್‌ಪೋರ್ಟ್ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ, ಶರ್ಮಾ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪತ್ನಿಯ ಹೆಸರಿನಲ್ಲಿ ದುಬೈನಲ್ಲಿರುವ ಆಸ್ತಿಗಳು ಮತ್ತು ಅಮೆರಿಕದ ವ್ಯೋಮಿಂಗ್‌ನಲ್ಲಿರುವ ಶೆಲ್ ಕಂಪನಿಗಳ ಹೂಡಿಕೆಯನ್ನು ಮರೆಮಾಚಿದ್ದಾರೆ ಎಂದು ಪವನ್ ಖೇರಾ ದೂರಿದ್ದಾರೆ.

ಅಮೆರಿಕದಲ್ಲಿರುವ ಕಂಪನಿಯೊಂದರಲ್ಲಿ ಸುಮಾರು 52,000 ಕೋಟಿ ರೂಪಾಯಿ ಮೊತ್ತವನ್ನು ಡಾಲರ್ ರೂಪದಲ್ಲಿ ಠೇವಣಿ ಇಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಅವರು ಸಿಎಂ ಪತ್ನಿಯ ಕಂಪನಿಯು ‘ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆ’ಯಡಿಯಲ್ಲಿ ರೂ. 10 ಕೋಟಿ ಸಬ್ಸಿಡಿಯನ್ನು ಪಡೆದಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಆನೆ ಕಾರಿಡಾರ್ ಅನ್ನು ಬದಲಿಸಿ ಪತ್ನಿಯ ಚಹಾ ತೋಟಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು.

ಆರೋಪಗಳನ್ನು ತಳ್ಳಿ ಹಾಕಿದ ಸಿಎಂ ಶರ್ಮಾ, ಪಾಕಿಸ್ತಾನ ಅಸ್ತ್ರ ಪ್ರಯೋಗ

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಾಂಗ್ರೆಸ್‌ ನಾಯಕರ ಎಲ್ಲಾ ಆರೋಪಗಳನ್ನು ‘ಸಂಪೂರ್ಣ ಸುಳ್ಳು ಮತ್ತು ಕಪೋಲಕಲ್ಪಿತ’ ಎಂದು ತಳ್ಳಿಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಹಂಚಿಕೊಂಡಿರುವ ದಾಖಲೆಗಳು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣಗಳಿಂದ ಬಂದವುಗಳಾಗಿದ್ದು, ಅವುಗಳನ್ನು ಎಐ ಮೂಲಕ ಎಡಿಟ್ ಮಾಡಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಸಂಬಂಧ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಗುವಾಹಟಿಯ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...