Homeಮುಖಪುಟಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ಖಜಾಂಚಿ ರಾಮವತಾರ್ ಜಗ್ಗಿ ಅವರನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದಲ್ಲಿ ಅಮಿತ್ ಜೋಗಿ ಅವರನ್ನು ದೋಷಿ ಎಂದು ಗುರುವಾರ (ಏ.2) ನ್ಯಾಯಾಲಯ ಘೋಷಿಸಿತ್ತು. ಅಜಿತ್ ಜೋಗಿ ಮುಖ್ಯಮಂತ್ರಿಯಾಗಿದ್ದಾಗ ಜೂನ್ 4, 2003ರಂದು ರಾಯ್‌ಪುರದಲ್ಲಿ ಎನ್‌ಸಿಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೊಡ್ಡುತ್ತಿದ್ದ ಎನ್‌ಸಿಪಿ ಬೃಹತ್ ರ‍್ಯಾಲಿಗೆ ಮುನ್ನ ಜಗ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಗುರುವಾರ, ಹೈಕೋರ್ಟ್ ಅಮಿತ್ ಜೋಗಿ ಅವರಿಗೆ ಮೂರು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.

ಸೋಮವಾರ ಅವರು ತಮ್ಮ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 20ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಮೇ 31, 2007ರಂದು, ವಿಚಾರಣಾ ನ್ಯಾಯಾಲಯವು ಕೊಲೆಗೆ ಸಂಬಂಧಿಸಿದಂತೆ 28 ಜನರನ್ನು ದೋಷಿಗಳು ಎಂದು ಘೋಷಿಸಿತ್ತು. ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿತ್ತು.

ಕೇಂದ್ರ ತನಿಖಾ ದಳವು (ಸಿಬಿಐ) 2011ರಲ್ಲಿ ಖುಲಾಸೆಯನ್ನು ಪ್ರಶ್ನಿಸಿತ್ತು. ಆದಾಗ್ಯೂ, ವಿಳಂಬದ ಆಧಾರದ ಮೇಲೆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಛತ್ತೀಸ್‌ಗಢ ಸರ್ಕಾರ ಮತ್ತು ರಾಮಾವತಾರ್ ಜಗ್ಗಿ ಅವರ ಮಗ ಸತೀಶ್ ಜಗ್ಗಿ ಅವರ ಮೇಲ್ಮನವಿಗಳನ್ನೂ ಕೂಡ ಹೈಕೋರ್ಟ್ ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2025ರ ನವೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿ, ಸಿಬಿಐ ಅರ್ಜಿಯನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿತ್ತು. ಸಿಬಿಐ ಗಣನೀಯ ವಿಳಂಬದ ನಂತರ ಅರ್ಜಿಯನ್ನು ಸಲ್ಲಿಸಿದ್ದರೂ, ಅಮಿತ್ ಜೋಗಿ ವಿರುದ್ಧದ ಆರೋಪಗಳು ತುಂಬಾ ಗಂಭೀರವಾದವು, ಇದು ಪ್ರತಿಸ್ಪರ್ಧಿ ರಾಜಕೀಯ ಪಕ್ಷದ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿರುವುದನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಗುರುವಾರದ ತೀರ್ಪಿನಲ್ಲಿ, ಹೈಕೋರ್ಟ್, ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು “ಸ್ಪಷ್ಟವಾಗಿ ಕಾನೂನುಬಾಹಿರ, ತಪ್ಪು, ದಾಖಲೆಯಲ್ಲಿ ಲಭ್ಯವಿರುವ ಪುರಾವೆಗಳಿಗೆ ವಿರುದ್ಧವಾಗಿದೆ ಮತ್ತು ಯಾವುದೇ ನಿರ್ದಿಷ್ಟ ಆಧಾರವಿಲ್ಲ” ಎಂದು ಬಣ್ಣಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅನಗತ್ಯವಾಗಿ ಆರೋಪಿ ಅಮಿತ್ ಜೋಗಿಯ ಪಾತ್ರವನ್ನು ಇತರ ಸಹ-ಆರೋಪಿಗಳು/ಶಿಕ್ಷಿತರ ಪಾತ್ರದಿಂದ ಪ್ರತ್ಯೇಕಿಸಲು ಪ್ರಯತ್ನಿಸಿದ್ದಾರೆ ಎಂದು ಹೈಕೋರ್ಟ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಹ ಆರೋಪಿಯು ಅಮಿತ್ ಜೋಗಿ ಅವರನ್ನು ಮೆಚ್ಚಿಸಲು ಅವರಿಗೆ ಅರಿವಿಲ್ಲದಂತೆ ಮತ್ತು ಅವರು ಯೋಚಿಸದ ರೀತಿಯಲ್ಲಿ ಸ್ವತಂತ್ರವಾಗಿ ವರ್ತಿಸಿದ್ದಾರೆ ಎಂಬ ತೀರ್ಮಾನವು ಸಮರ್ಥನೀಯವಲ್ಲ ಹೈಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...