Homeಮುಖಪುಟ'ಜ್ಞಾನೇಶ್ ಕುಮಾರ್ ನಮಗೆ 'ಗೆಟ್ ಲಾಸ್ಟ್' ಅಂದ್ರು' : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

- Advertisement -
- Advertisement -

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ ‘ಇಲ್ಲಿಂದ ತೊಲಗಿ’ (get lost) ಎಂಬುವುದಾಗಿ ಹೇಳಿದ್ದಾರೆ ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಸಭೆ ಮುಗಿದ ಕೆಲವೇ ನಿಮಿಷಗಳಲ್ಲಿ, ಚುನಾವಣಾ ಆಯೋಗವು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತೀಕ್ಷ್ಣವಾದ ಪೋಸ್ಟ್ ಒಂದನ್ನು ಹಾಕಿದೆ. ಅದರಲ್ಲಿ, “ತೃಣಮೂಲ ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ನೇರ ಮಾತು. ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆಗಳು ಖಂಡಿತವಾಗಿಯೂ ಭಯಮುಕ್ತ, ಹಿಂಸಾಚಾರಮುಕ್ತ, ಬೆದರಿಕೆ ರಹಿತ ಮತ್ತು ಆಮಿಷ ರಹಿತವಾಗಿ ನಡೆಯಲಿವೆ. ಅಷ್ಟೇ ಅಲ್ಲದೆ ಯಾವುದೇ ದಾಳಿಗಳು, ಬೂತ್ ಜಾಮಿಂಗ್ ಮತ್ತು ಸೋರ್ಸ್ ಜಾಮಿಂಗ್ ಇಲ್ಲದೆ ಚುನಾವಣೆ ನಡೆಯಲಿದೆ” ಎಂದು ಆಯೋಗ ಹೇಳಿದೆ.

ನಾಲ್ವರು ಸದಸ್ಯರ ಟಿಎಂಸಿ ನಿಯೋಗದಲ್ಲಿ ಒ’ಬ್ರಿಯಾನ್ ಅವರ ಸಾಗರಿಕಾ ಘೋಷ್, ಸಾಕೇತ್ ಗೋಖಲೆ ಮತ್ತು ಮೇನಕಾ ಗುರುಸ್ವಾಮಿ ಇದ್ದರು. ಮತದಾರರ ಪಟ್ಟಿಯಿಂದ ಸುಮಾರು 27 ಲಕ್ಷ ‘ನ್ಯಾಯಾಂಗ ಪರಿಶೀಲನೆಯಲ್ಲಿರುವ’ (under adjudication) ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಲು ಈ ನಿಯೋಗವು ಆಯೋಗವನ್ನು ಭೇಟಿ ಮಾಡಿತ್ತು.

“ಸಭೆ ಆರಂಭವಾದ ಕೇವಲ ಏಳು ನಿಮಿಷಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ನಮಗೆ ಏನು ಹೇಳಿದರು ಎಂಬುದನ್ನು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಅವರು ‘ಇಲ್ಲಿಂದ ತೊಲಗಿ’ (Get lost) ಎಂದು ಹೇಳಿದರು. ತೃಣಮೂಲ ಕಾಂಗ್ರೆಸ್ ನಿಯೋಗಕ್ಕೆ ಮುಖ್ಯ ಚುನಾವಣಾ ಆಯುಕ್ತರು ನೀಡಿದ ಪ್ರತಿಕ್ರಿಯೆ ಇದು. ನಾವು ಸಂಸತ್ತಿನಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದ್ದೇವೆ” ಎಂದು ಡೆರೆಕ್ ಒ’ಬ್ರಿಯಾನ್ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಬೆಳಿಗ್ಗೆ ಸುಮಾರು 10:02ಕ್ಕೆ ಸಭೆ ಪ್ರಾರಂಭವಾಯಿತು, ಏಳೆಂಟು ನಿಮಿಷಗಳಲ್ಲಿ ಕೊನೆಗೊಂಡಿತು ಎಂದು ಒ’ಬ್ರಿಯಾನ್ ದೂರಿದ್ದಾರೆ.

ಈ ಮಧ್ಯೆ, ಟಿಎಂಸಿ ನಿಯೋಗದ ಸದಸ್ಯರು ಮುಖ್ಯ ಚುನಾವಣಾ ಆಯುಕ್ತರ ಮುಂದೆ ಧ್ವನಿ ಏರಿಸಿದ್ದರು, ಅವರಿಗೆ ಸಭೆಯ ಮರ್ಯಾದೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸಲಾಯಿತು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿರುವುದಾಗಿ ‘ದಿ ಪ್ರಿಂಟ್’ ವರದಿ ಮಾಡಿದೆ.

ಮಮತಾ ಬ್ಯಾನರ್ಜಿಯವರು ಸಿಇಸಿ ಜ್ಞಾನೇಶ್ ಕುಮಾರ್ ಅವರಿಗೆ ಬರೆದ ಒಂಬತ್ತು ಪತ್ರಗಳ ಬಗ್ಗೆ ನಿಯೋಗವು ಸಭೆಯಲ್ಲಿ ಪ್ರಸ್ತಾಪಿಸಿತು, ಆದರೆ ಆ ಪತ್ರಗಳಿಗೆ ‘ಯಾವುದೇ ಸ್ವೀಕೃತಿ ಅಥವಾ ಉತ್ತರ ಬಂದಿಲ್ಲ’ ಎಂದು ಒ’ಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ನೀವು ಈ ಒಂಬತ್ತೂ ಪತ್ರಗಳನ್ನು ನಿರ್ಲಕ್ಷಿಸಿದ್ದೀರಿ ಎಂದು ಹೇಳಿದೆವು. ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಅಧಿಕಾರಿಗಳ ಬಗ್ಗೆ ನಾವು ಆರು ಉದಾಹರಣೆಗಳನ್ನು ನೀಡಿದ್ದೇವೆ. ನಂದಿಗ್ರಾಮದಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡ ಮುಖ್ಯ ಚುನಾವಣಾ ಅಧಿಕಾರಿಯ ಉದಾಹರಣೆ ಸೇರಿದಂತೆ ಒಟ್ಟು ಆರು ನಿದರ್ಶನಗಳನ್ನು ನಾವು ಅವರ ಮುಂದಿಟ್ಟಿದ್ದೇವೆ” ಎಂದು ಒ’ಬ್ರಿಯಾನ್ ಹೇಳಿದ್ದಾರೆ.

“ನಾವು ಅವರಿಗೆ (ಜ್ಞಾನೇಶ್ ಕುಮಾರ್) ಹೇಳಿದೆವು, ನೀವು ಈ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದೀರಿ, ಹೀಗಿರುವಾಗ ನೀವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಹೇಗೆ ನಡೆಸಲು ಬಯಸುತ್ತೀರಿ? ಆಗ ಅವರು ‘ನಿಕಲ್ ಜಾವೋ ಯಹಾ ಸೆ’ (ಇಲ್ಲಿಂದ ಹೊರಟುಹೋಗಿ) ಎಂದು ಹೇಳಿದರು” ಎಂದು ಒ’ಬ್ರಿಯಾನ್ ವಿವರಿಸಿದ್ದಾರೆ.

ಚುನಾವಣಾ ಆಯೋಗದ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಾಕೇತ್ ಗೋಖಲೆ, ಇದೊಂದು ಸುಳ್ಳು ಎಂದು ಆರೋಪಿಸಿದ್ದಾರೆ. “ಇದು ಸುಳ್ಳು. ಸಭೆಯಲ್ಲಿ ನಾನು ವೈಯಕ್ತಿಕವಾಗಿ ಹಾಜರಿದ್ದೆ. ಇಂತಹ ಯಾವುದೇ ಮಾತು ಅಲ್ಲಿ ನಡೆದಿಲ್ಲ. ಸಿಇಸಿ ಜ್ಞಾನೇಶ್ ಕುಮಾರ್ ನಮಗೆ ಹೇಳಿದ್ದು ಕೇವಲ ‘ಗೆಟ್ ಲಾಸ್ಟ್’ (ಇಲ್ಲಿಂದ ತೊಲಗಿ) ಎಂದು ಮಾತ್ರ. ಸಭೆಯ ಸಂಭಾಷಣೆಯ ಪ್ರತಿಲಿಪಿಯನ್ನು ಬಿಡುಗಡೆ ಮಾಡಲು ನಾವು ಇಸಿಐಗೆ ಸವಾಲು ಹಾಕುತ್ತೇವೆ. ಇಲ್ಲದಿದ್ದರೆ ನಾವೇ ಅದನ್ನು ಮಾಡುತ್ತೇವೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಟಿಎಂಸಿ ಅಧಿಕೃತ ಸಾಮಾಜಿಕ ಮಾಧ್ಯಮಗ ಖಾತೆಗಳು ಕೂಡ ಚುನಾವಣಾ ಆಯೋಗದ ಆರೋಪಕ್ಕೆ ತಿರುಗೇಟು ನೀಡಿದ್ದು, “ಚುನಾವಣಾ ಆಯೋಗಕ್ಕೆ ನಮ್ಮ ನೇರ ಮಾತು. ಈ ಬಾರಿ ಚುನಾವಣೆಗಳು ಹೀಗಿರಬೇಕು: ದೆಹಲಿಯ ನಿಯಂತ್ರಣದಿಂದ ಮುಕ್ತವಾಗಿರಬೇಕು, ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು, ಆಯ್ದ ವ್ಯಕ್ತಿಗಳನ್ನು ಗುರಿಯಾಗಿಸುವುದರಿಂದ ಮುಕ್ತವಾಗಿರಬೇಕು ಮತ್ತು ದ್ವಂದ್ವ ನೀತಿಯಿಂದ ಮುಕ್ತವಾಗಿರಬೇಕು” ಎಂದು ಬರೆದುಕೊಂಡಿದೆ.

ನ್ಯಾಯಾಂಗ ಅಧಿಕಾರಿಗಳ ಪರಿಶೀಲನೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರಿಂದ, ಈ 27 ಲಕ್ಷ ಮತದಾರರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ.

“ನ್ಯಾಯಾಂಗ ಅಧಿಕಾರಿಗಳಿಂದ ಹೆಸರು ಅಳಿಸಲ್ಪಟ್ಟ ಮತದಾರರು ಮೇಲ್ಮನವಿ ನ್ಯಾಯಮಂಡಳಿಯನ್ನು ಸಂಪರ್ಕಿಸಬಹುದು. ನ್ಯಾಯಮಂಡಳಿ ಆದೇಶ ನೀಡಿದರೆ ಅವರ ಹೆಸರುಗಳು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸಲಾಗುತ್ತದೆ. ನಂತರ ಅವರು ಮತ ಚಲಾಯಿಸಬಹುದು, ಆದರೆ ಈ ಚುನಾವಣೆಯಲ್ಲಿ ಅಲ್ಲ” ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಅಗರ್ವಾಲ್ ಸೋಮವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಫೆಬ್ರವರಿ 28ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು ಮತದಾರರ ಸಂಖ್ಯೆ 7.04 ಕೋಟಿಯಾಗಿದೆ. ಈ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗುವ ಮೊದಲು ರಾಜ್ಯದಲ್ಲಿ 7.66 ಕೋಟಿ ಮತದಾರರಿದ್ದರು. ಅಂದರೆ, ಈ ಪ್ರಕ್ರಿಯೆಯ ನಂತರ ಮತದಾರರ ಸಂಖ್ಯೆಯಲ್ಲಿ ಶೇಕಡ 8.09 ರಷ್ಟು ಇಳಿಕೆಯಾಗಿದೆ.







ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...