Homeಕರ್ನಾಟಕದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ವಿವೇಕ್ ನಗರದ ನಿವಾಸಿ, ದಲಿತ ಯುವಕ 24 ವರ್ಷದ ದರ್ಶನ್ ಸಾವಿನ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಝೊಮ್ಯಾಟೋ ವಿತರಣಾ ಏಜೆಂಟ್‌ನನ್ನು ಬೆದರಿಸಲು ಮಚ್ಚು ತೋರಿಸಿದ ಆರೋಪದ ಮೇಲೆ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದರು ಎನ್ನಲಾಗಿದೆ. ಹಾಗಾಗಿ, ಇದು ಕಸ್ಟಡಿ ಸಾವು ಎಂದು ಪಿಯುಸಿಎಲ್‌ ವಾದಿಸಿದ್ದು, ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯಿಂದ ನ್ಯಾಯ ಸಿಗುವ ಸಾಧ್ಯತೆ ಇಲ್ಲ. ಏಕೆಂದರೆ, ಇಲ್ಲಿಯವರೆಗೆ ಯಾವುದೇ ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದೆ.

ತ್ವರಿತ ವಿಚಾರಣೆಗೆ ಕೋರುವುದರ ಜೊತೆಗೆ, ದರ್ಶನ್ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಪಿಯುಸಿಎಲ್‌ ಮನವಿ ಮಾಡಿದೆ. ಪ್ರಕರಣದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ನಿರ್ದೇಶನ ನೀಡಲು ಕೋರಿದೆ.

“ನಾವು ನಿರ್ದಿಷ್ಟ ಪ್ರಕರಣದ ತನಿಖೆಗೆ ಮಾತ್ರ ನೋಟಿಸ್ ನೀಡುತ್ತಿದ್ದೇವೆ, ಇತರ ಮನವಿಗಳಿಗೆ ಸಂಬಂಧಪಟ್ಟಂತೆ ನೋಟಿಸ್ ನೀಡುತ್ತಿಲ್ಲ” ಎಂಬುವುದಾಗಿ ನ್ಯಾಯಾಧೀಶರು ಮೌಖಿಕವಾಗಿ ಹೇಳಿದ್ದಾರೆ” ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ವಿಭೂ ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ನೀಡಿರುವ ನೋಟಿಸ್, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 999/2025 ರ ಯುವಕನ ಸಾವಿಗೆ ಸಂಬಂಧಿಸಿದಂತೆ ಮಾತ್ರ ಸೀಮಿತವಾಗಿರುತ್ತದೆ ಎಂದು ತಿಳಿಸಿದೆ.

“ವಿವೇಕ ನಗರ ಪೊಲೀಸರು ವಶಕ್ಕೆ ಪಡೆದ ನಂತರ ಮೃತನ (ದರ್ಶನ್) ಮೇಲೆ ಭೀಕರ ದೌರ್ಜನ್ಯ ನಡೆಸಲಾಗಿದೆ. ದರ್ಶನ್ ತನ್ನ ಮನೆಯ ಹೊರಗೆ ಕುಳಿತಿದ್ದಾಗ, ಝೊಮ್ಯಾಟೋ ವಿತರಣಾ ಏಜೆಂಟ್‌ ಅನ್ನು ಹೆದರಿಸಲು ಮಚ್ಚು ಬೀಸಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದರು. ತರುವಾಯ, ಸೋನೇನಹಳ್ಳಿಯ ನಿವಾಸಿಯಾದ ದರ್ಶನ್ ನವೆಂಬರ್ 2025 ರಲ್ಲಿ ಪುನರ್ವಸತಿ ಕೇಂದ್ರದಲ್ಲಿ ಸಾವನ್ನಪ್ಪಿದ್ದರು” ಎಂದು ಪಿಯುಸಿಎಲ್‌ ಅರ್ಜಿಯಲ್ಲಿ ಹೇಳಿರುವುದಾಗಿ livelaw.in ವಿವರಿಸಿದೆ.

“ಮರಣೋತ್ತರ ಪರೀಕ್ಷೆಯ ವರದಿಯು ದರ್ಶನ್ ಅವರ ದೇಹದಾದ್ಯಂತ ಗಂಭೀರವಾದ ಗಾಯಗಳಾಗಿರುವುದನ್ನು ಸೂಚಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿ ವಿಭಾಗ ನಡೆಸುತ್ತಿದ್ದರೂ ಸಹ, ಇದುವರೆಗೆ ಯಾವುದೇ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿಲ್ಲ. ಅಲ್ಲದೆ, ಈ ವಿಷಯದಲ್ಲಿ ತಮ್ಮ ದೂರನ್ನು ಹಿಂಪಡೆಯುವಂತೆ ಸಂತ್ರಸ್ತನ ಕುಟುಂಬಕ್ಕೆ ಪ್ರಭಾವಿ ವ್ಯಕ್ತಿಗಳು ಮತ್ತು ಪೊಲೀಸ್ ಅಧಿಕಾರಿಗಳಿಂದ ಬೆದರಿಕೆಗಳು ಬರುತ್ತಿವೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

“ಕಳೆದ ಐದು ವರ್ಷಗಳಲ್ಲಿ ನಡೆದ ಕಸ್ಟಡಿ ಸಾವುಗಳ ಕುರಿತ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ರಚಿಸಬೇಕು. ಹೆಚ್ಚುವರಿಯಾಗಿ, ಕಸ್ಟಡಿ ಚಿತ್ರಹಿಂಸೆ ಮತ್ತು ಸಾವುಗಳನ್ನು ತಡೆಗಟ್ಟಲು ಸಮಗ್ರ ಮಾರ್ಗಸೂಚಿಯನ್ನು ರೂಪಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಪತ್ತೆಹಚ್ಚಲು ರಾಜ್ಯದಾದ್ಯಂತ ಇರುವ ಎಲ್ಲಾ ಪೊಲೀಸ್ ಠಾಣೆಗಳಲ್ಲಿನ ಸಿಸಿಟಿವಿ ಕ್ಯಾಮರಾಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಬೇಕು” ಪಿಯುಸಿಎಲ್‌ ತನ್ನ ಅರ್ಜಿಯಲ್ಲಿ ಮನವಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ನಿಗದಿಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...