Homeಮುಖಪುಟಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

- Advertisement -
- Advertisement -

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ.

ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ‘ಗೌರವ ಸೂಚಕ’ ವಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇದರಿಂದ ಸುನೇತ್ರಾ ಪವಾರ್ ಉಪಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಎಪ್ರಿಲ್ 23ರಂದು ನಡೆಯಲಿರುವ ಬಾರಾಮತಿ ಉಪಚುನಾವಣೆಯಿಂದ ಹಿಂದೆ ಸರಿಯುವಂತೆ ಶರದ್ ಪವಾರ್ ಮತ್ತು ಸುಪ್ರಿಯಾ ಸುಳೆ ಸೇರಿದಂತೆ ಹಿರಿಯ ಎನ್‌ಸಿಪಿ (ಎಸ್‌ಪಿ) ನಾಯಕರು ಒತ್ತಾಯಿಸಿದ ನಂತರ ಕಾಂಗ್ರೆಸ್ ಕಣದಿಂದ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ಜನವರಿಯಲ್ಲಿ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದರು. ಆಗ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಬಾರಾಮತಿಯ ಶಾಸಕರಾಗಿದ್ದರು. ಅವರ ನಿಧನದ ಬಳಿಕ ಸುನೇತ್ರ ಪವಾರ್ ಅವರನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಆಗಿ ನೇಮಕ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಗೆದ್ದು ತಮ್ಮ ಸ್ಥಾನ ಉಳಿಸಿಕೊಳ್ಳುವ ಸವಾಲು ಸುನೇತ್ರಾ ಪವಾರ್ ಅವರಿಗೆ ಎದುರಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...