Homeಕರ್ನಾಟಕ‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

- Advertisement -
- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ‘ಪ್ರಚಾರಕ್ಕಾಗಿ ಪಿಐಎಲ್ ಸಲ್ಲಿಕೆ’ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಅರ್ಜಿದಾರರಿಗೆ ಬರೋಬ್ಬರಿ ₹1 ಲಕ್ಷ ದಂಡ ವಿಧಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. ಇದನ್ನು ಪ್ರಶ್ನಿಸಿ ಬೆಂಗಳೂರಿನ ಎಚ್‌.ಎನ್‌ ಚಂದನಾ ಮತ್ತು ಎಸ್ ವೆಂಕಟೇಶ್ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಸಚಿವ ಮಧು ಬಂಗಾರಪ್ಪ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆದ್ದರಿಂದ ನ್ಯಾಯಾಲಯವು ವಿಶೇಷ ವ್ಯಾಪ್ತಿಯ ಅಧಿಕಾರ ಬಳಸಿ ಈ ಹೇಳಿಕೆಯನ್ನು ವಜಾಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಆದರೆ ಈ ಅರ್ಜಿ ವಿಚಾರಣೆ ನಡೆಸಿದ ಪೀಠ ಬರೀ ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.

ಹಾಗೆಯೇ ಅರ್ಜಿದಾರರಿಗೆ ₹50,000 ದಂಡ ವಿಧಿಸಿ ಅರ್ಜಿ ವಜಾಗೊಳಿಸಿತ್ತು. ಈ ಮೊತ್ತವನ್ನು ಎರಡು ವಾರಗಳಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿ ಮಾಡಬೇಕು. ಅರ್ಜಿದಾರರು ಗಡುವಿನ ಒಳಗಾಗಿ ದಂಡ ಪಾವತಿಸದಿದ್ದರೆ ಭೂಕಂದಾಯ ಬಾಕಿಯಾಗಿ ವಸೂಲಿ ಮಾಡಲು ಜಿಲ್ಲಾಧಿಕಾರಿಗೆ ಆದೇಶ ಕಳುಹಿಸಿಕೊಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಪತ್ರಿಕೆಗಳ ವರದಿಯಲ್ಲಿ ಇರುವುದು ಮೂರು ಪದಗಳು ಮಾತ್ರ. ಹಿಂದಿಯನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತದೆ ಎಂದು ವರದಿಯೇ ಆಗಿಲ್ಲ. ಆದ್ದರಿಂದ ದಂಡವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

ಅರ್ಜಿದಾರರ ಪರ ವಕೀಲರ ಮರು ವಾದದ ಬಳಿಕ ದಂಡದ ಮೊತ್ತವನ್ನು ಏರಿಸಿದ ಹೈಕೋರ್ಟ್, “ಇದು ಪ್ರಚಾರಕ್ಕಾಗಿ ಸಲ್ಲಿಸಿದ ಅರ್ಜಿ. ವಿವಾದಾತ್ಮಕ ವಿಷಯದ ಬಗ್ಗೆ ಚರ್ಚೆಯಾಗುತ್ತಿರುವಾಗ ವರದಿಯಾಗದ ಹೇಳಿಕೆ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದೆ.. ಇನ್ನು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಹಾಜರಿದ್ದರು.

ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ, ‘ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್‌ಗಳನ್ನು (A, B, C, D) ಮಾತ್ರ ನೀಡಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರಲಾಗುವುದು” ಎಂದು ಹೇಳಿದ್ದರು.

ಅದರಂತೆ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಮೊತ್ತಕ್ಕೆ ಪರಿಗಣಿಸುವುದಿಲ್ಲ. ಇದರಿಂದ ಎಸ್‌ಎಸ್‌ಎಲ್‌ಸಿ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಲಿವೆ. ಹಾಗೆಯೇ ತೃತೀಯ ಭಾಷಾ ವಿಷಯದಲ್ಲಿ ಇನ್ನು ಮುಂದೆ ‘ಪಾಸು’ ಅಥವಾ ‘ಫೇಲು’ ಎಂಬ ವ್ಯವಸ್ಥೆ ಇರುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....