Homeಅಂತರಾಷ್ಟ್ರೀಯಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

- Advertisement -
- Advertisement -

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ಜೆ.ಡಿ ವ್ಯಾನ್ಸ್ ನಿಯೋಗದಲ್ಲಿ ಅಧ್ಯಕ್ಷ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಧ್ಯಕ್ಷ ಟ್ರಂಪ್ ಅವರ ಅಳಿಯ ಮತ್ತು ಸಲಹೆಗಾರ ಜೇರೆಡ್ ಕುಶ್ನರ್, ರಕ್ಷಣಾ ಇಲಾಖೆ ಅಥವಾ ನೌಕಾಪಡೆಯ ಉನ್ನತ ಅಧಿಕಾರಿ ಬ್ರಾಡ್ ಕೂಪರ್ ಮತ್ತು ಹೆಚ್ಚುವರಿಯಾಗಿ, ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಮತ್ತು ವಿದೇಶಾಂಗ ಇಲಾಖೆಯ ತಜ್ಞರು ಇರಲಿದ್ದಾರೆ.

ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ.

ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ ಮತ್ತು ಕಾರ್ಯತಂತ್ರದ ಮಾತುಕತೆಗಾಗಿ) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಝ್ ಸಾದಿಕ್ ಮತ್ತು ಆಂತರಿಕ ಸಚಿವ (ಭದ್ರತಾ ವ್ಯವಸ್ಥೆಗಳ ಉಸ್ತುವಾರಿ) ಮೊಹ್ಸಿನ್ ನಖ್ವಿ ಇರಲಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಸಂಘರ್ಷ ಪ್ರಾರಂಭಗೊಂಡಿತ್ತು. ನಂತರ ಏಪ್ರಿಲ್ 7ರಂದು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಘೋಷಿಸಲಾದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಪ್ರಸ್ತುತ ಜಾರಿಯಲ್ಲಿದೆ.

ತಾತ್ಕಾಲಿಕ ಕದನ ವಿರಾಮಕ್ಕೆ ಎರಡು ಬೃಹತ್ ಮಿಲಿಟರಿ ಶಕ್ತಿಯ ರಾಷ್ಟ್ರಗಳನ್ನು ಒಪ್ಪಿಸಿರುವುದೇ ಪಾಕಿಸ್ತಾನದ ರಾಜತಾಂತ್ರಿಕತೆಗೆ ದೊರೆತ ದೊಡ್ಡ ಗೆಲವು ಎಂದು ಹೇಳಲಾಗ್ತಿದೆ. ಹಾಗಾಗಿ, ಶಾಶ್ವತ ಕದನ ವಿರಾಮಕ್ಕಾಗಿ ಶಾಂತಿ ಮಾತುಕತೆ ವಿಚಾರದಲ್ಲಿ ಪಾಕಿಸ್ತಾನ ಬಹಳ ಮುತುವರ್ಜಿ ವಹಿಸಿದೆ.

ಅಮೆರಿಕವು ಮುಖ್ಯವಾಗಿ ಇರಾನ್‌ನ ಪರಮಾಣು ಅಸ್ತ್ರ ತಯಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಹಾರ್ಮುಝ್  ಜಲಸಂಧಿಯನ್ನು ಅಂತಾರಾಷ್ಟ್ರೀಯ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ತನ್ನ ಮೇಲಿನ ಆರ್ಥಿಕ ನಿರ್ಬಂಧಗಳ ತೆರವು ಮತ್ತು ಅಮೆರಿಕದಲ್ಲಿ ಸ್ಥಗಿತಗೊಂಡಿರುವ ತನ್ನ ಆಸ್ತಿಗಳ ಬಿಡುಗಡೆಗೆ ಒತ್ತಾಯಿಸುತ್ತಿದೆ. ಆದರೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಈ ಮಾತುಕತೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದ್ದು, ಲೆಬನಾನ್‌ನಲ್ಲಿ ಸಂಪೂರ್ಣ ಕದನ ವಿರಾಮ ಏರ್ಪಡುವವರೆಗೂ ಶಾಶ್ವತ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಪಟ್ಟು ಹಿಡಿದಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಈ ಮಾತುಕತೆಯನ್ನು “ಮಾಡು ಇಲ್ಲವೇ ಮಡಿ” (make-or-break) ಕ್ಷಣವೆಂದು ಬಣ್ಣಿಸಿದ್ದು, ಇಡೀ ವಿಶ್ವದ ಗಮನ ಈಗ ಇಸ್ಲಾಮಾಬಾದ್‌ನತ್ತ ನೆಟ್ಟಿದೆ. ಮಾತುಕತೆಯನ್ನು ಯಶಸ್ವಿಗೊಳಿಸಲು ಪಾಕಿಸ್ತಾನದ ಉನ್ನತ ಸೇನಾ ಅಧಿಕಾರಿಗಳು ಕೂಡ ಭದ್ರತೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನೇರ ಮಾತುಕತೆ ಇಲ್ಲ

ಅಮೆರಿಕ ಮತ್ತು ಇರಾನ್ ನಡುವೆ ನೇರ ಮುಖಾಮುಖಿ ಮಾತುಕತೆ ನಡೆಯುತ್ತಿಲ್ಲ. ಬದಲಾಗಿ, ಈ ಮಾತುಕತೆಯು ‘ಪರೋಕ್ಷ’ ರೂಪದಲ್ಲಿರಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಪ್ರತಿನಿಧಿಗಳು ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವೆ ಸಂದೇಶಗಳನ್ನು ರವಾನಿಸಲಿದ್ದಾರೆ.

ವರದಿಗಳ ಪ್ರಕಾರ, ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಇರಾನ್‌ನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ಅವರು ಒಂದೇ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿಲ್ಲ. ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿದ್ದು, ಮಧ್ಯಸ್ಥಿಕೆದಾರರ ಮೂಲಕ ತಮ್ಮ ಬೇಡಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಅಮೆರಿಕದೊಂದಿಗೆ ನೇರವಾಗಿ ಮಾತನಾಡಲು ಇರಾನ್ ನಿರಾಕರಿಸಿದೆ. ತನ್ನ ಮೇಲಿನ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕುವವರೆಗೂ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ನಿಲ್ಲುವವರೆಗೂ ನೇರ ಮಾತುಕತೆಗೆ ಅವಕಾಶವಿಲ್ಲ ಎಂಬುದು ಇರಾನ್‌ನ ನಿಲುವಾಗಿದೆ.

ಈ ಹಿಂದೆಯೂ (ಉದಾಹರಣೆಗೆ ವಿಯೆನ್ನಾ ಮಾತುಕತೆಗಳಲ್ಲಿ) ಇರಾನ್ ಮತ್ತು ಅಮೆರಿಕ ನಡುವೆ ಐರೋಪ್ಯ ಒಕ್ಕೂಟ ಅಥವಾ ಇತರ ದೇಶಗಳ ಮೂಲಕ ಇಂತಹ ಪರೋಕ್ಷ ಮಾತುಕತೆಗಳೇ ನಡೆದಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...