Homeಮುಖಪುಟಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.

ಸಿ ಗೀತಾ ಎಂಬವರು ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತಂಗರೈ ಮತ್ತು ಬರಗೂರ್ ವಿಧಾನಸಭಾ ಕ್ಷೇತ್ರಗಳಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು.

ಚುನಾವಣಾ ಆಯೋಗವು ಅರ್ಜಿಯನ್ನು ‘ತುಂಬಾ ತಡವಾಗಿ ಸಲ್ಲಿಸಲಾಗಿದೆ’ ಎಂದು ಹೇಳಿದ ನಂತರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಂಚೋಲಿ ಅವರಿದ್ದ ಪೀಠವು ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ ಎಂದು ವರದಿ ಹೇಳಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಾಗವಾಗಿ ತಮಿಳುನಾಡಿನ ಅಂತಿಮ ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಚುನಾವಣಾ ಆಯೋಗ ಫೆಬ್ರವರಿ 23ರಂದು ತಿಳಿಸಿದೆ. ಎಸ್‌ಐಆರ್‌ ಬಳಿಕ, ಅಂತಿಮ ಪಟ್ಟಿಯಲ್ಲಿ ರಾಜ್ಯದಲ್ಲಿ 5.6 ಕೋಟಿ ಮತದಾರರಿದ್ದಾರೆ ಎಂದು ತೋರಿಸಲಾಗಿದೆ.

2025ರ ಅಕ್ಟೋಬರ್ 27 ರಂದು ಮತದಾರರ ಪಟ್ಟಿ ಪರಿಷ್ಕರಣೆ ಆರಂಭಗೊಳ್ಳುವ ಮೊದಲು ತಮಿಳುನಾಡಿನಲ್ಲಿ 6.4 ಕೋಟಿ ಮತದಾರರಿದ್ದರು. ಎಸ್‌ಐಆರ್ ಬಳಿಕ ಡಿಸೆಂಬರ್‌ನಲ್ಲಿ ಕರಡು ಪಟ್ಟಿ ಪ್ರಕಟಿಸಿದಾಗ, 97.3 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕಲಾಗಿತ್ತು.

ಚುನಾವಣಾ ಆಯೋಗದ ಪ್ರಕಾರ, ಜನವರಿ 30 ರಂದು ಕೊನೆಗೊಂಡ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ 27.5 ಲಕ್ಷ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ. ಈ ಹಂತದಲ್ಲಿ ಒಟ್ಟು 4.2 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ.

ಏಪ್ರಿಲ್ 2ರಂದು ನಾಮಪತ್ರ ಸಲ್ಲಿಸಲು ಮುಂದಾದಾಗ ತನ್ನ ಹೆಸರು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂದು ಗೊತ್ತಾಗಿರುವುದಾಗಿ ಗೀತಾ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು ಎಂದು ಲೈವ್ ಲಾ ವರದಿ ಮಾಡಿದೆ.

ಗೀತಾ ಅವರ ವಕೀಲ ಗೋಪಾಲ್ ಶಂಕರನಾರಾಯಣನ್, ಗೀತಾ ಅವರ ಹೆಸರು 2007ರಿಂದ ಮತದಾರರ ಪಟ್ಟಿಯಲ್ಲಿತ್ತು. ಅರ್ಹತೆಯ ಪುರಾವೆಯಾಗಿ ಅವರು ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ಅನ್ನು ಹೊಂದಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮತದಾರರ ಪಟ್ಟಿಯಿಂದ ಗೀತಾ ಅವರ ಹೆಸರನ್ನು ಅಳಿಸಿರುವುದು ನ್ಯಾಯಸಮ್ಮತವಲ್ಲ ಎಂದು ಶಂಕರನಾರಾಯಣನ್ ಹೇಳಿದ್ದರು. ಆದರೂ, ಚುನಾವಣಾ ಆಯೋಗ ತಡವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ವಾದಿಸಿದೆ.

“ಪಾಸ್‌ಪೋರ್ಟ್ ಪೌರತ್ವಕ್ಕೆ ಪುರಾವೆಯಾಗಿದೆ. ಪಾಸ್‌ಪೋರ್ಟ್ ಹೊಂದಿರುವ ಪ್ರತಿಯೊಬ್ಬರನ್ನು ನೀವು ಸ್ವಯಂಚಾಲಿತವಾಗಿ ಸೇರಿಸಬೇಕು. ನನಗೆ ಒಂದೇ ಒಂದು ಸೂಚನೆ ಕೂಡ ಬಂದಿಲ್ಲ. ನನ್ನ ನಾಮನಿರ್ದೇಶನವನ್ನು ಮರೆತುಬಿಡಿ, ಕನಿಷ್ಠ ನನ್ನ ಮತದಾನದ ಹಕ್ಕು ಅಲ್ಲಿರಬೇಕೆಂದು ನಾನು ಹೇಳುತ್ತಿದ್ದೇನೆ” ಎಂದು ಗೀತಾ ಅವರ ಪರ ವಕೀಲ ಹೇಳಿದ್ದಾರೆ.

ಮತದಾರರ ಪಟ್ಟಿಗೆ ಸೇರಿಸಲು ತಮ್ಮ ಮನವಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್‌ನ ಏಪ್ರಿಲ್ 7ರ ಆದೇಶವನ್ನು ಪ್ರಶ್ನಿಸಿ ಗೀತಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಸಮಯದೊಳಗೆ ಅರ್ಜಿದಾರರು ತಮ್ಮ ಆಕ್ಷೇಪಣೆಯನ್ನು ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೈಕೋರ್ಟ್‌ಗೆ ಹೇಳಿತ್ತು ಎಂದು livelaw.in ವರದಿ ತಿಳಿಸಿದೆ.

ಚುನಾವಣಾ ಆಯೋಗದ ವಾದ ಆಲಿಸಿದ ಹೈಕೋರ್ಟ್, ಗೀತಾ ಅವರು ಚುನಾವಣಾ ಆಯೋಗ ನಿಗದಿಪಡಿಸಿದ ಸಮಯದೊಳಗೆ ತಮ್ಮ ಆಕ್ಷೇಪಣೆ ಅಥವಾ ಮನವಿ ಸಲ್ಲಿಸಬೇಕಿತ್ತು ಎಂದು ಹೇಳಿರುವುದಾಗಿ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...