Homeಕರ್ನಾಟಕಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಚಳ್ಳಕೆರೆ ತಾಲ್ಲೂಕು ತಳಕು ಠಾಣೆ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಚಳ್ಳಕೆರೆ ತಾಲ್ಲೂಕಿನ ಬಂಗಾರದೇವರಹಟ್ಟಿ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಎಚ್.ಒ. ರಾಜಣ್ಣ ಪರಾರಿಯಾಗಿದ್ದಾನೆ.

ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಕಾರಣ ಚಳ್ಳಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ, ಅಲ್ಲಿಂದಲೇ ಪರಾರಿಯಾಗಿದ್ದಾನೆ.

ವಿದ್ಯಾರ್ಥಿನಿಯೊಂದಿಗೆ ಸಲುಗೆ ಹೊಂದಿದ್ದ ರಾಜಣ್ಣ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ. ವಿದ್ಯಾರ್ಥಿನಿ ಗರ್ಭಿಣಿಯಾದ ನಂತರ ಚಳ್ಳಕೆರೆ ನಗರದ ಶ್ರೀಲಕ್ಷ್ಮಿ ಶ್ರೀನಿವಾಸ ನರ್ಸಿಂಗ್ ಹೋಂನ ವೈದ್ಯೆ ಶಂಕರಲಕ್ಷ್ಮಿ ಅವರನ್ನು ಸಂಪರ್ಕಿಸಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗರ್ಭಪಾತ ಮಾಡಿದ ವೈದ್ಯರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಆರೋಪಿಯು ಸಂತ್ರಸ್ತೆಯನ್ನು ತಳಕು ಮತ್ತು ಚಳ್ಳಕೆರೆ ನಗರದ ಇತರ ಸ್ಥಳಗಳಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧವನ್ನು ಯಾರಿಗೂ ಬಹಿರಂಗಪಡಿಸದಂತೆ ಆಕೆಗೆ ಎಚ್ಚರಿಕೆ ನೀಡಿದ್ದ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ದೂರು ದಾಖಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಚಳ್ಳಕೆರೆಯ ಬಿಇಒ ಮೂಲಕ ತನಿಖೆ ಆರಂಭಿಸಿದ್ದು, ರಾಜಣ್ಣ ಅವರನ್ನು ಅಮಾನತುಗೊಳಿಸಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎನ್. ರೇಖಾ ಮತ್ತು ಅವರ ತಂಡ ಬಂಗಾರದೇವರಹಟ್ಟಿಗೆ ತೆರಳಿ ಬಾಲಕಿಯ ಪೋಷಕರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿ, ಗರ್ಭಪಾತ ಮಾಡಿದ ನಗರದ ಸೋಮಗುಡು ರಸ್ತೆಯಲ್ಲಿರುವ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ರಾಜಣ್ಣ ಮತ್ತು ಡಾ. ಶಂಕರ ಲಕ್ಷ್ಮಿ ವಿರುದ್ಧ ತಳಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿವೈಎಸ್ಪಿ ಚಳ್ಳಕೆರೆ ಅವರು ಪೋಕ್ಸೋ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬ್ಲಾಕ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿರುವುದಾಗಿ ವರದಿಯಾಗಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...