Homeಅಂತರಾಷ್ಟ್ರೀಯಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

- Advertisement -
- Advertisement -

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತ ಫೋಟೋ ಹಂಚಿಕೊಂಡಿರುವ ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್, “ಈ ವಿಮಾನದಲ್ಲಿ ನನ್ನ ಸಹಪ್ರಯಾಣಿಕರು” ಎಂದು ಬರೆದುಕೊಂಡಿದ್ದಾರೆ. ಮಿನಾಬ್ 168 ಎಂಬ ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ.

ಫೆಬ್ರವರಿ 28, 2026ರಂದು ಬೆಳಗ್ಗೆ ಸುಮಾರು 10:45ಕ್ಕೆ ಇರಾನ್‌ನ ಹಾರ್ಮೋಜ್ಗಾನ್ ಪ್ರಾಂತ್ಯದ ಮಿನಾಬ್ ನಗರದ ಶಾಜರೆಹ್ ತಯ್ಯೆಬೆಹ್ ಎಂಬ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಯ ಮೇಲೆ ಅಮೆರಿಕ-ಇರಾನ್ ಜಂಟಿ ಕ್ಷಿಪಣಿ ದಾಳಿ ನಡೆಸಿತ್ತು.

ಅಮೆರಿಕದ ನೌಕಾಪಡೆಯ ಹಡಗಿನಿಂದ ಉಡಾಯಿಸಲಾದ ಟೊಮಾಹಾಕ್ ಎಂಬ ಮೂರು ಅತ್ಯಂತ ನಿಖರವಾದ ಕ್ರೂಸ್ ಕ್ಷಿಪಣಿಗಳಿಂದ ದಾಳಿ ಮಾಡಲಾಗಿತ್ತು. ಮೊದಲ ಕ್ಷಿಪಣಿ ಶಾಲೆಯ ಮೇಲ್ಛಾವಣಿಯನ್ನು ಧ್ವಂಸಗೊಳಿಸಿದರೆ, ಉಳಿದ ಕ್ಷಿಪಣಿಗಳು ಪ್ರಾರ್ಥನಾ ಕೊಠಡಿ ಮತ್ತು ಆವರಣದ ಮೇಲೆ ಬಿದ್ದಿತ್ತು.

ಈ ಭೀಕರ ದಾಳಿಯಲ್ಲಿ ಕನಿಷ್ಠ 175 ಜನರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರಲ್ಲಿ 100ಕ್ಕೂ ಹೆಚ್ಚು ಮಂದಿ 7 ರಿಂದ 12 ವರ್ಷದ ಶಾಲಾ ಮಕ್ಕಳಾಗಿದ್ದಾರೆ.

ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂಬ ಆರೋಪವನ್ನು ಅಮೆರಿಕ ತಿರಸ್ಕರಿಸುತ್ತಲೇ ಬಂದಿದೆ. ಶಾಲೆಯ ಪಕ್ಕದಲ್ಲೇ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನೌಕಾ ನೆಲೆ ಇದ್ದುದರಿಂದ, ಗುರಿ ಗುರುತಿಸುವಲ್ಲಿ ಆದ ತಾಂತ್ರಿಕ ತಪ್ಪಿನಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯ ತಜ್ಞರು ಈ ದಾಳಿಯನ್ನು ಕಟುವಾಗಿ ಖಂಡಿಸಿದ್ದಾರೆ. ಇರಾನ್ ಸರ್ಕಾರವು ಮೃತ ಮಕ್ಕಳ ಸ್ಮರಣಾರ್ಥ ಈ ಶಾಲೆಯನ್ನು ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲು ನಿರ್ಧರಿಸಿದೆ.

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಂಡಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...