Homeಮುಖಪುಟಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ ಕ್ಷೇತ್ರದಲ್ಲೇ ನನ್ನ ವಿರುದ್ಧ ಎರಡು ಸುಳ್ಳು ಅಫಿಡವಿಟ್‌ ಗಳನ್ನು ಸಲ್ಲಿಸಿ ನಾಮಪತ್ರವನ್ನು ರದ್ದುಗೊಳಿಸಲು ಯತ್ನಿಸಿದರು. ಅವರು ಯಶಸ್ವಿಯಾಗಲಿಲ್ಲ, ಆದರೆ ಹಲವು ಬಾರಿ ಪ್ರಯತ್ನಿಸಿದರು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನನ್ನನ್ನೇ ಸ್ಪರ್ಧಿಸದಂತೆ ತಡೆಯಲು ಪ್ರಯತ್ನಿಸಿದ್ದರೆ, ಸಾಮಾನ್ಯ ಜನರಿಗೆ ಏನು ಮಾಡಬಹುದು ಎಂಬುದನ್ನು ನೀವು ಅರ್ಥಮಾಡಿಕೊಳ್ಳಿ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನಾಮಪತ್ರ ಪರಿಶೀಲನೆ ವೇಳೆ ಕೆಲವು ಗೊಂದಲಗಳು ಎದುರಾಗಿತ್ತು. ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಅವರ ಪತ್ನಿ ಹಾಗೂ ಸೂಚಕರಾದ ಇಸ್ಮತ್ ಹಕೀಮ್ ಅವರ ಹೆಸರಿನ ವ್ಯತ್ಯಾಸದ ಬಗ್ಗೆ ಪ್ರಶ್ನೆ ಎತ್ತಲಾಗಿತ್ತು. ಅವರು ವಿವಾಹಕ್ಕೂ ಮೊದಲು ‘ಇಸ್ಮತ್ ಅರಾ’ ಎಂಬ ಹೆಸರನ್ನು ಬಳಸುತ್ತಿದ್ದರು. ನಂತರ ದಾಖಲೆಗಳಲ್ಲಿ ‘ಇಸ್ಮತ್ ಹಕೀಮ್’ ಎಂದು ಬದಲಾಯಿಸಲಾಗಿತ್ತು. ಪರಿಶೀಲನೆ ವೇಳೆ ದಾಖಲೆಗಳನ್ನು ಸಲ್ಲಿಸಿದ ಬಳಿಕ ಈ ಗೊಂದಲ ನಿವಾರಣೆಯಾಯಿತು ಎಂದು ವರದಿಯಾಗಿದೆ.

“ಇಂತಹ ವಿಷಯಗಳು ಸಾಮಾನ್ಯವಾಗಿ ಕೆಲವೇ ನಿಮಿಷಗಳಲ್ಲಿ ಮುಗಿಯುತ್ತವೆ. ಆದರೆ, ಇಲ್ಲಿ ಸೂಚಕರನ್ನು ಸುಮಾರು ಎರಡು ಗಂಟೆಗಳ ಕಾಲ ಕಾಯುವಂತೆ ಮಾಡಲಾಯಿತು. ಇದರಿಂದ ಅನುಮಾನ ಉಂಟಾಯಿತು” ಎಂದು ಟಿಎಂಸಿ ಸದಸ್ಯರೊಬ್ಬರು ಹೇಳಿದ್ದಾರೆ.

ವರದಿಗಳ ಪ್ರಕಾರ, ಇನ್ನೊಂದು ಗೊಂದಲ, ಸುಮಾರು ಎರಡು ದಶಕಗಳ ಹಿಂದೆ ಬಹಿರಂಗಪಡಿಸದ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಡಲಾಗಿತ್ತು. ಆದರೆ ಇದಕ್ಕೆ ಯಾವುದೇ ಪುರಾವೆಗಳು ಇರಲಿಲ್ಲ ಎಂದು ಪಕ್ಷದ ಕಾರ್ಯಕಾರಿಣಿ ಸ್ಪಷ್ಟಪಡಿಸಿದ್ದಾರೆ. ಆ ವಿಭಾಗವನ್ನು ‘ಅನ್ವಯಿಸುವುದಿಲ್ಲ’ ಎಂದು ಗುರುತಿಸಲಾಗಿತ್ತು.

ಮೂರನೇ ಗೊಂದಲವು ಮತಪತ್ರದ ವ್ಯವಸ್ಥೆಗೆ (ಬ್ಯಾಲೆಟ್ ಲಾಜಿಸ್ಟಿಕ್ಸ್) ಸಂಬಂಧಿಸಿದ್ದಾಗಿತ್ತು. ಆರಂಭದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದ ಕಾರಣ, ಬ್ಯಾನರ್ಜಿಯವರ ಹೆಸರು ಎರಡನೇ ಇವಿಎಂ ಯಂತ್ರಕ್ಕೆ ಹೋಗುವ ಸಾಧ್ಯತೆಯಿತ್ತು, ಏಕೆಂದರೆ ಒಂದು ಯಂತ್ರವು ಕೇವಲ 16 ಹೆಸರುಗಳನ್ನು ಮಾತ್ರ ಪ್ರದರ್ಶಿಸಬಲ್ಲದು. ಇದಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಕ್ಷೇಪ ವ್ಯಕ್ತಪಡಿಸಿತು. ಈ ಬಗ್ಗೆ ಮಾತನಾಡಿದ ಪಕ್ಷದ ಪದಾಧಿಕಾರಿಯೊಬ್ಬರು, “ಒಬ್ಬ ಹಾಲಿ ಮುಖ್ಯಮಂತ್ರಿಯ ಹೆಸರನ್ನು ಎರಡನೇ ಇವಿಎಂ ಯಂತ್ರಕ್ಕೆ ತಳ್ಳಲು ಸಾಧ್ಯವಿಲ್ಲ, ಇದು ಮತದಾರರಲ್ಲಿ ಗೊಂದಲ ಉಂಟುಮಾಡುತ್ತಿತ್ತು” ಎಂದಿದ್ದಾರೆ. ನಂತರ ನಾಲ್ಕು ನಾಮಪತ್ರಗಳು ರದ್ದಾದವು, ಇದರಿಂದಾಗಿ ಒಂದಕ್ಕಿಂತ ಹೆಚ್ಚು ಯಂತ್ರಗಳನ್ನು ಬಳಸುವ ಅಗತ್ಯವಿಲ್ಲದಂತಾಯಿತು ಎಂದು ವರದಿಯಾಗಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...