Homeಕರ್ನಾಟಕಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

- Advertisement -
- Advertisement -

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ.

ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಹಶ್ಮಿ ನಗರದಲ್ಲಿರುವ ಅವರ ಮನೆಗೆ ನಾಲ್ವರು ವ್ಯಕ್ತಿಗಳು ನುಗ್ಗಿದ್ದು, ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. 

ದಾಳಿಕೋರರು ಫೈರೋಜ್‌ನನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋದಾಗ ಪರಿಸ್ಥಿತಿ ಉಲ್ಬಣಗೊಂಡಿದ್ದು, ಗುಂಪಿನಲ್ಲಿದ್ದ ಒಬ್ಬ ಫೈರೋಜ್ ಗೆ ಚಾಕುವಿನಿಂದ ಇರಿದಿದ್ದಾನೆ. ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಫೈರೋಜ್ ಒಳಗೆ ಓಡಿಹೋಗಲು ಯತ್ನಿಸಿದ್ದಾನೆ. ಆದರೆ ದಾಳಿಕೋರರು ಅವನನ್ನು ಬೆನ್ನಟ್ಟಿ ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ್ದು, ಅವನ ತಲೆ ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿವೆ. ಅವನು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 

ಕುಟುಂಬ ಸದಸ್ಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಬಂದಾಗ ಫೈರೋಜ್ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು, ಕೂಡಲೇ ಆತನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. 

ಘಟನೆಯ ಸುದ್ದಿ ಹರಡುತ್ತಿದ್ದಂತೆ, ಸಬ್-ಅರ್ಬನ್ ಪೊಲೀಸ್ ಠಾಣೆಯ ಹೊರಗೆ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಜಮಾಯಿಸಿ, ಆರೋಪಿಗಳಿಗೆ ತ್ವರಿತ ಕ್ರಮ ಮತ್ತು ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. 

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ. 

ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...