Homeಅಂತರಾಷ್ಟ್ರೀಯಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. 

ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್ ಜಲಸಂಧಿಯನ್ನು ಪ್ರವೇಶಿಸುವ ಅಥವಾ ಅಲ್ಲಿಂದ ಹೊರಹೋಗುವ ಎಲ್ಲಾ ಹಡಗುಗಳನ್ನು ತಡೆಯಲು ಅಮೆರಿಕ ನೌಕಾಪಡೆಗೆ ಸೂಚಿಸಿದ್ದಾರೆ. ಈ ದಿಗ್ಬಂಧನವು ಇರಾನ್‌ನ ಬಂದರುಗಳಿಗೆ ಹೋಗುವ ಅಥವಾ ಅಲ್ಲಿಂದ ಬರುವ ಹಡಗುಗಳಿಗೆ ಅನ್ವಯಿಸುತ್ತದೆ.

ಇರಾನ್‌ಗೆ ‘ಕಾನೂನುಬಾಹಿರ ಸುಂಕ’ ಪಾವತಿಸಿ ಪ್ರಯಾಣಿಸುವ ಯಾವುದೇ ಹಡಗುಗಳಿಗೆ ಸುರಕ್ಷಿತ ಮಾರ್ಗ ನೀಡುವುದಿಲ್ಲ ಎಂದು ಅಮೆರಿಕ ಘೋಷಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಇಂತಹ ಹಡಗುಗಳನ್ನು ತಡೆಹಿಡಿಯಲು ನೌಕಾಪಡೆಗೆ ಆದೇಶಿಸಲಾಗಿದೆ.

ಅಮೆರಿಕದ ಈ ನಡೆಯನ್ನು ಇರಾನ್ ತೀವ್ರವಾಗಿ ಖಂಡಿಸಿದೆ. ಹಾರ್ಮುಝ್ ಜಲಸಂಧಿಯತ್ತ ಬರುವ ಯಾವುದೇ ಮಿಲಿಟರಿ ಹಡಗುಗಳನ್ನು ಕದನ ವಿರಾಮದ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಅವುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಎಚ್ಚರಿಸಿದೆ.

ಜಲಸಂಧಿಯ ನೀರಿನಾಳದಲ್ಲಿ ಇರಾನ್ ಅಳವಡಿಸಿರುವ ಸ್ಪೋಟಕಗಳನ್ನು ನಾಶಪಡಿಸುವ ಪ್ರಕ್ರಿಯೆಯನ್ನು ಅಮೆರಿಕದ ನೌಕಾಪಡೆ ಆರಂಭಿಸಿದೆ. ಎರಡು ಅಮೆರಿಕನ್ ಯುದ್ಧನೌಕೆಗಳು ಈಗಾಗಲೇ ಜಲಸಂಧಿಯನ್ನು ದಾಟಿ ತೆರವು ಕಾರ್ಯದಲ್ಲಿ ತೊಡಗಿವೆ ಎಂದು ವರದಿಯಾಗಿದೆ.

ಐಆರ್‌ಜಿಸಿ ಹಾರ್ಮುಝ್ ಜಲಸಂಧಿಯು ತನ್ನ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಘೋಷಿಸಿದೆ. ಶತ್ರು ನೌಕೆಗಳು ಯಾವುದೇ ‘ತಪ್ಪು ಹೆಜ್ಜೆ’ ಇಟ್ಟರೆ ಅವುಗಳನ್ನು ಮರಣ ಸುಳಿಯೊಳಗೆ ಸಿಲುಕಿಸುವುದಾಗಿ ಎಚ್ಚರಿಸಿದೆ.

ಜಲಸಂಧಿಯತ್ತ ಬರುವ ಅಮೆರಿಕದ ಯಾವುದೇ ಮಿಲಿಟರಿ ಹಡಗುಗಳನ್ನು ಏಪ್ರಿಲ್ 22ರವರೆಗೆ ಜಾರಿಯಲ್ಲಿರುವ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಅವುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಜಲಸಂಧಿಯು ಕೇವಲ ನಾಗರಿಕ ಮತ್ತು ವಾಣಿಜ್ಯ ಹಡಗುಗಳ ಸಂಚಾರಕ್ಕೆ ಮಾತ್ರ ಮುಕ್ತವಾಗಿದೆ, ಆದರೆ ಅವುಗಳು ಇರಾನ್‌ನ ನಿಯಮಗಳಿಗೆ ಒಳಪಟ್ಟಿರಬೇಕು ಎಂದು ಸ್ಪಷ್ಟಪಡಿಸಿದೆ.

ಇರಾನ್‌ನ ಸಂಸತ್ತಿನ ಉಪ ಸಭಾಪತಿ ಹಾಜಿ ಬಾಬಾಯಿ ಅವರು ಹಾರ್ಮುಝ್ ಜಲಸಂಧಿಯನ್ನು ಬಳಸುವ ಹಡಗುಗಳು ಇರಾನ್‌ನ ಕರೆನ್ಸಿಯಾದ ರಿಯಾಲ್’ನಲ್ಲಿ ಸುಂಕ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಮೆರಿಕದ ನೌಕಾಪಡೆ ಈಗಾಗಲೇ ಜಲಸಂಧಿಯನ್ನು ದಾಟಿ ಸ್ಪೋಟಕ ತೆರವು ಕಾರ್ಯಾಚರಣೆ ಆರಂಭಿಸಿದೆ ಎಂಬ ವರದಿಗಳನ್ನು ಇರಾನ್ ಸುಳ್ಳು ಎಂದು ತಳ್ಳಿಹಾಕಿದೆ.

ಇರಾನ್ ಸಂಸತ್ತಿನ ಸಭಾಪತಿ ಮೊಹಮ್ಮದ್ ಬಾಘರ್ ಘಾಲಿಬಾಫ್ ಅವರು ಅಮೆರಿಕದ ದಿಗ್ಬಂಧನದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿವೆ ಮತ್ತು ಅಮೆರಿಕದ ಜನರೇ ಇದರ ಬಿಸಿ ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ವಿಶ್ವದ ಸುಮಾರು ಶೇ. 20ರಷ್ಟು ತೈಲ ಸಾಗಣೆಯಾಗುವ ಈ ಮಾರ್ಗದಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಬೆಲೆ ಏರಿಕೆಯಾಗುವ ಮತ್ತು ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ.

ಇಸ್ಲಾಮಾಬಾದ್‌ನಲ್ಲಿ ಸುಮಾರು 21 ಗಂಟೆಗಳ ಕಾಲ ನಡೆದ ಶಾಂತಿ ಮಾತುಕತೆ ವಿಫಲವಾಗಲು, ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ತ್ಯಜಿಸಲು ಒಪ್ಪದಿದ್ದದ್ದು ಮತ್ತು ಹಾರ್ಮುಝ್ ಜಲಸಂಧಿಯ ಮೇಲಿನ ನಿಯಂತ್ರಣವನ್ನು ಬಿಟ್ಟುಕೊಡಲು ನಿರಾಕರಿಸಿದ್ದೇ ಮುಖ್ಯ ಕಾರಣ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹೇಳಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...