Homeದಲಿತ್ ಫೈಲ್ಸ್ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ :...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

- Advertisement -
- Advertisement -

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು ‘ಗಂಭೀರವಾದ ವಿಷಯ’ ಎಂದು ಕೇರಳದ ಸಾರ್ವಜನಿಕ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಭಾನುವಾರ (ಏ.12) ಹೇಳಿದ್ದಾರೆ. ಈ ಗೈರುಹಾಜರಿಯು ಹಲವು ಸಂಶಯಗಳಿಗೆ ಎಡೆಮಾಡಿಕೊಡುತ್ತದೆ ಎಂದು ಅವರು ತಿಳಿಸಿದ್ದಾರೆ.

ತಿರುವನಂತಪುರಂನಲ್ಲಿರುವ ನಿತಿನ್ ಅವರ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಸಾಮಾನ್ಯ ಸಂದರ್ಭಗಳಲ್ಲಿ ಇಂತಹ ಘಟನೆಗಳು ನಡೆದಾಗ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸಂತಾಪ ಸೂಚಿಸಲು ಒಟ್ಟಾಗಿ ಸೇರುತ್ತಾರೆ. ಆದರೆ, ಇಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿಯೂ ಬರದಿರುವುದು ಆಶ್ಚರ್ಯಕರ” ಎಂದಿದ್ದಾರೆ.

ಕಾಲೆಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳು ನಿತಿನ್ ಮನೆಗೆ ಭೇಟಿ ನೀಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂಬ ಮಾಹಿತಿ ನನಗೆ ಲಭಿಸಿದೆ ಎಂದು ಶಿವನ್‌ಕುಟ್ಟಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಇಂಟರ್‌ನಲ್ ಮಾರ್ಕ್ಸ್ ಕಡಿತಗೊಳಿಸುವ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿರುವುದಾಗಿ ಹೇಳಿದ್ದಾರೆ.

ಸಚಿವರು ದುಖಃತಪ್ತ ಕುಟುಂಬದವರನ್ನು ಭೇಟಿ ಮಾಡಿ, ಅವರಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ಕೊಟ್ಟಿದ್ದಾರೆ.

ನಿತಿನ್ ಜಾತಿ ಆಧಾರಿತ ಕಿರುಕುಳ ಅನುಭವಿಸಿದ್ದಾರೆ ಎನ್ನುವ ವರದಿಗಳು ‘ಆಘಾತಕಾರಿ’ ಎಂದಿರುವ ಸಚಿವರು, ಇಂತಹ ತಾರತಮ್ಯಕ್ಕೆ ಆಧುನಿಕ ಕೇರಳದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಈ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸರ್ಕಾರ ನಿತಿನ್ ಸಾವನ್ನು ಅತ್ಯಂತ ಗಂಭೀರ ವಿಷಯವಾಗಿ ಪರಿಗಣಿಸಿದೆ. ನಿತಿನ್ ಕಾಲೇಜಿಗೆ ಸೇರಿದ ದಿನದಿಂದಲೇ ಕಿರುಕುಳ ಅನುಭವಿಸುತ್ತಿದ್ದರು ಎಂದು ಅವರ ತಂದೆ ನಮಗೆ ತಿಳಿಸಿದ್ದಾರೆ. ಇದರಲ್ಲಿ ವಿಭಾಗದ ಮುಖ್ಯಸ್ಥರಿಂದ (ಹೆಚ್‌ಒಡಿ) ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆಯೂ ಸೇರಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ನಿತಿನ್ ತಂದೆ ಕಾಲೇಜು ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಸರಿಯಾಗಿ ಸ್ಪಂದಿಸಿಲ್ಲ ಅಥವಾ ಅವರ ಅಳಲನ್ನು ಕೇಳಿಸಿಕೊಳ್ಳಲು ಕೂಡ ಸಿದ್ಧರಿರಲಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಎಸ್‌ಪಿ ಅವರೊಂದಿಗೆ ಮಾತನಾಡಿದ್ದು, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಈ ತಂಡವು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಾತಿ ಆಧಾರಿತ ನಿಂದನೆ ಸೇರಿದಂತೆ ವಿವಿಧ ಆರೋಪಗಳ ಬಗ್ಗೆ ತನಿಖೆ ನಡೆಸಲಿದೆ ಎಂದಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಿವನ್‌ಕುಟ್ಟಿ ತಿಳಿಸಿದ್ದಾರೆ. ಅಲ್ಲದೆ, ನಿತಿನ್ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಭರವಸೆ ಕೊಟ್ಟಿದ್ದಾರೆ.












 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...