Homeಮುಖಪುಟ"ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ" : ಕೇಜ್ರಿವಾಲ್...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ (ಏ.13) ಕಾಯ್ದಿರಿಸಿದೆ.

ಸೋಮವಾರ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠದ ಮುಂದೆ ಖುದ್ದು ಹಾಜರಾದ ಕೇಜ್ರಿವಾಲ್, ನ್ಯಾಯಮೂರ್ತಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಅಧಿವಕ್ತ ಪರಿಷತ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ತಾರತಮ್ಯದ ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನ್ಯಾಯಮೂರ್ತಿಗಳ ನಡೆಯನ್ನು ಸಮರ್ಥಿಸಿಕೊಂಡರು. ಆ ಕಾರ್ಯಕ್ರಮವನ್ನು “ಬಾರ್ ಅಸೋಸಿಯೇಷನ್” ಆಯೋಜಿಸಿತ್ತು ಮತ್ತು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳ ಹಾಲಿ ನ್ಯಾಯಮೂರ್ತಿಗಳೂ ಅದರಲ್ಲಿ ಪಾಲ್ಗೊಂಡಿದ್ದರು, ಆದ್ದರಿಂದ ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ವಾದಿಸಿದ್ದಾರೆ.

ವಿಚಾರಣಾ ನ್ಯಾಯಾಲಯ ಮೂರು ತಿಂಗಳ ಸುದೀರ್ಘ ವಿಚಾರಣೆಯ ನಂತರ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ಕೇವಲ ಐದು ನಿಮಿಷಗಳ ವಿಚಾರಣೆಯಲ್ಲಿ ತಪ್ಪೆಂದು ಘೋಷಿಸಿದೆ. ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ ಎಂದು ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಹೇಳಿದ್ದಾರೆ ಮತ್ತು ನ್ಯಾಯಾಲಯ ಪಕ್ಷಪಾತ ಮಾಡುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. “ನನಗೆ ಇಲ್ಲಿ ನ್ಯಾಯ ಸಿಗುತ್ತದೆಯೇ ಎಂಬ ಬಗ್ಗೆ ಗಂಭೀರ ಅನುಮಾನಗಳು ಮತ್ತು ಆತಂಕಗಳು ಶುರುವಾಗಿವೆ” ಎಂದಿದ್ದಾರೆ. ಅಷ್ಟೇ ಅಲ್ಲದೆ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳು ಸೇರಿದಂತೆ ಐದು ವಿಷಯಗಳಲ್ಲಿ ನ್ಯಾಯಮೂರ್ತಿಗಳು ನೀಡಿದ ಆದೇಶಗಳು ಬಹುತೇಕ ಅಂತಿಮ ತೀರ್ಪು ನೀಡಿದಂತೆಯೇ ಇವೆ ಎಂದು ಕೇಜ್ರಿವಾಲ್ ಪರ ವಕೀಲರು ವಾದ ಮಂಡಿಸಿದ್ದಾರೆ.

ಕಳೆದ ವಿಚಾರಣೆಯ ಸಮಯದಲ್ಲಿ, ಕೇಜ್ರಿವಾಲ್ ಅವರು ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ (recusal) ಅರ್ಜಿಯ ಬಗ್ಗೆ ವೈಯಕ್ತಿಕವಾಗಿ ವಾದ ಮಂಡಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಜ್ರಿವಾಲ್ ವೈಯಕ್ತಿಕವಾಗಿ ವಾದ ಮಂಡಿಸಲು ಬಯಸಿದರೆ ಮೊದಲು ತಮ್ಮ ಪರ ವಕೀಲರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಹೇಳಿದ್ದರು. ಈ ನ್ಯಾಯಾಲಯ ನಿಮ್ಮ ಅತಿರಂಜಿತ ನಾಟಕೀಯ ಪ್ರದರ್ಶನಗಳಿಗೆ ವೇದಿಕೆಯಲ್ಲ ಎಂದು ಮಾರ್ಮಿಕವಾಗಿ ಟೀಕಿಸಿದ್ದರು.

ಕಳೆದ ವಿಚಾರಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಐವರು ಆರೋಪಿಗಳು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರಮುಖ ಕಾರಣವಾಗಿ ಅವರು ‘ಅಖಿಲ ಭಾರತೀಯ ಅಧಿವಕ್ತ ಪರಿಷತ್’ (ಎಬಿಎಪಿ) ನೊಂದಿಗೆ ನ್ಯಾಯಮೂರ್ತಿಗಳು ಹೊಂದಿದ್ದಾರೆನ್ನಲಾದ ಸೌಹಾರ್ದಯುತ ಸಂಬಂಧ ಮತ್ತು ವೈಚಾರಿಕ ಒಡನಾಟವನ್ನು ಉಲ್ಲೇಖಿಸಿದ್ದರು. ವಕೀಲರ ಸಂಘಟನೆಯಾದ ಎಬಿಎಪಿ, ಆರ್‌ಎಸ್‌ಎಸ್‌ನ ಒಂದು ಅಂಗಸಂಸ್ಥೆ ಎಂದು ಪರಿಗಣಿಸಲ್ಪಟ್ಟಿದೆ. ನ್ಯಾಯಮೂರ್ತಿಗಳು ಈ ಸಂಘಟನೆಯ ಕಾರ್ಯಕ್ರಮಗಳಲ್ಲಿ ಈ ಹಿಂದೆ ಭಾಗವಹಿಸಿರುವುದು ತಮಗೆ ನ್ಯಾಯ ಸಿಗುವ ಬಗ್ಗೆ ‘ಪಕ್ಷಪಾತದ ಆತಂಕ’ ಮೂಡಿಸಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಕೇಜ್ರಿವಾಲ್ ವಾದ ಆಲಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, “ನ್ಯಾಯಾಧೀಶರು ಪ್ರಕರಣದಿಂದ ಹಿಂದೆ ಸರಿಯುವ (Recusal) ಕಾನೂನಿನ ಬಗ್ಗೆ ನಾನು ಸಾಕಷ್ಟು ತಿಳಿದುಕೊಂಡೆ. ನನ್ನ ಜೀವನದಲ್ಲೇ ಮೊದಲ ಬಾರಿಗೆ ಯಾರೋ ಒಬ್ಬರು ನನ್ನನ್ನು ಈ ಕೇಸ್‌ನಿಂದ ಹಿಂದೆ ಸರಿಯಲು ಕೇಳಿಕೊಂಡಿದ್ದಾರೆ. ಇದರಿಂದ ನನಗೆ ಹೊಸ ವಿಷಯಗಳು ತಿಳಿಯಲು ಸಾಧ್ಯವಾಯಿತು. ಈ ಪ್ರಕರಣದಲ್ಲಿ ನಾನು ಒಂದು ಉತ್ತಮ ತೀರ್ಪು ನೀಡುತ್ತೇನೆ ಎಂಬ ಭರವಸೆ ನನಗಿದೆ” ಎಂದು ಹೇಳಿದ್ದಾರೆ. ಆದೇಶ ಕಾಯ್ದಿರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸಿಬಿಐ ಏಪ್ರಿಲ್ 7ರಂದು ಸಲ್ಲಿಸಿದ ತನ್ನ ಅಫಿಡವಿಟ್‌ನಲ್ಲಿ ಕೇಜ್ರಿವಾಲ್ ಅವರ ನ್ಯಾಯಮೂರ್ತಿಗಳ ಹಿಂದೆ ಸರಿಯುವಿಕೆಯ ಕೋರಿಕೆಯನ್ನು ಬಲವಾಗಿ ವಿರೋಧಿಸಿದೆ. “ಕಾನೂನು ವಿಚಾರಗೋಷ್ಠಿಯ ವಿಷಯವು ರಾಜಕೀಯವಾಗಿಲ್ಲದಿದ್ದಾಗ, ಅದರಲ್ಲಿ ಭಾಗವಹಿಸುವುದು ವಿಚಾರಣೆಯಿಂದ ಹಿಂದೆ ಸರಿಯಲು ಎಂದಿಗೂ ಕಾರಣವಾಗಲಾರದು. ಆದ್ದರಿಂದ ಇದು ಯಾವುದೇ ಸದ್ಧಾಂತಿಕ ಸಂಬಂಧವನ್ನು ಪ್ರದರ್ಶಿಸುವುದಿಲ್ಲ” ಎಂದು ಸಿಬಿಐ ಹೇಳಿದೆ. ನ್ಯಾಯಮೂರ್ತಿಗಳ ಮೇಲೆ ಪಕ್ಷಪಾತದ ಆರೋಪ ಹೊರಿಸಲು ಇಂತಹ ನಿರ್ಲಜ್ಜ ಮತ್ತು ವ್ಯಾಪಕವಾದ ಆಕ್ಷೇಪಗಳನ್ನು ಮಾಡುವುದು ನ್ಯಾಯಾಲಯದ ನಿಂದನೆಯಾಗುತ್ತದೆ ಎಂದು ಸಿಬಿಐ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...