Homeಮುಖಪುಟಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

- Advertisement -
- Advertisement -

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ.

ಸ್ಟಾಲಿನ್ ಚುನಾವಣೆ ಪ್ರಚಾರ ನಡೆಸುತ್ತಿರುವ ಧರ್ಮಪುರಿಯಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ. ಬೆಳಿಗ್ಗೆ 11:00 ಗಂಟೆಗೆ ಸಭೆ ಆರಂಭವಾಗಲಿದ್ದು, ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಕುರಿತು ಪಕ್ಷದ ನಿಲುವಿನ ಮೇಲೆ ಚರ್ಚೆಗಳು ಕೇಂದ್ರೀಕರಿಸುವ ನಿರೀಕ್ಷೆಯಿದೆ.

2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ನಂತರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಕ್ರಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು (ಮೂರನೇ ಒಂದು ಭಾಗದಷ್ಟು) ಮೀಸಲಾತಿಯನ್ನು ಜಾರಿಗೆ ತರುವುದರೊಂದಿಗೆ ಸಂಬಂಧ ಹೊಂದಿದೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಟಾಲಿನ್ ಅವರು, ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯು ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆ ತಂದರೆ ಅಥವಾ ದಕ್ಷಿಣದ ರಾಜ್ಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರಿದರೆ ತಮಿಳುನಾಡು ದೊಡ್ಡ ಮಟ್ಟದ ಪ್ರತಿಭಟನೆಯನ್ನು ಪ್ರಾರಂಭಿಸಲಿದೆ ಎಂದು ಎಚ್ಚರಿಸಿದ್ದಾರೆ. ಏಪ್ರಿಲ್ 16 ರಂದು ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಉಲ್ಲೇಖಿಸಿದ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಚುನಾವಣೆಗಳ ನಡುವೆ ಇದನ್ನು ‘ಬಲವಂತವಾಗಿ ಕರೆಯಲಾಗಿದೆ’ ಎಂದು ಹೇಳಿದ್ದಾರೆ.

“ಈ ಅಧಿವೇಶನದಲ್ಲಿ, ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿಯನ್ನು ಬಲವಂತವಾಗಿ ಅಂಗೀಕರಿಸಲು ಉದ್ದೇಶಿಸಿದೆ. ಇದರ ಮೂಲಕ ಕೇಂದ್ರವು ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳ ಮೇಲೆ ತನ್ನ ನಿರ್ಧಾರವನ್ನು ಹೇರಲು ಪ್ರಯತ್ನಿಸುತ್ತಿದೆ” ಎಂದು ಸ್ಟಾಲಿನ್ ತಿಳಿಸಿದ್ದಾರೆ.

“ಕ್ಷೇತ್ರ ಮರುವಿಂಗಡಣೆಯನ್ನು ಜಾರಿಗೆ ತರಲು ಮಾಡುತ್ತಿರುವ ಈ ಆತುರದ ಪ್ರಯತ್ನವು ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ನಡೆಸುತ್ತಿರುವ ಬಹಿರಂಗ ದಾಳಿಯಾಗಿದೆ. ಅದಕ್ಕಿಂತ ಹೆಚ್ಚಾಗಿ, ಇದು ರಾಜ್ಯಗಳ ಹಕ್ಕುಗಳ ಮೇಲೆ ನಡೆಯುತ್ತಿರುವ ನೇರ ದಾಳಿಯಾಗಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

“ನೀವು ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ಇನ್ನು ಮುಂದೆ ನೋಡಲಿದ್ದೀರಿ. 1950 ಮತ್ತು 1960ರ ದಶಕದ ಡಿಎಂಕೆ ಪಕ್ಷದ ಆವೇಶ ಮತ್ತು ಸ್ಫೂರ್ತಿಯನ್ನು ಭಾರತವು ಮತ್ತೊಮ್ಮೆ ಸಾಕ್ಷೀಕರಿಸಲಿದೆ. ಇದನ್ನು ಬೆದರಿಕೆ ಎಂದು ತಪ್ಪಾಗಿ ಭಾವಿಸಬೇಡಿ; ಇದೊಂದು ಎಚ್ಚರಿಕೆ. ನೀವು ಇದನ್ನು ಬೆದರಿಕೆ ಎಂದೇ ವ್ಯಾಖ್ಯಾನಿಸಲು ಬಯಸಿದರೂ ನಮಗೇನೂ ತೊಂದರೆಯಿಲ್ಲ. ಹೌದು, ಇದು ತಮಿಳುನಾಡಿನಿಂದ ನೀಡುತ್ತಿರುವ ಎಚ್ಚರಿಕೆ” ಸ್ಟಾಲಿನ್ ಖಾರವಾಗಿ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...