Homeಅಂತರಾಷ್ಟ್ರೀಯಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

- Advertisement -
- Advertisement -

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ.

ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌) ವರದಿ ಮಾಡಿದೆ.

ಇದುವರೆಗೆ ಕೇವಲ 9 ಜನರನ್ನು ಮಾತ್ರ ರಕ್ಷಿಸಲಾಗಿದೆ. ಇವರನ್ನು ಏಪ್ರಿಲ್ 9, 2026ರಂದು ಅಂಡಮಾನ್ ದ್ವೀಪಗಳ ಸಮೀಪ ಸಂಚರಿಸುತ್ತಿದ್ದ ಬಾಂಗ್ಲಾದೇಶದ ಧ್ವಜ ಹೊಂದಿದ್ದ ಹಡಗು ರಕ್ಷಿಸಿದೆ ಎಂದು ವರದಿಗಳು ಹೇಳಿವೆ.

ಅತಿಯಾದ ಜನದಟ್ಟಣೆ (Overcrowding), ಬಲವಾದ ಗಾಳಿ ಮತ್ತು ಸಮುದ್ರದ ಅಲೆಗಳ ಅಬ್ಬರದಿಂದಾಗಿ ದೋಣಿ ಮುಳುಗಿದೆ. ಉತ್ತಮ ಜೀವನದ ಹುಡುಕಾಟದಲ್ಲಿ ಮತ್ತು ಶಿಬಿರಗಳ ಕಷ್ಟಕರ ಜೀವನದಿಂದ ತಪ್ಪಿಸಿಕೊಳ್ಳಲು ನಿರಾಶ್ರಿತರು ಮಲೇಷ್ಯಾಗೆ ಅಕ್ರಮವಾಗಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗ್ತಿದೆ.

ದೋಣಿಯು ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಹೊರಟು ಮಲೇಷ್ಯಾ ಕಡೆಗೆ ತೆರಳುತ್ತಿತ್ತು ಎಂದು ವರದಿಯಾಗಿದೆ.

ದೋಣಿಯಲ್ಲಿದ್ದ ಉಳಿದ 240ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರು ಮೃತಪಟ್ಟಿರುವ ಆತಂಕ ವ್ಯಕ್ತವಾಗಿದೆ. ಈ ಘಟನೆಯು ರೋಹಿಂಗ್ಯಾ ನಿರಾಶ್ರಿತರು ಎದುರಿಸುತ್ತಿರುವ ಅಪಾಯಕಾರಿ ಪರಿಸ್ಥಿತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ಮ್ಯಾನ್ಮಾರ್‌ನಲ್ಲಿ ದೀರ್ಘಕಾಲದವರೆಗೆ ಕಿರುಕುಳಕ್ಕೊಳಗಾದ ಸುಮಾರು 7,30,000ಕ್ಕೂ ಹೆಚ್ಚು ರೋಹಿಂಗ್ಯಾಗಳು, 2017ರಲ್ಲಿ ಅಲ್ಲಿನ ಮಿಲಿಟರಿ ನಡೆಸಿದ ಜನಾಂಗೀಯ ಹತ್ಯಾಕಾಂಡದಿಂದ ತಪ್ಪಿಸಿಕೊಂಡು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ಹೀಗೆ ಪ್ರಾಣಭಯದಿಂದ ಓಡಿಬಂದ ಅವರು ನೆರೆಯ ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದರು.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ದಮನ ಮತ್ತು ಅಂತರ್ಯುದ್ಧ ಹಾಗೂ ಬಾಂಗ್ಲಾದೇಶದ ಕಿಕ್ಕಿರಿದ ಶಿಬಿರಗಳಿಂದ ಪಾರಾಗಲು ಸಾವಿರಾರು ರೋಹಿಂಗ್ಯಾಗಳು ಪ್ರತಿ ವರ್ಷ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಉತ್ತಮ ಜೀವನದ ನಿರೀಕ್ಷೆಯಲ್ಲಿ ನೆರೆಯ ದೇಶಗಳನ್ನು ತಲುಪಲು ಅವರು ಹೆಚ್ಚಾಗಿ ಸುಧಾರಿತ ಅಥವಾ ತಾತ್ಕಾಲಿಕ ದೋಣಿಗಳ ಮೂಲಕ ಅಪಾಯಕಾರಿ ಸಮುದ್ರಯಾನ ಕೈಗೊಳ್ಳುತ್ತಾರೆ.

ಏಪ್ರಿಲ್ 9ರಂದು ಇಂಡೋನೇಷ್ಯಾಕ್ಕೆ ತೆರಳುತ್ತಿದ್ದ ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ಹಡಗು ಮಗುಚಿ ಬಿದ್ದ ದೋಣಿಯಿಂದ ಒಂಬತ್ತು ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬಾಂಗ್ಲಾದೇಶ ಕರಾವಳಿ ಕಾವಲು ಪಡೆಯ ವಕ್ತಾರರಾದ ಲೆಫ್ಟಿನೆಂಟ್ ಕಮಾಂಡರ್ ಸಬ್ಬೀರ್ ಆಲಂ ಸುಜನ್ ಮಾತನಾಡಿ, “ತಮ್ಮ ಹಡಗು ಸಮುದ್ರದ ಆಳವಾದ ನೀರಿನಲ್ಲಿ ಡ್ರಮ್‌ಗಳು ಮತ್ತು ಮರದ ದಿಮ್ಮಿಗಳ ಸಹಾಯದಿಂದ ತೇಲುತ್ತಿದ್ದ ಹಲವಾರು ಜನರನ್ನು ಗುರುತಿಸಿ ಅವರನ್ನು ರಕ್ಷಿಸಿದೆ” ಎಂದು ತಿಳಿಸಿದ್ದಾರೆ.

ಟರ್ಕಿಯ ಅನಡೋಲು ಸುದ್ದಿ ಸಂಸ್ಥೆಯ ಪ್ರಕಾರ, ರಕ್ಷಿಸಲಾದ ಒಂಬತ್ತು ಜನರಲ್ಲಿ ಆರು ಮಂದಿ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರ ಪ್ರಕಾರ, ಅವರನ್ನು ಬಂಧಿಸಲಾಗಿದೆ.

ಬದುಕುಳಿದವರಲ್ಲಿ ಒಬ್ಬರಾದ ರಫೀಕುಲ್ ಇಸ್ಲಾಂ, ಮಲೇಷ್ಯಾದಲ್ಲಿ ಉದ್ಯೋಗದ ಭರವಸೆ ನೀಡಿ ಕಳ್ಳಸಾಗಣೆದಾರರು ತಮ್ಮನ್ನು ದೋಣಿಗೆ ಹತ್ತಿಸಿ ಕರೆದೊಯ್ದಿದ್ದರು ಎಂದು ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನಮ್ಮಲ್ಲಿ ಅನೇಕರನ್ನು ಟ್ರಾಲರ್‌ನ (ದೋಣಿಯ) ಕೆಳಭಾಗದ ಸಣ್ಣ ಕೋಣೆಯಲ್ಲಿ ಇರಿಸಲಾಗಿತ್ತು; ಅಲ್ಲಿಯೇ ಕೆಲವರು ಮೃತಪಟ್ಟರು. ಟ್ರಾಲರ್‌ನಿಂದ ಸೋರಿಕೆಯಾದ ಎಣ್ಣೆಯಿಂದ ನನ್ನ ಮೈ ಸುಟ್ಟುಹೋಯಿತು,” ಎಂದು ರಫೀಕುಲ್ ಇಸ್ಲಾಂ ವಿವರಿಸಿದ್ದಾರೆ. ದೋಣಿ ಮುಳುಗಡೆಯಾಗುವ ಮೊದಲು ನಾಲ್ಕು ದಿನಗಳ ಕಾಲ ಪ್ರಯಾಣಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

“ಬಾಂಗ್ಲಾದೇಶದ ನೌಕೆಯು ನಮ್ಮನ್ನು ಆಳವಾದ ನೀರಿನಿಂದ ರಕ್ಷಿಸುವ ಮೊದಲು ನಾವು ಸುಮಾರು 36 ಗಂಟೆಗಳ ಕಾಲ ಸಮುದ್ರದಲ್ಲಿ ತೇಲುತ್ತಿದ್ದೆವು” ಎಂದು ರಫೀಕುಲ್ ಇಸ್ಲಾಂ ತಿಳಿಸಿದ್ದಾರೆ. ಅಲ್ಲದೆ, ಈ ಸಮುದ್ರಯಾನದ ಸಮಯದಲ್ಲಿ ಉಸಿರುಗಟ್ಟುವಿಕೆ ಮತ್ತು ಅತಿಯಾದ ಜನದಟ್ಟಣೆಯಿಂದಾಗಿ 25ರಿಂದ 30 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಂಡಮಾನ್ ಸಮುದ್ರವು ಮ್ಯಾನ್ಮಾರ್, ಥೈಲ್ಯಾಂಡ್ ಮತ್ತು ಮಲಯ ಪರ್ಯಾಯ ದ್ವೀಪದ ಪಶ್ಚಿಮ ತೀರಗಳಲ್ಲಿ ವ್ಯಾಪಿಸಿದೆ. ಮಲೇಷ್ಯಾ ರೋಹಿಂಗ್ಯಾಗಳಿಗೆ ನೆಚ್ಚಿನ ತಾಣವಾಗಿದೆ. ಏಕೆಂದರೆ, ಅದು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಗಣನೀಯ ಸಂಖ್ಯೆಯ ರೋಹಿಂಗ್ಯಾ ವಲಸೆಗಾರರನ್ನು ಹೊಂದಿದೆ.

ಕಳೆದ ವರ್ಷ, ಮೇ ತಿಂಗಳಲ್ಲಿ ಮ್ಯಾನ್ಮಾರ್ ಕರಾವಳಿಯಲ್ಲಿ ಸಂಭವಿಸಿದ ಎರಡು ದೋಣಿ ದುರಂತಗಳಲ್ಲಿ 427 ರೋಹಿಂಗ್ಯಾಗಳು ಸಮುದ್ರದಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುಎನ್‌ಹೆಚ್‌ಸಿಆರ್ ಹೇಳಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...