Homeಮುಖಪುಟನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್,...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ. 

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶರ್ಮಾ ಅವರು ವಿಚಾರಣೆ ನಡೆಸಬಾರದು ಎಂದು ಕೇಜ್ರಿವಾಲ್ ಈ ಅಫಿಡವಿಟ್‌ನಲ್ಲಿ ಪುನರುಚ್ಚರಿಸಿದ್ದಾರೆ.

ನ್ಯಯಾಮೂರ್ತಿ ಶರ್ಮಾ ಅವರ ಮಗ ಮತ್ತು ಮಗಳು ಇಬ್ಬರೂ ಕೇಂದ್ರ ಸರ್ಕಾರದ ವಕೀಲರಾಗಿ (Central Government Counsel) ಪಟ್ಟಿಯಲ್ಲಿದ್ದಾರೆ (empanelled) ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ಪರವಾಗಿ ಹಾಜರಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೇ ನ್ಯಾಯಮೂರ್ತಿಗಳ ಮಕ್ಕಳಿಗೆ ಕೆಲಸಗಳನ್ನು ಹಂಚಿಕೆ ಮಾಡುತ್ತಾರೆ. ಇದು ನೇರ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನ್ಯಾಯಮೂರ್ತಿ ಶರ್ಮಾ ಅವರ ಮಕ್ಕಳನ್ನು ಕೇಂದ್ರ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ತೋರಿಸುವ ದಾಖಲೆಗಳು ತನಗೆ ದೊರೆತಿವೆ. ಅವರ ಮಗ ಸುಪ್ರೀಂ ಕೋರ್ಟ್‌ನ ಗ್ರೂಪ್ ಎ ಪ್ಯಾನಲ್ ಕೌನ್ಸಿಲ್ ಆಗಿದ್ದರೆ, ಅವರ ಮಗಳು ಗ್ರೂಪ್ ಸಿ ಪ್ಯಾನಲ್ ಕೌನ್ಸಿಲ್ ಆಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಕಾನೂನು ವರದಿಗಾರ ಸೌರವ್ ದಾಸ್ ಅವರು ಬಹಿರಂಗಗೊಳಿಸಿರುವ ದಾಖಲೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪದೇ ಪದೇ ಕೇಳಲಾಗುವ ಪ್ರಶ್ನೆಗಳ (ಎಫ್‌ಎಕ್ಯೂ) ಉತ್ತರಗಳನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಅದು, “ಸುಪ್ರೀಂ ಕೋರ್ಟ್‌ನಲ್ಲಿ, ಭಾರತದ ಗೌರವಾನ್ವಿತ ಅಟಾರ್ನಿ ಜನರಲ್ ಅವರು ತಾವು ಹಾಜರಾಗಬೇಕಾದ ಪ್ರಕರಣಗಳನ್ನು ತಾವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಉಳಿದ ಪ್ರಕರಣಗಳನ್ನು ಭಾರತದ ಗೌರವಾನ್ವಿತ ಸಾಲಿಸಿಟರ್ ಜನರಲ್ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಿಗೆ ಮತ್ತು ಪ್ಯಾನಲ್ ಕೌನ್ಸಿಲ್‌ಗಳಿಗೆ ಹಂಚಿಕೆ ಮಾಡುತ್ತಾರೆ” ಎಂದು ಹೇಳಿದೆ ಎಂದಿದ್ದಾರೆ.

“ಯಾವ ಕಾನೂನು ಅಧಿಕಾರಿ ಮತ್ತು ಕಾನೂನು ವ್ಯವಸ್ಥೆಯು ಈ ಗೌರವಾನ್ವಿತ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ಪರವಾಗಿ ಪ್ರತಿನಿಧಿಸುತ್ತಿದೆಯೋ, ಅದೇ ವ್ಯವಸ್ಥೆಯು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಗೌರವಾನ್ವಿತ ನ್ಯಾಯಾಧೀಶರ ಹತ್ತಿರದ ಕುಟುಂಬ ಸದಸ್ಯರಿಗೆ ಕೇಂದ್ರ ಸರ್ಕಾರದ ಪ್ರಕರಣಗಳನ್ನು ಮತ್ತು ಸರ್ಕಾರಿ ಕೆಲಸಗಳನ್ನು ಹಂಚಿಕೆ ಮಾಡುವ ಸಾಂಸ್ಥಿಕ ಕಾರ್ಯವಿಧಾನದ ಭಾಗವಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಿಬಿಐ ಪರವಾಗಿ ಹಾಜರಾಗಿ ತಮ್ಮ ಬಿಡುಗಡೆಯನ್ನು ವಿರೋಧಿಸುತ್ತಿರುವ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕ್ರಮವು, ನ್ಯಾಯಮೂರ್ತಿ ಶರ್ಮಾ ಅವರ ಮುಂದೆ ನೇರ ಮತ್ತು ಗಂಭೀರವಾದ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ಅವರು ವಿಚಾರಣೆಯ ಮೊದಲ ದಿನದಂದೇ ಈ ಸಂಬಂಧದ ಬಗ್ಗೆ ಬಹಿರಂಗಪಡಿಸಬೇಕಿತ್ತು ಎಂದು ಅವರು ವಾದಿಸಿದ್ದಾರೆ.

ಸಾಲಿಸಿಟರ್ ಜನರಲ್ ಮೂಲಕ ಮಕ್ಕಳಿಗೆ ವೃತ್ತಿಪರ ಕೆಲಸ ಸಿಗುತ್ತಿರುವುದರಿಂದ, ನ್ಯಾಯಮೂರ್ತಿಗಳು ನಿಷ್ಪಕ್ಷಪಾತವಾಗಿ ತೀರ್ಪು ನೀಡಲು ಸಾಧ್ಯವಿಲ್ಲ ಎಂಬ ‘ಸಮಂಜಸವಾದ ಆತಂಕ’ (Reasonable apprehension of bias) ಉಂಟಾಗಿದೆ ಎಂದು ಕೇಜ್ರಿವಾಲ್ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಆರ್‌ಟಿಐ ಮೂಲಕ ದೊರೆತ ದಾಖಲೆಗಳು ಮತ್ತು ಸರ್ಕಾರಿ ಅಧಿಸೂಚನೆಗಳ ಆಧಾರದ ಮೇಲೆ ಈ ಅಂಶಗಳನ್ನು ಕೇಜ್ರಿವಾಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ಹೊಸ ವಿಚಾರಗಳ ಬಗ್ಗೆ ವಾದ ಮಂಡಿಸಲು ತಮಗೆ ಹೆಚ್ಚಿನ ಸಮಯ ನೀಡಬೇಕು ಮತ್ತು ನ್ಯಾಯಮೂರ್ತಿಗಳು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಹಿಂದೆ ಏಪ್ರಿಲ್ 13ರಂದು ನಡೆದ ವಿಚಾರಣೆಯಲ್ಲಿ ಕೇಜ್ರಿವಾಲ್ ಸ್ವತಃ ಹಾಜರಾಗಿ ನ್ಯಾಯಮೂರ್ತಿಗಳು ಆರ್‌ಎಸ್‌ಎಸ್ ಸಂಯೋಜಿತ ಅಧಿವಕ್ತ ಪರಿಷತ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದನ್ನು ಪ್ರಶ್ನಿಸಿ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದರು. ನ್ಯಾಯಮೂರ್ತಿಗಳು ಸದ್ಯ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...