Homeಕರ್ನಾಟಕಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

- Advertisement -
- Advertisement -

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಏ.15) ಘೋಷಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್‌ ಗಜಾನನ್‌ ಭಟ್‌ ಅವರು ತೀರ್ಪು ಪ್ರಕಟಿಸಿದ್ದಾರೆ. ಇಬ್ಬರು ಮಾಫಿ ಸಾಕ್ಷಿಗಳನ್ನು ಬಿಟ್ಟು ಉಳಿದವರ ತೀರ್ಪು ಇಂದು ಪ್ರಕಟವಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ತೀರ್ಪು ಪ್ರಕಟವಾದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿನಯ್ ಕುಲಕರ್ಣಿ ಅವರ ಧಾರವಾಡದಲ್ಲಿರುವ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಹಾಗೆಯೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಪ್ರಕರಣದ ಹಿನ್ನೆಲೆ : ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.

ಈ ಪ್ರಕರಣದ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿ ಈ ಕೊಲೆಯಲ್ಲಿ ವಿನಯ್ ಕುಲಕರ್ಣಿ ಪಾತ್ರವಿದೆ ಎಂದು ದೂರಿದ್ದರು. ಹಾಗೆಯೇ ತನ್ನನ್ನೂ ಕೊಲೆ ಮಾಡಲು ವಿನಯ್ ಸಂಚು ರೂಪಿಸುತ್ತಿದ್ದಾರೆ ಎಂದಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 20 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಯೋಗೀಶ್ ಗೌಡ ಅವರನ್ನು ಕೊಲೆ ಮಾಡಿಸಿದ ಆರೋಪ ಮಾಡಲಾಗಿತ್ತು.

ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ, ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಸಿಬಿಐ ಆರೋಪಿಸಿದೆ. ವಿನಯ್ ಕುಲಕರ್ಣಿ ಅವರನ್ನು ಈ ಕೊಲೆಯ ಮುಖ್ಯ ಸಂಚುಗಾರ ಎಂದು ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರು 2020ರಲ್ಲಿ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದರು. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಪ್ರಕ್ರಿಯೆಯ ನಂತರ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...