Homeಅಂತರಾಷ್ಟ್ರೀಯರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

- Advertisement -
- Advertisement -

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15) ತಿಳಿಸಿದ್ದಾರೆ.

ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದರಿಂದ ಅಮೆರಿಕದ ನಿರ್ಬಂಧಗಳಿಗೆ ಗುರಿಯಾಗದಂತೆ ಈ ವಿನಾಯಿತಿಗಳು ರಕ್ಷಣೆ ನೀಡುತ್ತಿದ್ದವು. ಆದರೆ, ಅಮೆರಿಕ ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಮುಂಬರುವ ದಿನಗಳಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಅಮೆರಿಕದ ಆರ್ಥಿಕ ನಿರ್ಬಂಧಗಳು ಅನ್ವಯವಾಗುವ ಸಾಧ್ಯತೆ ಇದೆ.

ವಿನಾಯಿತಿಗಳು ಮಾರ್ಚ್ 11ಕ್ಕಿಂತ ಮೊದಲು ‘ಸಾಗಣೆಯಲ್ಲಿದ್ದ (on water)’ ತೈಲಕ್ಕೆ ಮಾತ್ರ ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಅಂತಹ ಎಲ್ಲಾ ವಿನಾಯಿತಿಗಳನ್ನು ಈಗಾಗಲೇ ಬಳಸಿಕೊಳ್ಳಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದ ಸಂಘರ್ಷದ ನಡುವೆ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕವು ಮಾರ್ಚ್ 5ರಂದು ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳಿಗೆ 30 ದಿನಗಳ ವಿನಾಯಿತಿಯನ್ನು ನೀಡಿತ್ತು. ಆ ಸಮಯದಲ್ಲಿ ಅಮೆರಿಕದ ಖಜಾನೆ ಕಾರ್ಯದರ್ಶಿಯವರು ಈ ಕ್ರಮವನ್ನು ಜಾಗತಿಕ ತೈಲ ಪೂರೈಕೆಯನ್ನು ಸ್ಥಿರವಾಗಿಡಲು ಕೈಗೊಂಡ ಅಲ್ಪಾವಧಿಯ ಕ್ರಮ ಎಂದು ಬಣ್ಣಿಸಿದ್ದರು. ಅಲ್ಲದೆ, ಈ ನಿರ್ಧಾರದಿಂದ ರಷ್ಯಾಕ್ಕೆ ಯಾವುದೇ ‘ಗಮನಾರ್ಹ ಆರ್ಥಿಕ ಲಾಭ’ ಸಿಗುವುದಿಲ್ಲ ಎಂದು ಪ್ರತಿಪಾದಿಸಿದ್ದರು.

NDTV ವರದಿ ಪ್ರಕಾರ, ಈ ವಿನಾಯಿತಿಯಿಂದಾಗಿ ಜಾಗತಿಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ ಸಹ, ಭಾರತವು ರಷ್ಯಾದಿಂದ ಹೆಚ್ಚಿನ ಪ್ರಮಾಣದ ತೈಲವನ್ನು ಪಡೆಯಲು ಸಾಧ್ಯವಾಗಿದೆ. ಈ ಸಡಿಲಿಕೆಯ ಅವಧಿಯಲ್ಲಿ ಭಾರತೀಯ ತೈಲ ಶುದ್ಧೀಕರಣ ಸಂಸ್ಥೆಗಳು ಸುಮಾರು 3 ಕೋಟಿ (30 ಮಿಲಿಯನ್) ಬ್ಯಾರೆಲ್ ತೈಲಕ್ಕೆ ಆರ್ಡರ್ ನೀಡಿವೆ ಎಂದು ತಿಳಿದುಬಂದಿದೆ.

ಭಾರತಕ್ಕೆ ವಿನಾಯಿತಿ ನೀಡಿದ ಒಂದು ವಾರದ ನಂತರ, ಮಾರ್ಚ್ 11ಕ್ಕಿಂತ ಮೊದಲು ಸಾಗಣೆಗೆ ಸಿದ್ಧವಾಗಿದ್ದ ರಷ್ಯಾದ ಕಚ್ಚಾ ತೈಲಕ್ಕಾಗಿ ಅಮೆರಿಕ ಇತರ ರಾಷ್ಟ್ರಗಳಿಗೂ ಇದೇ ರೀತಿಯ 30 ದಿನಗಳ ಪರವಾನಗಿಯನ್ನು ವಿಸ್ತರಿಸಿತ್ತು. ಆ ವಿನಾಯಿತಿಯ ಅವಧಿಯು ಏಪ್ರಿಲ್ 11 ರಂದು ಮುಕ್ತಾಯಗೊಂಡಿದೆ.

ಮಾರ್ಚ್ 20ಕ್ಕಿಂತ ಮೊದಲು ಹಡಗುಗಳಿಗೆ ಲೋಡ್ ಮಾಡಲಾದ ಇರಾನ್ ಮೂಲದ ತೈಲ ಸಾಗಣೆಗೆ ನೀಡಲಾಗಿದ್ದ ಇಂತಹದ್ದೇ ವಿನಾಯಿತಿಯು ಈ ಭಾನುವಾರ ಮುಕ್ತಾಯಗೊಳ್ಳಲಿದೆ.

ಮಾರ್ಚ್ ತಿಂಗಳಿನಲ್ಲಿ ಇರಾನ್ ಸಂಬಂಧಿತ ಅಡೆತಡೆಗಳಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಉಂಟಾಗಿದ್ದ ಒತ್ತಡವನ್ನು ಕಡಿಮೆ ಮಾಡಲು ಈ ವಿನಾಯಿತಿಗಳನ್ನು ತಾತ್ಕಾಲಿಕ ಕ್ರಮವಾಗಿ ಜಾರಿಗೆ ತರಲಾಗಿತ್ತು. ನಿರ್ದಿಷ್ಟ ಗಡುವಿನ ಮೊದಲು ಈಗಾಗಲೇ ಹಡಗುಗಳಿಗೆ ಲೋಡ್ ಮಾಡಲಾದ ತೈಲವನ್ನು ಖರೀದಿಸಲು ಈ ಕ್ರಮವು ಅವಕಾಶ ಮಾಡಿಕೊಟ್ಟಿತ್ತು.

ಭಾರತವು ತೈಲ ಮತ್ತು ಅನಿಲದ ನಿವ್ವಳ ಆಮದುದಾರ ರಾಷ್ಟ್ರವಾಗಿದ್ದು, ತನ್ನ ಇಂಧನ ಅಗತ್ಯತೆಗಳ ಸುಮಾರು ಶೇಕಡಾ 80 ರಿಂದ 85 ರಷ್ಟನ್ನು ಆಮದಿನ ಮೂಲಕವೇ ಪೂರೈಸಿಕೊಳ್ಳುತ್ತಿದೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಇರಾನ್ ದೇಶವು ಬಹುತೇಕ ವಾಣಿಜ್ಯ ಹಡಗು ಸಂಚಾರಕ್ಕೆ ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಿರಿದಾದ ಜಲಮಾರ್ಗವು ಪರ್ಷಿಯನ್ ಕೊಲ್ಲಿಯನ್ನು ಅರಬ್ಬಿ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಜಾಗತಿಕ ಪೆಟ್ರೋಲಿಯಂ ಪೂರೈಕೆಯ ಸುಮಾರು 20% ರಷ್ಟು ಭಾಗವು ಈ ಸಮುದ್ರ ಮಾರ್ಗದ ಮೂಲಕವೇ ಹಾದುಹೋಗುತ್ತದೆ.

ಬುಧವಾರದ ಈ ಬೆಳವಣಿಗೆಗಳು, ರಷ್ಯಾದ ಕಚ್ಚಾ ತೈಲವನ್ನು ಭಾರತ ನಿರಂತರವಾಗಿ ಖರೀದಿಸುತ್ತಿರುವ ವಿಚಾರದಲ್ಲಿ ಅಮೆರಿಕ ಮತ್ತು ಭಾರತ ನಡುವೆ ಈ ಹಿಂದೆ ಉಂಟಾಗಿದ್ದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಡೆದಿವೆ.

ಉಕ್ರೇನ್ ಯುದ್ಧದ ಮಧ್ಯೆಯೇ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕಾಗಿ ಟ್ರಂಪ್ ಆಡಳಿತವು ಆಗಸ್ಟ್‌ನಲ್ಲಿ ಭಾರತದ ಮೇಲೆ ದಂಡನಾತ್ಮಕ ಸುಂಕವನ್ನು ವಿಧಿಸಿತ್ತು. ಇದು ಅಮೆರಿಕದ ಒಟ್ಟು ಸುಂಕದ ದರವನ್ನು ಶೇಕಡಾ 50ಕ್ಕೆ ಏರಿಸಿತ್ತು.

ಫೆಬ್ರವರಿ 7ರಂದು, ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕಾಗಿ ಭಾರತದ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ದಂಡನಾತ್ಮಕ ಸುಂಕವನ್ನು ರದ್ದುಗೊಳಿಸಲು ಅಧ್ಯಕ್ಷ ಟ್ರಂಪ್ ಕಾರ್ಯಕಾರಿ ಆದೇಶವನ್ನು ಹೊರಡಿಸಿದರು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಅಂಕಿತ ದೊರೆತಿದ್ದು, ಅಮೆರಿಕಕ್ಕೆ ರಫ್ತಾಗುವ ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕದ ದರವು ಶೇಕಡಾ 18ಕ್ಕೆ ಇಳಿಕೆಯಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...