Homeಮುಖಪುಟನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ (ಏ.16) ನಿರಾಕರಿಸಿದೆ. ಆದರೆ, ಈ ಕುರಿತು ಸಂಬಂಧಪಟ್ಟವರಿಗೆ ಸಮಗ್ರವಾದ ಮನವಿ ಸಲ್ಲಿಸಲು ಅರ್ಜಿದಾರರಿಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಂಚೋಲಿ ಅವರಿದ್ದ ಪೀಠವು ವಿಷಯವನ್ನು ಆಲಿಸಿ, ವಿಶೇಷ ಸಂದರ್ಭಗಳಲ್ಲಿ ಮಧ್ಯಪ್ರವೇಶ ಅಗತ್ಯವಿದ್ದಾಗ ಹೊರತುಪಡಿಸಿ, ನ್ಯಾಯಾಂಗದ ಕಡೆಯಿಂದ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರವಾಗಿ ವಕೀಲ ವಿಷ್ಣುಶಂಕರ್ ಜೈನ್ ವಾದ ಮಂಡಿಸಿದ್ದಾರೆ.

ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಪರಿಗಣಿಸಿ ನೇಮಕಾತಿಗಳನ್ನು ಮಾಡುವಂತೆ ಕೇಂದ್ರ ಸರ್ಕಾರ ಮತ್ತು ಕೊಲಿಜಿಯಂಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದರು. ಈ ನೇಮಕಾತಿಗಾಗಿ ರಾಷ್ಟ್ರಪತಿಗೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದರು.

ಜಿಲ್ಲಾ ನ್ಯಾಯಾಲಯಗಳು, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರಕರಣಗಳನ್ನು ನಡೆಸಲು ನೇಮಕಗೊಳ್ಳುತ್ತಿರುವ ಕಾನೂನು ಅಧಿಕಾರಿಗಳು/ಸ್ಥಾಯಿ ವಕೀಲರು/ಪ್ಯಾನಲ್ ಕೌನ್ಸೆಲ್/ರಾಜ್ಯ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲು ಇದೇ ರೀತಿಯ ನಿರ್ದೇಶನಗಳನ್ನು ಕೋರಲಾಗಿತ್ತು.

ಉನ್ನತ ನ್ಯಾಯಾಂಗ ಸೇವೆಗಳು ಮತ್ತು ಪ್ರಾಂತೀಯ ನ್ಯಾಯಾಂಗ ಸೇವೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದರು. ಪ್ರಾಂತೀಯ ನ್ಯಾಯಾಂಗ ಸೇವೆಗಳಿಂದ ಉನ್ನತ ನ್ಯಾಯಾಂಗ ಸೇವೆಗಳಿಗೆ ಬಡ್ತಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.50ರಷ್ಟು ಕೋಟಾವನ್ನು ನಿಗದಿಪಡಿಸುವಂತೆಯೂ ಮನವಿ ಮಾಡಿದ್ದರು.

ವಿಚಾರಣೆಯ ಸಮಯದಲ್ಲಿ, ಸಿಜೆಐ ಕಾಂತ್ ಅವರು ವಕೀಲ ಜೈನ್ ಅವರಿಗೆ ಅಂತಹ ರಿಟ್ ಅರ್ಜಿಗಳನ್ನು ಸಲ್ಲಿಸಬೇಡಿ ಎಂದು ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. “ನಮ್ಮನ್ನು ಮುಜುಗರಕ್ಕೀಡು ಮಾಡಬೇಡಿ ಮತ್ತು ನಿಮಗಾಗಿ ತೊಡಕುಗಳನ್ನು ಸೃಷ್ಟಿಸಬೇಡಿ” ಎಂಬುವುದಾಗಿ ಹೇಳಿದ್ದಾರೆ ಎಂದಿದೆ. ಕಾನೂನು ಕ್ಷೇತ್ರದಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ, ಆದರೆ ಬದಲಾವಣೆಯು ಒಂದು ದಿನದೊಳಗೆ ಬರುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...