Homeಮುಖಪುಟಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

- Advertisement -
- Advertisement -

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ ಅಡ್ಡಗಾಲು ಹಾಕಿದೆ ಎಂದು ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಆರೋಪಿಸುತ್ತಿವೆ.

ವಾಸ್ತವದಲ್ಲಿ, ದೇಶದ ಸಂಸತ್ತು ಮತ್ತು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಮಸೂದೆ ಸೆಪ್ಟೆಂಬರ್ 2023ರಲ್ಲೇ ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದೊಂದಿಗೆ ಅಂಗೀಕಾರಗೊಂಡಿದೆ. ಅಂದಿನಿಂದ ಇದು ಕಾನೂನಾಗಿ ಮಾರ್ಪಟ್ಟಿದೆ.

ಸೆಪ್ಟೆಂಬರ್ 19, 2023ರಂದು ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಸೆಪ್ಟೆಂಬರ್ 20, 2023ರಂದು ಅದು ಭಾರಿ ಬಹುಮತದೊಂದಿಗೆ (454 ಪರ, 2 ವಿರೋಧ) ಪಾಸಾಯಿತು. ಸೆಪ್ಟೆಂಬರ್ 21, 2023ರಂದು ರಾಜ್ಯಸಭೆಯಲ್ಲೂ ಸರ್ವಾನುಮತದಿಂದ ಅಂಗೀಕಾರಗೊಂಡಿತು. 2023ರ ಸೆಪ್ಟೆಂಬರ್ 28ರಂದು ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದರು. ರಾಷ್ಟ್ರಪತಿಯ ಅಂಕಿತದ ನಂತರ, ಸೆಪ್ಟೆಂಬರ್ 29, 2023ರಂದು ಅಧಿಕೃತ ಗೆಜೆಟ್‌ನಲ್ಲಿ ಇದನ್ನು ಪ್ರಕಟಿಸಲಾಯಿತು.

ಏಪ್ರಿಲ್ 17ರಂದು ಲೋಕಸಭೆಯಲ್ಲಿ ಸೋತಿರುವುದು ಕೇಂದ್ರ ಸರ್ಕಾರ ಮಂಡಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಯಾಗಿದೆ. ಈ ಮಸೂದೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಅಗತ್ಯವಿಲ್ಲ. ಇದು ಕ್ಷೇತ್ರಗಳ ಮರುವಿಂಗಡನೆ ಬೇಕಾಗಿದೆ. ಪ್ರಸ್ತುತ ಇರುವ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ಸಂವಿಧಾನದ 131ನೇ ತಿದ್ದುಪಡಿ ಅಗತ್ಯವಿದೆ. ಹಾಗಾಗಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಮಹಿಳಾ ಮೀಸಲು ಮಸೂದೆ ಅಂಗೀಕಾರಕ್ಕೆ ವಿಪಕ್ಷಗಳು ಅಡ್ಡಿಯಾಗಿವೆ ಎಂದು ಹೇಳುತ್ತಿರುವುದು ಹಸಿ ಸುಳ್ಳಾಗಿದೆ.

ದಕ್ಷಿಣ ಭಾರತಕ್ಕೆ ತಾರತಮ್ಯ ಎಸಗುವ ಕ್ಷೇತ್ರ ಮರುವಿಂಗಡನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮಹಿಳಾ ಮೀಸಲು ಮಸೂದೆಯನ್ನು ರಕ್ಷಾ ಕವಚವಾಗಿ ಬಳಸಿಕೊಂಡಿತ್ತು. ಆದರೆ, ಕೇಂದ್ರದ ಈ ಪ್ರಯತ್ನ ಫಲ ಕೊಟ್ಟಿಲ್ಲ. ಆದ್ದರಿಂದ ಈಗ ಸೋತಿರುವುದು ಮೋದಿ ಸರ್ಕಾರವೇ ಹೊರತು ಮಹಿಳಾ ಮೀಸಲು ಮಸೂದೆಯಲ್ಲ, ಅದು 2023ರಲ್ಲೇ ಗೆದ್ದಿದೆ.

ದಕ್ಷಿಣ ಭಾರತಕ್ಕೆ ಅನ್ಯಾಯ ಎಸಗುವ ಕ್ಷೇತ್ರ ಮರು ವಿಂಗಡನೆಯನ್ನು ವಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದವು. ಆದರೆ, ಕೇಂದ್ರ ಸರ್ಕಾರ ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ತನ್ನ ಕಾರ್ಯ ಮುಂದುವರಿಸಿತ್ತು. ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಿಸಲು ಅವಕಾಶ ಮಾಡಿಕೊಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಅದಕ್ಕೆ ಸೋಲಾಗಿರುವುದರಿಂದ, ಇದರ ಜೊತೆಗೆ ಲೋಕಸಭೆಯಲ್ಲಿ ಮಂಡಿಸಿರುವ ಇನ್ನೆರಡು ಮಸೂದೆಗಳಾದ ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯನ್ನು ಮತಕ್ಕೆ ಹಾಕದೆ ಸುಮ್ಮನಾಗಿದೆ.

ಸಂವಿಧಾನದ 131ನೇ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದರೆ, ಹೊಸದಾಗಿ ‘ಕ್ಷೇತ್ರ ಮರು ವಿಂಗಡಣೆ ಆಯೋಗ’ವನ್ನು ಸ್ಥಾಪಿಸುವ ಕ್ಷೇತ್ರ ಮರು ವಿಂಗಡಣೆ ಮಸೂದೆ ಮತ್ತು ಮಹಿಳಾ ಮೀಸಲಾತಿಯನ್ನು ಕೇಂದ್ರಾಡಳಿತ ಪ್ರದೇಶಗಳಿಗೂ ವಿಸ್ತರಿಸುವ ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆಯೂ ಅಂಗೀಕಾಗೊಳ್ಳುತ್ತಿತ್ತು.

ಪ್ರಸ್ತುತ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಾಧ್ಯವಿಲ್ಲವೇ?

ಲೋಕಸಭೆಯಲ್ಲಿ ಪ್ರಸ್ತುತ ಇರುವ 543 ಕ್ಷೇತ್ರಗಳಲ್ಲೇ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡಲು ಸಾಧ್ಯವಿದೆ. ಆದರೆ, 2023ರಲ್ಲಿ ಅಂಗೀಕಾರಗೊಂಡ ‘ನಾರಿ ಶಕ್ತಿ ವಂದನ್ ಅಧಿನಿಯಮ’ (ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ) ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಎರಡು ಪ್ರಮುಖ ಷರತ್ತುಗಳನ್ನು ವಿಧಿಸಿದೆ.

ಅವುಗಳೆಂದರೆ, ಕಾಯ್ದೆ ಜಾರಿಗೆ ಬಂದ ನಂತರ ನಡೆಯುವ ಮೊದಲ ಜನಗಣತಿಯ ಅಂಕಿಅಂಶಗಳು ಪ್ರಕಟವಾಗಬೇಕು. ಆ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆಗಳ ಕ್ಷೇತ್ರಗಳ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಈ ಪ್ರಕ್ರಿಯೆಗಳು ಮುಗಿದ ನಂತರವಷ್ಟೇ ಮಹಿಳಾ ಮೀಸಲಾತಿ ಅಧಿಕೃತವಾಗಿ ಜಾರಿಗೆ ಬರುತ್ತದೆ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹಾಗಾಗಿ 2023ರ ಕಾಯ್ದೆ ಪ್ರಕಾರ, ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ತಾಂತ್ರಿಕವಾಗಿ ಸಾಧ್ಯವಿಲ್ಲ. ಈ ಷರತ್ತುಗಳು ಇಲ್ಲದಿದ್ದರೆ ಈಗ ಇರುವ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿ ನೀಡಲು ಸಾಧ್ಯವಿದೆ. ಹಾಗಾಗಿ, ಈ ಷರತ್ತುಗಳನ್ನು ತೆಗೆದು ಹಾಕಲು ವಿಪಕ್ಷಗಳು ಹೋರಾಡಬೇಕಿದೆ.

ಕೇಂದ್ರ ಸರ್ಕಾರ 2023ರ ಕಾಯ್ದೆಯಲ್ಲಿ ಹೊಸ ಜನಗಣತಿಯ ಅಂಕಿ ಅಂಶಗಳ ಷರತ್ತುಗಳನ್ನು ವಿಧಿಸಿದ್ದರೂ, ಅದು ತುಂಬಾ ವಿಳಂಬವಾಗುತ್ತದೆ. ಹಾಗಾಗಿ, 2011ರ ಜನಗಣತಿಯ ಅಂಕಿ ಅಂಶಗಳ ಮೇಲೆಯೇ ಮೀಸಲಾತಿ ನೀಡುತ್ತೇವೆ. ಹೀಗೆ ಮೀಸಲಾತಿ ನೀಡಲು ಕ್ಷೇತ್ರಗಳ ಮರುವಿಂಗಡನೆ ಅಗತ್ಯವಿದೆ. ಈ ಮರುವಿಂಗಡನೆಗೆ ಸಂವಿಧಾನದ 131ನೇ ತಿದ್ದುಪಡಿ ಅಗತ್ಯವಿದೆ ಎನ್ನುತ್ತಿದೆ. ವಾಸ್ತವಾಗಿ, ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ತರಲು ಕ್ಷೇತ್ರ ಮರುವಿಂಗಡನೆಯ ಅಗತ್ಯವೇ ಇಲ್ಲ. 2023ರ ಕಾಯ್ದೆಯಲ್ಲಿ ಷರತ್ತುಗಳಿದ್ದರೂ, ಅದನ್ನು ತಿದ್ದುಪಡಿ ತಂದು ತೆಗೆದು ಹಾಕಿದರಾಯಿತು. ಈಗ ಇರುವ ಸ್ಥಾನಗಳಲ್ಲೇ ಮಹಿಳಾ ಮೀಸಲಾತಿ ನೀಡಬಹುದು.

ವಿಪಕ್ಷಗಳು ಸಂವಿಧಾನದ 131ನೇ ತಿದ್ದುಪಡಿ ಮಸೂದೆ ವಿರೋಧಿಸಿದ್ದೇಕೆ?

ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನದ 131ನೇ ತಿದ್ದುಪಡಿ ಅಗತ್ಯ ಎಂದು ಕೇಂದ್ರ ಸರ್ಕಾರ ಹೇಳಿದರೂ, ಅದರ ಮುಖ್ಯ ಉದ್ದೇಶ ಕ್ಷೇತ್ರ ಮರು ವಿಂಗಡನೆಯಾಗಿದೆ.

ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರುಹಂಚಿಕೆ ಮಾಡಿದರೆ, ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ತೆಲಂಗಾಣದಂತಹ ದಕ್ಷಿಣದ ರಾಜ್ಯಗಳು ತಮ್ಮ ಲೋಕಸಭಾ ಸ್ಥಾನಗಳ ಅನುಪಾತವನ್ನು ಕಳೆದುಕೊಳ್ಳುತ್ತವೆ.

ಇದಕ್ಕೆ ಪ್ರತಿಯಾಗಿ, ಜನಸಂಖ್ಯೆ ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಸೀಟುಗಳು ಸಿಗುತ್ತವೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ವಿರೋಧ ಪಕ್ಷಗಳು ವಾದಿಸಿವೆ.

ವಿರೋಧ ಪಕ್ಷಗಳ ಪ್ರಕಾರ, ಸರ್ಕಾರವು ಮಹಿಳಾ ಮೀಸಲಾತಿಯನ್ನು “ಗುರಾಣಿ”ಯಾಗಿ ಬಳಸಿಕೊಂಡು ಕ್ಷೇತ್ರ ಮರು ವಿಂಗಡಣೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. 

ಮಹಿಳೆಯರಿಗೆ ಮೀಸಲಾತಿ ನೀಡಲು ನಮ್ಮ ವಿರೋಧವಿಲ್ಲ, ಆದರೆ ಅದನ್ನು ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಪ್ರಕ್ರಿಯೆಯೊಂದಿಗೆ ಬೆಸೆಯುವುದು ಸರಿಯಲ್ಲ ಎಂದು ವಿಪಕ್ಷಗಳು ಹೇಳಿವೆ.

ಈಗಿರುವ 543 ಸೀಟುಗಳಲ್ಲೇ ತಕ್ಷಣವೇ ಶೇಕಡ 33 ಮೀಸಲಾತಿ ಜಾರಿಗೊಳಿಸಲು ಸಾಧ್ಯವಿರುವಾಗ, 2029ರವರೆಗೆ ಕಾಯುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿವೆ.

ಜಾತಿ ಆಧಾರಿತ ಜನಗಣತಿಯ ಬೇಡಿಕೆ

ಮಹಿಳಾ ಮೀಸಲಾತಿಯೊಳಗೆ ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಒಳಮೀಸಲಾತಿ ಇರಬೇಕು ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಂತಹ ಪಕ್ಷಗಳು ಒತ್ತಾಯಿಸಿದ್ದವು. ಜಾತಿ ಗಣತಿ ನಡೆಸದೆ ಈ ಮೀಸಲಾತಿ ಜಾರಿಗೊಳಿಸುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದು ಎಂಬುದು ಅವರ ನಿಲುವು.

ಸರ್ಕಾರವು 2011ರ ಹಳೆಯ ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರು ವಿಂಗಡನೆ ಮಾಡಲು ಹೊರಟಿರುವುದನ್ನು ವಿರೋಧ ಪಕ್ಷಗಳು ಪ್ರಶ್ನಿಸಿವೆ. ಸದ್ಯ ಹೊಸ ಜನಗಣತಿ ಪ್ರಕ್ರಿಯೆ ನಡೆಯುತ್ತಿರುವಾಗ, ಅವಸರವಸರವಾಗಿ ಹಳೆಯ ದತ್ತಾಂಶ ಬಳಸುವುದು ವೈಜ್ಞಾನಿಕವಲ್ಲ ಎಂದು ಅವರು ವಾದಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಮಸೂದೆಯನ್ನು “ಭಾರತದ ಚುನಾವಣಾ ಭೂಪಟವನ್ನು ಬದಲಿಸುವ ಮತ್ತು ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ” ಎಂದು ಕರೆದಿದ್ದಾರೆ. ಇದು ಪ್ರಾದೇಶಿಕ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುತ್ತದೆ ಎಂಬುದು ಅವರ ಪ್ರಬಲ ಆರೋಪವಾಗಿತ್ತು.

ಒಟ್ಟಾರೆಯಾಗಿ, ಲೋಕಸಭೆಯಲ್ಲಿ ಸೋಲಾಗಿದ್ದು ಕ್ಷೇತ್ರ ಮರುವಿಂಗಡನೆಗೆ ಅನುವು ಮಾಡಿಕೊಡುವ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗಾಗಿದೆ. ಮಹಿಳಾ ಮೀಸಲಾತಿ ಮಸೂದೆ 2023ರಲ್ಲೇ ಕಾನೂನಾಗಿದೆ. ಅದನ್ನು ಜಾರಿಗೊಳಿಸಲು ಕ್ಷೇತ್ರ ಮರುವಿಂಗಡನೆಯ ಅಗತ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...